ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಣ್ವಸ್ತ್ರ ಮುಕ್ತ–ಶಾಂತಿ ಸ್ಥಾಪನೆಗೆ ಬದ್ಧ



1.       ಮಾತುಕತೆಗೆ ಗಡಿ ದಾಟಿ ದಕ್ಷಿಣ ಕೊರಿಯಾಕ್ಕೆ ಐತಿಹಾಸಿಕ ಭೇಟಿ ನೀಡಿದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌
.
ಸೋಲ್‌(ದಕ್ಷಿಣ ಕೊರಿಯಾ): ಉತ್ತರ ಕೊರಿಯಾ ಅಧ್ಯಕ್ಷ ಅಧ್ಯಕ್ಷ ಕಿಮ್ ಜಾಂಗ್ ಉನ್‌ ಅವರು ತಮ್ಮ ಗಡಿ ದಾಟುವ ಮೂಲಕ ಮೊದಲ ಬಾರಿಗೆ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್‌ ಜೇಇನ್‌ ಅವರನ್ನು ಭೇಟಿ ಮಾಡಿದ್ದಾರೆ.
1950–1953ರಲ್ಲಿ ನಡೆದ ಕೊರಿಯಾ ಯುದ್ಧದ ಬಳಿಕ ಉತ್ತರ ಕೊರಿಯಾ ನಾಯಕರೊಬ್ಬರು ಇಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಹಾಗೂ ಐತಿಹಾಸಿಕವೂ ಆಗಿದೆ.
ಕಿಮ್ ಜಾಂಗ್ ಉನ್‌ ಮತ್ತು ಮೂನ್‌ ಜೇಇನ್‌ ಅವರು ಉಭಯ ದೇಶಗಳ ಮಿಲಿಟರಿ ನಿಷೇಧಿತ ಗಡಿ ಪ್ರದೇಶದಲ್ಲಿ ಭೇಟಿಯಾಗಿದ್ದಾರೆ.
ಪನ್ಮುಂಜೊಮ್‌ನಲ್ಲಿ ಐತಿಹಾಸಿಕ ಅಂತರ ಕೊರಿಯಾ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಸ್ಥಳೀಯ ಕಾಲಮಾನ ಬೆಳಿಗ್ಗೆ 10.30ಕ್ಕೆ ಮಾತುಕತೆ ನಡೆಸಲಿದ್ದಾರೆ.
ಕೊರಿಯಾ ಶೃಂಗಸಭೆ ನಡೆಯುವ ಪೀಸ್ ಹೌಸ್‌ಪ್ರವೇಶಿಸಿದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ಅವರು ಒಂದು ಹೊಸ ಇತಿಹಾಸ ಪ್ರಾರಂಭವಾಗುತ್ತದೆಮತ್ತು ಶಾಂತಿ ಮರು ಸ್ಥಾಪನೆಗೆ ಐತಿಹಾಸಿಕ ಮುನ್ನುಡಿಎಂದು ಅತಿಥಿ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಸಿಎನ್‌ಎನ್‌ ವರದಿಮಾಡಿದೆ.

2.       ಅಣ್ವಸ್ತ್ರ ಮುಕ್ತಶಾಂತಿ ಸ್ಥಾಪನೆಗೆ ಬದ್ಧ.
3.       ಗೊಯಾಂಗ್ (ದಕ್ಷಿಣ ಕೊರಿಯಾ) (ಎಎಫ್‌ಪಿ): ಸಂಪೂರ್ಣ ಅಣ್ವಸ್ತ್ರನಿಶಸ್ತ್ರೀಕರಣ ಮತ್ತು ವಿಭಜಿತ ಪರ್ಯಾಯ ದ್ವೀಪದಲ್ಲಿ ಕಾಯಂ ಶಾಂತಿ ಮರು ಸ್ಥಾಪಿಸಲು ಬದ್ಧವಾಗಿರುವುದಾಗಿ ಉತ್ತರ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳ ನಾಯಕರು ಶುಕ್ರವಾರ ಘೋಷಿಸಿದರು.
4.       ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್‌ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜೇಇನ್‌ ಅವರು ಉಭಯ ದೇಶಗಳ ಸೇನಾ ನಿಷೇಧಿತ ಗಡಿ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಭೇಟಿಯಾದರು. ದ್ವೇಷ ಮರೆತು, ಪರಸ್ಪರ ಸ್ನೇಹದ ಹಸ್ತಲಾಘವ ನೀಡಿ, ಆಲಂಗಿಸಿಕೊಂಡರು. ಮೊದಲ ಬಾರಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
5.       ಕಿಮ್‌ ಅವರು ಗಡಿ ದಾಟಿ ಬರುತ್ತಿದ್ದಂತೆ ನಗುಮೊಗ ಬೀರಿದ ಮೂನ್‌ ಜೆ ಇನ್‌ ಅವರು ನಿಮ್ಮನ್ನು ಭೇಟಿ ಮಾಡಲು ಬಹಳ ಸಂತಸವಾಗುತ್ತಿದೆಎಂದು ಸ್ವಾಗತಿಸಿದರು.
6.       1950-53ರ ಕೊರಿಯಾ ಯುದ್ಧದ ಬಳಿಕ ಮೊದಲ ಬಾರಿಗೆ ಉತ್ತರ ಕೊರಿಯಾ ನಾಯಕರೊಬ್ಬರು ವೈಷಮ್ಯ ಮರೆತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದರು. ಇದರಿಂದ ಎರಡೂ ರಾಷ್ಟ್ರಗಳ ನಡುವಿನ ಹಲವು ದಶಕಗಳ ಕಾಲದ ದ್ವೇಷ ಮತ್ತು ಅಣ್ವಸ್ತ್ರಗಳ ದಾಳಿ ಭೀತಿಗೆ ತೆರೆ ಬಿದ್ದಂತಾಗಿದೆ.
7.       ಪನ್ಮುಂಜೊಮ್‌ನಲ್ಲಿ ಆರಂಭವಾದ ಐತಿಹಾಸಿಕ ಅಂತರ ಕೊರಿಯಾ ಶೃಂಗಸಭೆಗೆ ಈ ಇಬ್ಬರು ನಾಯಕರು ಪರಸ್ಪರ ಕೈಹಿಡಿದುಕೊಂಡು ಪೀಸ್ ಹೌಸ್‌ವರೆಗೂ ಜೊತೆಯಾಗಿ ನಡೆದರು.‌
8.       ಹಿಂದೆ ಮಾಡಿಕೊಳ್ಳಲಾದ ಎರಡು ರಾಷ್ಟ್ರಗಳ ನಡುವಣ ಒಪ್ಪಂದದ ಹೊರತಾಗಿಯೂ ನಡೆದಿರುವ ತಪ್ಪುಗಳು ಪುನಃ ಮರುಕಳಿಸಲಾರವು. ಶೃಂಗಸಭೆಯ ನಂತರ ಹೊಸ ಅಧ್ಯಾಯ ಆರಂಭವಾಗಲಿದೆ. ಶಾಂತಿಯುತ ರಾಷ್ಟ್ರಗಳಾಗಿ ಹೊರಹೊಮ್ಮುವ ವಿಶ್ವಾಸ ನಮಗಿದೆಎಂದು ಉಭಯ ನಾಯಕರು ಹೇಳಿದರು.
9.       ಇರುವೆಯೂ ನುಸುಳದ ಭದ್ರತೆ
10.   ಸೋಲ್‌ (ಎಎಫ್‌ಪಿ): ಸಮೀಪಕ್ಕೆ ಒಂದು ಇರುವೆಯೂ ನುಸುಳಲು ಸಾಧ್ಯವಾಗದಂತಹ ಬಿಗಿ ಭದ್ರತೆಯನ್ನು ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ಅವರಿಗೆ  ಒದಗಿಸಲಾಗಿತ್ತು.
11.   ಕೊರಿಯಾ ಗಡಿ ದಾಟಿ ಬರುವಾಗ ಕಿಮ್‌ ಅವರಿಗೆ 12ಕ್ಕೂಹೆಚ್ಚು ಅಂಗರಕ್ಷರು, ಸಮರ ಕಲೆ ಪರಿಣಿತರು ಹಾಗೂ ಭದ್ರಾ ಸಿಬ್ಬಂದಿ ಬಿಗಿ ಭದ್ರತೆಯ ಕೋಟೆ ನಿರ್ಮಿಸಿದ್ದರು.
12.   ವಿದೇಶಿಗರು ಭೇಟಿ ನೀಡುವಾಗ ಅನುಸರಿಸುವ ತಪಾಸಣೆ ಪ್ರಕ್ರಿಯೆಯನ್ನು ಕಿಮ್‌ ಕೂಡ ಪಾಲಿಸಿದರು. ಮೊಬೈಲ್‌ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿ, ಗಡಿ ಪ್ರವೇಶಿಸಿದರು.
13.   ಶಾಂತಿ ನೆಲೆಸುವ ಸಂಕೇತ: : ಕೊರಿಯಾ ಶೃಂಗಸಭೆಯಲ್ಲಿ ಎರಡೂ ರಾಷ್ಟ್ರಗಳ ನಾಯಕರು ಒಟ್ಟಿಗೆ ಕುಳಿತು ಸೌಹಾರ್ದ ಮಾತುಕತೆ ನಡೆಸುತ್ತಿರುವುದು ಉತ್ತರ ಮತ್ತು ದಕ್ಷಿಣ ಕೊರಿಯಾದಲ್ಲಿ ಭವಿಷ್ಯದಲ್ಲಿ ಶಾಶ್ವತ ಶಾಂತಿ ನೆಲೆಸುವ, ಪ್ರಗತಿಯ ಸಂಕೇತ ಎಂದು ಅಮೆರಿಕದ ಶ್ವೇತ ಭವನ ಹೇಳಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...