ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಚಿಲ್ಲರೆ ವ್ಯಾಪಾರ ರಾಷ್ಟ್ರೀಯ ನೀತಿ

ಚಿಲ್ಲರೆ ವ್ಯಾಪಾರವು ವ್ಯವಸ್ಥಿತ ರೀತಿಯಲ್ಲಿ ತ್ವರಿತ ಬೆಳವಣಿಗೆ ದಾಖಲಿಸುವ ಉದ್ದೇಶದಿಂದ ರಾಷ್ಟ್ರೀಯ ನೀತಿ ರೂಪಿಸಲು ಕೇಂದ್ರ ಸರ್ಕಾರ ಆಲೋಚಿಸುತ್ತಿದೆ.
ಈ ಸಂಬಂಧ ಕಾರ್ಯಪಡೆ ರಚಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಗ್ರಾಹಕ ವ್ಯವಹಾರ ಸಚಿವಾಲಯದ ಗಮನ ಸೆಳೆದಿದೆ. ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಅವರು, ಗ್ರಾಹಕ ವ್ಯವಹಾರ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ಅವರಿಗೆ ಪತ್ರ ಬರೆದಿದ್ದಾರೆ.
ಕಾರ್ಯಪಡೆಯಲ್ಲಿ  ವಿವಿಧ ಭಾಗಿದಾರರಿಗೆ ಪ್ರಾತಿನಿಧ್ಯ ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಚಿಲ್ಲರೆ (ರಿಟೇಲ್‌) ವ್ಯಾಪಾರವು ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಗ್ರಾಹಕರ ಹಿತಾಸಕ್ತಿ ಬಲಿಗೊಡದೆ ವ್ಯಾಪಾರ ಉತ್ತೇಜಿಸುವ ರೀತಿಯಲ್ಲಿ ಹೊಸ ನೀತಿ ರೂಪಿಸಬೇಕಾಗಿದೆ. ವ್ಯಾಪಾರ ನಿಯಂತ್ರಣ ವಿಷಯದಲ್ಲಿ ಗ್ರಾಹಕರ ವ್ಯವಹಾರ ಸಚಿವಾಲಯವು ಸಮನ್ವಯ  ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಗ್ರಾಹಕರ ವ್ಯವಹಾರಗಳ ಸಚಿವಾಲಯವು ಈಗಾಗಲೇ ಇ–ವಾಣಿಜ್ಯ (ಅಂತರ್ಜಾಲ ವಹಿವಾಟು) ನಿಯಂತ್ರಣದ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಈ ಹಂತದಲ್ಲಿ ರಿಟೇಲ್‌ ವ್ಯಾಪಾರಕ್ಕೂ ಪ್ರತ್ಯೇಕ ನೀತಿ ರೂಪಿಸುವುದು ಸೂಕ್ತವಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ರಾಷ್ಟ್ರೀಯ ನೀತಿ ರೂಪಿಸಲು ಮತ್ತು ಆಂತರಿಕ ವ್ಯಾಪಾರಕ್ಕೆ ಪ್ರತ್ಯೇಕ  ಸಚಿವಾಲಯ ಆರಂಭಿಸಲು ಅಖಿಲ ಭಾರತ ವರ್ತಕರ ಒಕ್ಕೂಟವು (ಸಿಎಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದರಿಂದ ಈ ವಿಷಯಕ್ಕೆ ಮಹತ್ವ ಬಂದಿದೆ.
ಈ ಕ್ರಮಗಳನ್ನು ಜಾರಿಗೆ ತಂದರೆ, ಆಂತರಿಕ ವ್ಯಾಪಾರ – ವಹಿವಾಟು ಬಲಗೊಳ್ಳುವುದಲ್ಲದೆ, ದೇಶದ ರಫ್ತು ವಹಿವಾಟಿನಲ್ಲಿ ಸುಧಾರಣೆ ಕಂಡು ಬರಲಿದೆ. ಹೊಸ ನೀತಿ ರೂಪಿಸುವಾಗ ವಾಣಿಜ್ಯ ಸಚಿವಾಲಯವು ರಾಜ್ಯ ಸರ್ಕಾರಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ.
ದೇಶದಾದ್ಯಂತ ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ 6.5 ಕೋಟಿ ಸಣ್ಣ ವ್ಯಾಪಾರಿಗಳು ತೊಡಗಿಕೊಂಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....