ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪುಲಿಟ್ಜರ್‌ ಪ್ರಶಸ್ತಿ 2018



ನ್ಯೂಯಾರ್ಕ್: 2018ನೇ ಸಾಲಿನ ಪ್ರತಿಷ್ಠಿತ ಪುಲಿಟ್ಜರ್ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸೇವಾ ವಿಭಾಗದ ಪ್ರಶಸ್ತಿಗೆ ನ್ಯೂ ಯಾರ್ಕ್ಟೈಮ್ಸ್ಪತ್ರಿಕೆ ಮತ್ತು ದಿ ನ್ಯೂ ಯಾರ್ಕರ್ಮ್ಯಾಗಜೀನ್ಆಯ್ಕೆಯಾಗಿವೆ.
ಇಲ್ಲಿನ ಕೊಲಂಬಿಯಾ ವಿ.ವಿ.ಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಪತ್ರಿಕೋದ್ಯಮದ ವರದಿಗಾರಿಕೆ, ಛಾಯಾಚಿತ್ರ, ವಿಮರ್ಶೆ, ವಿಶ್ಲೇಷಣೆ ಸೇರಿ 14 ವಿಭಾಗಗಳಲ್ಲಿ ಹಾಗೂ ಕಾದಂಬರಿ, ನಾಟಕ, ಸಂಗೀತ ಸೇರಿ ಕಲೆಗೆ ಸಂಬಂಧಿಸಿದ 7 ವಿಭಾಗಗಳಲ್ಲಿ ಪುಲಿಟ್ಜರ್ಪ್ರಶಸ್ತಿ ನೀಡಲಾಗುತ್ತಿದೆ.

2016ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ಟ್ರಂಪ್ಪ್ರಚಾರ ಕಾರ್ಯಕ್ಕೂ ರಷ್ಯಾ ಅಧಿಕಾರಗಳಿಗೂ ಇರುವ ನಂಟಿನ ಗುಟ್ಟಿನ ಮೇಲೆ ವರದಿಗಳ ಮೂಲಕ ಬೆಳಕು ಹರಿಸಿದ ದಿ ನ್ಯೂ ಯಾರ್ಕ್ಟೈಮ್ಸ್ಮತ್ತು ದಿ ವಾಷಿಂಗ್ಟನ್ಪೋಸ್ಟ್ರಾಷ್ಟ್ರೀಯ ವರದಿ ಪ್ರಶಸ್ತಿಗೆ ಪಾತ್ರವಾಗಿವೆ.
ವರ್ಜಿನಿಯಾದ ಚಾರ್ಲೊಟ್ಟೆಸ್ವಿಲ್ಲೆಯಲ್ಲಿ ಬಿಳಿಯರ ಪಾರಮ್ಯ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಮೇಲೆ ಕಾರೊಂದು ಹರಿದ ಚಿತ್ರವನ್ನು ರ್ಯಾನ್ ಕೆಲ್ಲಿ ಸೆರೆಹಿಡಿದಿದ್ದರು. ಚಿತ್ರವನ್ನು ಸ್ಫೋಟಕ ಸುದ್ದಿಯ ಫೋಟೋಗ್ರಫಿ ವಿಭಾಗದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಸಾವಿಗೀಡಾಗಿದ್ದರು ಹಾಗೂ 19 ಮಂದಿ ಗಾಯಗೊಂಡಿದ್ದರು.
ಮುದ್ರಣ ಪತ್ರಿಕೋದ್ಯಮದ ಸ್ವರೂಪವನ್ನೇ ಬದಲಿಸಿದ ದೂರದೃಷ್ಟಿಯ ಪ್ರಕಾಶಕ ಎನಿಸಿದ ಹಾಗೂ ಸೇಂಟ್ ಲೂಯಿಸ್ ಪೋಸ್ಟ್ ಡಿಸ್ಪ್ಯಾಚ್ ಮತ್ತು ನ್ಯೂಯಾರ್ಕ್ ವರ್ಲ್ಡ್ ಪ್ರತಿಕೆಗಳನ್ನು ಪ್ರಕಟಿಸಿದ ಜೋಸೆಫ್ ಪುಲಿಟ್ಜರ್ನೆನಪಿಗೆ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿಗಳನ್ನು 1917 ರಿಂದ ನೀಡಲಾಗುತ್ತಿದೆ.
ಪ್ರಶಸ್ತಿ ಪಟ್ಟಿಯಲ್ಲಿ ಕೆಲವು:
* ಬ್ರೇಕಿಂಗ್ನ್ಯೂಸ್‌- ಪ್ರೆಸ್ಡೆಮೋಕ್ರಾಟ್‌ (ಸಾಂತಾ ರೋಸಾದಲ್ಲಿನ ಕಾಳ್ಗಿಚ್ಚು ಕುರಿತ ವರದಿ)‌
* ವ್ಯಾಖ್ಯಾನ/ವಿವರಣೆಜಾನ್ಆರ್ಕಿಬಾಲ್ಡ್‌ (ಅಲಬಾಮಾ ಅಂಕಣಕಾರ)
* ಸ್ಥಳೀಯ ವರದಿಗಾರಿಕೆಸಿನ್ಸಿನ್ನಾಟಿ ಎನ್ಕ್ವೈರರ್ಪತ್ರಿಕೆ
(2017ರಲ್ಲಿ ಮ್ಯಾನ್ಮಾರ್ಗಡಿ ದಾಟುವ ಸಮಯದಲ್ಲಿ ಮೊಹಮ್ಮದ್ಶೋಯಬ್‌(7) ಎದೆಯ ಭಾಗ ಸೀಳಿದ್ದ ಗುಂಡು. ಬಾಂಗ್ಲಾದೇಶದ ಆಸ್ಪತ್ರೆಯ ಹೊರಭಾಗದಲ್ಲಿ ಮೊಹಮ್ಮದ್ ತಂದೆ ಎದೆಯ ಮೇಲೆ ಕೈ ಇಟ್ಟಿರುವುದುಚಿತ್ರ: ರಾಯ್ಟರ್ಸ್‌ )
* ಅಂತರರಾಷ್ಟ್ರೀಯ ವರದಿಗಾರಿಕೆರಾಯ್ಟರ್ಸ್
* ಫೋಟೋಗ್ರಫಿರಾಯ್ಟರ್ಸ್
* ಸಂಗೀತರ್ಯಾಪ್ಸಂಗೀತಗಾರ ಕೆಂಡ್ರಿಕ್ಲ್ಯಾಮರ್‌ (ಡ್ಯಾಮ್ಆಲ್ಬಮ್‌)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...