ವಿಷಯಕ್ಕೆ ಹೋಗಿ

*ಜ್ಞಾನ ಕಾರಂಜಿ* ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?

ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನ ನಿಗದಿಯಾಗಿದೆ. ಮೇ 12ಕ್ಕೆ ಮತದಾನ, ಮೇ 15ಕ್ಕೆ ಮತ ಎಣಿಕೆ ಎಂಬುದು ಘೋಷಣೆಯಾದ ದಿನಾಂಕ. ಇನ್ನು ಮಾರ್ಚ್ 27ರಿಂದ (ಮಂಗಳವಾರ) ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಎಂಬುದು ತುಂಬ ಕಟ್ಟುನಿಟ್ಟಾದದ್ದು.
ಚುನಾವಣೆ ನೀತಿ ಸಂಹಿತೆ ಅಂದರೆ ತುಂಬ ಕಟ್ಟುನಿಟ್ಟಾದ, ಕಠಿಣವಾದ ವಿಚಾರ ಎಂಬುದು ಬಹುತೇಕರಿಗೆ ತಿಳಿದಿರುತ್ತದೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ಏನಿದು ಚುನಾವಣೆ ನೀತಿ ಸಂಹಿತೆ ಎಂಬುದನ್ನು ಸಂಕ್ಷಿಪ್ತವಾಗಿ ವಿವರಿಸುವ ಪ್ರಯತ್ನ ಇದು. ರಾಜಕಾರಣಿಗಳು ಏನು ಮಾಡಬಹುದು, ಏನು ಮಾಡಬಾರದು ಎಂಬುದರ ಸಂಕ್ಷಿಪ್ತ ವಿವರಣೆ.
ಅಂದ ಹಾಗೆ ಜನ ಸಾಮಾನ್ಯರ ಹಣಕಾಸು ವ್ಯವಹಾರದಲ್ಲೂ ಈ ಚುನಾವಣೆ ಪರಿಣಾಮ ಬೀರುವುದು ಸತ್ಯ. ಅಧಿಕ ಮೊತ್ತದ ನಗದು ತೆಗೆದುಕೊಂಡು ಹೋಗುವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ಚುನಾವಣಾಧಿಕಾರಿಗಳು ಯಾವ ಮುಲಾಜು ನೋಡದೆ ಕಾರ್ಯ ನಿರ್ವಹಿಸುತ್ತಾರೆ ಎಂಬುದು ನಿರೀಕ್ಷೆ. ಇರಲಿ ಅಷ್ಟರಲ್ಲಿ ಚುನಾವಣೆ ನೀತಿ ಸಂಹಿತೆ ಬಗ್ಗೆ ತಿಳಿದುಕೊಂಡು ಬಿಡಿ.
ಹೊಸ ಯೋಜನೆ, ವಿನಾಯಿತಿ ಘೋಷಣೆ ಮಾಡುವಂತಿಲ್ಲ
ಚುನಾವಣೆ ನೀತಿ ಸಂಹಿತೆ ಜಾರಿ ಆದ ಮೇಲೆ ಸರಕಾರದಿಂದ ಯಾವುದೇ ಯೋಜನೆ ಅಥವಾ ಕಾರ್ಯಕ್ರಮ ಅಥವಾ ವಿನಾಯಿತಿ ಅಥವಾ ಭರವಸೆ ಯಾವುದೇ ರೀತಿಯಲ್ಲಿ ಘೋಷಣೆ ಮಾಡುವಂತಿಲ್ಲ. ಶಂಕುಸ್ಥಾಪನೆ ಮುಂತಾದವು ಮಾಡುವಂತಿಲ್ಲ. ಮತದಾರರ ಮೇಲೆ ಒಂದು ಪಕ್ಷಕ್ಕೆ ಒಲವು ಮೂಡುವಂಥದ್ದನ್ನು ಮಾಡುವಂತಿಲ್ಲ.
ಅಧಿಕಾರಿಗಳು ಪಾಲ್ಗೊಳ್ಳಬಹುದು, ರಾಜಕಾರಣಿಗಳಿಗೆ ನಿಷಿದ್ಧ
ಈ ಮಿತಿಗಳು ಹೊಸ ಯೋಜನೆ ಹಾಗೂ ಅದಾಗಲೇ ನಡೆಯುತ್ತಿರುವ ಯೋಜನೆಗಳಿಗೆ ಅನ್ವಯಿಸುತ್ತದೆ. ಆದರೆ ಇದು ರಾಷ್ತ್ರೀಯ, ಪ್ರಾದೇಶಿಕ ಹಾಗೂ ರಾಜ್ಯದ ಜನೋಪಯೋಗಿ ಯೋಜನೆಗಳು, ಮುಕ್ತಾಯ ಹಂತದ ಯೋಜನೆಗಳು, ಸಾರ್ವಜನಿಕ ಹಿತಾಸಕ್ತಿ ಯೋಜನೆಗಳು ನಿಲ್ಲಿಸಬೇಕು ಅಥವಾ ತಡ ಮಾಡಬೇಕು ಅಂತಲ್ಲ. ಇಂಥ ಯೋಜನೆಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬಹುದೇ ವಿನಾ ರಾಜಕಾರಣಿಗಳು ಭಾಗವಹಿಸುವಂತಿಲ್ಲ. ಪಕ್ಷದ ಅಭಿಮಾನಿಗಳು, ಕಾರ್ಯಕ್ರಮಗಳು ಅಧಿಕಾರದಲ್ಲಿರುವ ಪಕ್ಷಕ್ಕೆ ಅನುಕೂಲ ಆಗುವಂತೆ ಮಾಡುವಂತಿಲ್ಲ.
ಬಜೆಟ್ ನಲ್ಲಿ ಘೋಷಣೆ ಆಗಿದ್ದ ಯೋಜನೆಗಳಿಗೆ ಅಡ್ಡಿ ಇಲ್ಲ
ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಗಳು, ನೀತಿ ಸಂಹಿತೆ ಜಾರಿಗೆ ಮುನ್ನವೇ ಘೋಷಣೆಯಾದ ಯೋಜನೆಗಳನ್ನು ಚುನಾವಣೆ ನೀತಿ ಸಂಹಿತ ಘೋಷಣೆ ಆದ ಮೇಲೂ ಕೈಗೆತ್ತಿಕೊಳ್ಳಲು ಯಾವುದೇ ತಡೆ ಇಲ್ಲ. ಆದರೆ ಅದು ಮತದಾರರನ್ನು ಸೆಳೆಯುವ ಉದ್ದೇಶದಿಂದ ಕೈಗೊಂಡಿದ್ದಾಗಿರಬಾರದು.
ಹೊಸದಾಗಿ ಸರಕಾರಿ ಯೋಜನೆಗಳಿಗೆ ಅನುದಾನಗಳನ್ನು ನೀಡುವಂತಿಲ್ಲ
ಹೊಸದಾಗಿ ಸರಕಾರಿ ಯೋಜನೆಗಳಿಗೆ ಅನುದಾನಗಳನ್ನು ನೀಡುವಂತಿಲ್ಲ. ಸಚಿವರು ಯೋಜನೆಗಳ ಪರಿಶೀಲನೆ ಮಾಡುವುದು ಕೂಡ ನಿಷಿದ್ಧ. ಅನುಕೂಲ ನೀಡುವ ಯೋಜನೆಗಳು ಅದು ಸದ್ಯಕ್ಕೆ ಚಾಲ್ತಿಯಲ್ಲಿದ್ದರೂ ಅವುಗಳನ್ನು ಚುನಾವಣೆ ಪೂರ್ಣಗೊಳ್ಳುವವರೆಗೆ ನಿಲ್ಲಿಸಬೇಕಾಗುತ್ತದೆ. ಹೊಸದಾಗಿ ಕಲ್ಯಾಣ ಯೋಜನೆಗಳಿಗೆ ಹಣಕಾಸು ಬಿಡುಗಡೆ ಮಾಡುವಂತಿಲ್ಲ. ಚುನಾವಣೆ ಆಯೋಗದ ಒಪ್ಪಿಗೆ ಇಲ್ಲದೆ ರಾಜ್ಯದ ಯಾವುದೇ ಭಾಗದಲ್ಲಿ ಕಾಮಗಾರಿ ನೀಡುವಂತಿಲ್ಲ. ಸಂಸದರ ನಿಧಿ (ರಾಜ್ಯಸಭಾ ಸದಸ್ಯರೂ ಒಳಗೊಂಡಂತೆ), ಶಾಸಕರು/ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹೀಗೆ ರಾಜ್ಯದಲ್ಲಿ ಯಾವುದೇ ಕಾರ್ಯ ಚಟುವಟಿಕೆಗೆ ಇದು ಅನ್ವಯ ಆಗುತ್ತದೆ.
ಈಗಾಗಲೇ ಆರಂಭವಾದ ಕೆಲಸಕ್ಕೆ ಅಡ್ಡಿಯಿಲ್ಲ
* ವರ್ಕ್ ಆರ್ಡರ್ ನೀಡಿದ್ದರೂ ಇನ್ನೂ ಕಾಮಗಾರಿ ಶುರುವಾಗಿಲ್ಲ ಅನ್ನೋದಾದರೆ ಈಗ ಯಾವುದೇ ಕೆಲಸವನ್ನು ಶುರು ಮಾಡುವಂತಿಲ್ಲ. ಚುನಾವಣೆ ಪ್ರಕ್ರಿಯೆ ಪೂರ್ತಿಗೊಂಡ ಮೇಲಷ್ಟೇ ಮಾಡಬೇಕು. ಒಂದು ವೇಳೆ ಕೆಲಸ ಆರಂಭವಾಗಿದ್ದಲ್ಲಿ ಮುಂದುವರಿಸಬಹುದು.
* ಕಾಮಗಾರಿಗಳು ಪೂರ್ಣಗೊಂಡಿದ್ದಲ್ಲಿ, ಆ ಬಗ್ಗೆ ಅಧಿಕಾರಿಗಳು ಸಂಪೂರ್ಣ ತೃಪ್ತರಾಗಿದ್ದಲ್ಲಿ ಹಣ ಬಿಡುಗಡೆ ಮಾಡಬಹುದು.
* ಬರ, ಪ್ರವಾಹದಂತಹ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದಂಥ ಪರಿಹಾರ ಮಂಜೂರಾತಿಗೆ ಯಾವುದೇ ಅಡೆತಡೆ ಇಲ್ಲ. ಇನ್ನು ಹಿರಿಯರು, ಅಶಕ್ತರ ಸಲುವಾಗಿ ರೂಪಿಸಿದ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಹಣ ಮಂಜೂರಾತಿಗೆ ಮುಂಚೆ ಚುನಾವಣೆ ಆಯೋಗದ ಒಪ್ಪಿಗೆ ಪಡೆಯಬೇಕಾಗುತ್ತದೆ.
ಅಧಿಕಾರಿಗಳ ವರ್ಗಾವಣೆ ಮೇಲೆ ಕೆಲ ನಿರ್ಬಂಧ
* ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಹೊರತುಪಡಿಸಿ ಇನ್ಯಾವುದೇ ವರ್ಗಾವಣೆಗಳನ್ನು ಮಾಡುವಂತಿಲ್ಲ. ಚುನಾವಣೆ ಆಯೋಗದ ಒಪ್ಪಿಗೆ ಇಲ್ಲದೆ ಯಾವುದೇ ನೇಮಕಾತಿ, ಬಡ್ತಿಯನ್ನು ಸರಕಾರಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಮಾಡುವಂತಿಲ್ಲ. ಚುನಾವಣೆ ಪ್ರಕ್ರಿಯೆ ಪೂರ್ಣ ಆಗುವವರೆಗೆ ಇದು ಅನ್ವಯ
* ಕೇಂದ್ರ ಸರಕಾರ, ರಾಜ್ಯ ಸರಕಾರ, ಸಾರ್ವಜನಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆ, ಸ್ಥಳೀಯ ಸಂಸ್ಥೆ ಹೀಗೆ ಇಷ್ಟುದ್ದ ಪಟ್ಟಿ ಮಾಡಿರುವ ಸಂಸ್ಥೆಗಳ ಅಧಿಕಾರಿಗಳ ವಾಹನವನ್ನು ಚುನಾವಣೆ ಕೆಲಸಗಳಿಗೆ ಬಳಸುವಂತಿಲ್ಲ.
* ಇದು ರಾಜ್ಯ ಹಾಗೂ ಕೇಂದ್ರ ಸಚಿವರಿಗೂ ಅನ್ವಯ ಆಗುತ್ತದೆ. ಖಾಸಗಿ ಭೇಟಿಗಳಿಗೆ ಅವರ ಖಾಸಗಿ ವಾಹನ ಬಳಸಬಹುದು. ಅಂಥ ಭೇಟಿ ವೇಳೆ ಖಾಸಗಿ ಸಿಬ್ಬಂದಿ ಜತೆಯಲ್ಲಿ ಇರುವಂತಿಲ್ಲ. ತುರ್ತು ಸಂದರ್ಭದಲ್ಲಿ ಅಧಿಕೃತ ಕಾರಣಗಳಿಗಾಗಿ ಮುಖ್ಯಸ್ಥಾನದಿಂದ ಪ್ರಯಾಣ ಮಾಡುತ್ತಿದ್ದರೆ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಅಂಥವರನ್ನು ತಡೆಯುವಂತಿಲ್ಲ. ಯಾವುದೇ ರಾಜಕಾರಣಿ ರಾಜಕೀಯ ಚಟುವಟಿಕೆಯನ್ನು ಸರಕಾರಿ ಜವಾಬ್ದಾರಿಗಳೊಂದಿಗೆ ಸೇರಿಸುವಂತಿಲ್ಲ.
ಸರಕಾರಿ ವಾಹನ ಬಳಕೆಗೆ ನಿಯಮಗಳಿವೆ
* ತುರ್ತು ಸಂದರ್ಭ ಹೊರತು ಪಡಿಸಿ, ಕೇಂದ್ರ ಅಥವಾ ರಾಜ್ಯದ ಸಚಿವರು ಚುನಾವಣೆ ಕರ್ತವ್ಯನಿರತ ಅಧಿಕಾರಿಗಳನ್ನು ಕರೆಸಿ ಸಭೆ ಮತ್ತೊಂದು ನಡೆಸುವಂತಿಲ್ಲ.
* ಸಚಿವರಿಗೆ ನೀಡುವ ವಾಹನವನ್ನು ಅಧಿಕೃತ ನಿವಾಸ ಹಾಗೂ ಕಚೇರಿ ಮಧ್ಯದ ಪ್ರಯಾಣಕ್ಕೆ ಮಾತ್ರ ಬಳಸಬೇಕು. ಬೇರೆ ಯಾವುದೇ ರಾಜಕೀಯ ಚಟುವಟಿಕೆಗೆ ಬಳಸುವಂತಿಲ್ಲ.
* ಬೆಂಗಾವಲು ವಾಹನವನ್ನು, ಶಬ್ದ ಬರುವಂಥ ಸಾಧನವನ್ನು, ವಾಹನಗಳನ್ನು ಯಾವುದೇ ರಾಜಕೀಯ ಚಟುವಟಿಕೆಗಳಿಗೆ ಬಳಸಬಾರದು.
* ಯಾವುದೇ ಅಧಿಕಾರಿಯು ಸಚಿವರನ್ನು ಖಾಸಗಿ ಭೇಟಿ ಮಾಡುವಂತಿಲ್ಲ
[* ಸರಕಾರಿ ಹಣದಲ್ಲಿ ಜಾಹೀರಾತು ನೀಡುವಂತಿಲ್ಲ. ಪೋಸ್ಟರ್, ಬಂಟಿಂಗ್ಸ್ ಬಳಸುವಂತಿಲ್ಲ, ರಾತ್ರಿ ಹತ್ತು ಗಂಟೆ ನಂತರ ಬೆಳಗ್ಗೆ ಆರರವರೆಗೆ ಮೈಕ್ ಬಳಸುವಂತಿಲ್ಲ. ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಸಭೆಗಳನ್ನು ನಡೆಸುವಂತಿಲ್ಲ. ಹೀಗೆ ಪಟ್ಟಿ ಬೆಳೆಯುತ್ತಾ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....