ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ನೋವು ಲೆಕ್ಕಿಸದೆ ಚಿನ್ನ ಗೆದ್ದ ಭಾರತದ ಸತೀಶ್‌

ಗೋಲ್ಡ್‌ ಕೋಸ್ಟ್‌, ಆಸ್ಟ್ರೇಲಿಯಾ: ತೊಡೆಯಲ್ಲಿ ವಿಪರೀತ ನೋವು ಇದ್ದರೂ ಲೆಕ್ಕಿಸದ ಭಾರತದ ಸತೀಶ್‌ ಕುಮಾರ್ ಶಿವಲಿಂಗಂ ಚಿನ್ನ ಗಳಿಸಿ ಸಂಭ್ರಮಿಸಿದರು. ಶನಿವಾರ ನಡೆದ ಪುರುಷರ 77 ಕೆ.ಜಿ ವಿಭಾಗದ ಸ್ಪರ್ಧೆಯಲ್ಲಿ ಸತೀಶ್ ಕುಮಾರ್ ಒಟ್ಟು 317 ಕೆ.ಜಿ ಭಾರ ಎತ್ತಿದರು.
ಪುರುಷರ 85 ಕೆ.ಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ವೆಂಕಟ್‌ ರಾಹುಲ್ ರಾಗಲ ಚಿನ್ನ ಗೆದ್ದರು. ಒಟ್ಟು 338 ಕೆ.ಜಿ ಭಾರ ಎತ್ತಿ ಅವರು ಈ ಸಾಧನೆ ಮಾಡಿದರು. ಇವರಿಬ್ಬರ ಅಮೋಘ ಸಾಧನೆಯಿಂದಾಗಿ ಕೂಟದಲ್ಲಿ ಭಾರತ ಗೆದ್ದ ಚಿನ್ನದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿತು.
ತೊಡೆನೋವಿನಿಂದ ಬಳಲುತ್ತಿದ್ದ ಸತೀಶ್‌ ಯಶಸ್ಸು ಸಾಧಿಸುವ ಭರವಸೆ ಇರಲಿಲ್ಲ. ಆದರೆ ತಮಿಳುನಾಡಿನ ಈ ಕ್ರೀಡಾಪಟು ನೋವು ನುಂಗಿ ದೇಶಕ್ಕೆ ಪದಕ ಗೆದ್ದುಕೊಟ್ಟರು. ಸ್ನ್ಯಾಚ್‌ನಲ್ಲಿ 144 ಕೆ.ಜಿ ಭಾರ ಎತ್ತಿದ ಸತೀಶ್‌ ಅವರು ಕ್ಲೀನ್ ಮತ್ತು ಜರ್ಕ್‌ನಲ್ಲಿ 173 ಕೆ.ಜಿ ಎತ್ತಿದರು. ಸ್ನ್ಯಾಚ್‌ನ ಮೊದಲ ಪ್ರಯತ್ನದಲ್ಲಿ 136 ಕೆ.ಜಿ ಎತ್ತಿದ ಅವರು ನಂತರದ ಪ್ರಯತ್ನಗಳಲ್ಲಿ ಕ್ರಮವಾಗಿ 140 ಮತ್ತು 144 ಕೆ.ಜಿ ಸಾಧನೆ ಮಾಡಿದರು.
ಕ್ಲೀನ್‌ ಮತ್ತು ಜರ್ಕ್‌ನ ಮೊದಲ ಎರಡು ಪ್ರಯತ್ನಗಳಲ್ಲಿ 169 ಮತ್ತು 173 ಕೆ.ಜಿ ಎತ್ತಿದರು. ಪ್ರತಿಸ್ಪರ್ಧಿಗಳು ಈ ಮಟ್ಟಕ್ಕೆ ಏರದ ಕಾರಣ ಅವರಿಗೆ ಮೂರನೇ ಪ್ರಯತ್ನ ಮಾಡುವ ಅಗತ್ಯವಿರಲಿಲ್ಲ.
ಇಂಗ್ಲೆಂಡ್‌ನ ಜಾಕ್‌ ಒಲಿವರ್‌ ಮತ್ತು ಆಸ್ಟ್ರೇಲಿಯಾದ ಫ್ರಾಂಕೋಯ್ಸ್ ಎಟೌಂಡಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದರು. ಸ್ನ್ಯಾಚ್‌ ವಿಭಾಗದ ಪ್ರಯತ್ನಗಳು ಕೊನೆಗೊಂಡಾಗ ಸತೀಶ್ ನಿರಾಸೆಗೆ ಒಳಗಾಗಿದ್ದರು. ಮೂರನೇ ಪ್ರಯತ್ನದಲ್ಲಿ ಪ್ರತಿಸ್ಪರ್ಧಿ ಒಲಿವರ್ ಒಂದು ಕೆ.ಜಿ ಹೆಚ್ಚು ಭಾರ ಎತ್ತಿದ್ದರು. ಆದರೆ ಕ್ಲೀನ್ ಮತ್ತು ಜರ್ಕ್‌ನಲ್ಲಿ ಸತೀಶ್ ಅವರನ್ನು ಹಿಂದಿಕ್ಕಲು ಒಲಿವರ್‌ಗೆ ಸಾಧ್ಯವಾಗಲಿಲ್ಲ.
ರಾ‌ಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಅವರು ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 194 ಕೆ.ಜಿ ಭಾರ ಎತ್ತುವ ಪ್ರಯತ್ನದ ವೇಳೆ ತೊಡೆಯಲ್ಲಿ ನೋವು ಕಾಣಿಸಿಕೊಂಡಿತು. ಹೀಗಾಗಿ ಕಾಮನ್‌ವೆಲ್ತ್‌ ಕೂಟದಲ್ಲಿ ಉತ್ತಮ ಸಾಧನೆ ಮಾಡುವ ಭರವಸೆಯನ್ನು ಕಳೆದುಕೊಂಡಿದ್ದರು. ಇಲ್ಲಿಗೆ ಬರುವಾಗ ಅವರು ಸಂಪೂರ್ಣವಾಗಿ ಫಿಟ್ ಆಗಿರಲಿಲ್ಲ. ಅವರ ಯಶಸ್ಸಿನ ಹಾದಿಗೆ ಇದು ಯಾವುದೂ ಅಡ್ಡಿಯಾಗಲಿಲ್ಲ.
‘ತೊಡೆಯಲ್ಲಿ ವಿಪರೀತ ನೋವು ಇತ್ತು. ಹೀಗಾಗಿ ಕುಳಿತುಕೊಳ್ಳುವುದಕ್ಕೂ ಕಷ್ಟವಾಗುತ್ತಿತ್ತು. ಆದರೆ ಪ್ರತಿಯೊಬ್ಬರೂ ನನ್ನ ಬಗ್ಗೆ ಕಾಳಜಿ ವಹಿಸಿದರು; ಮನೋಬಲ ತುಂಬಿದರು. ಆದರೂ ಪದಕ ಗೆಲ್ಲುವ ನಿರೀಕ್ಷೆ ಮೂಡಿರಲಿಲ್ಲ. ಸೂಕ್ತ ರೀತಿಯ ಅಭ್ಯಾಸವನ್ನೂ ಮಾಡಿರಲಿಲ್ಲ. ಹೀಗಾಗಿ ಪದಕದ ನಿರೀಕ್ಷೆಯೂ ಇರಲಿಲ್ಲ.
‘ಕ್ಲೀನ್ ಮತ್ತು ಜರ್ಕ್‌ನಲ್ಲಿ ಇನ್ನಷ್ಟು ಭಾರ ಎತ್ತುವುದು ನನಗೆ ಅಸಾಧ್ಯವಾಗಿತ್ತು. ಆದರೆ ಒಲಿವರ್‌ ಹಿನ್ನಡೆ ಅನುಭವಿಸಿದ್ದರಿಂದ ಮೂರನೇ ಪ್ರಯತ್ನಕ್ಕೆ ಇಳಿಯುವ ಅಗತ್ಯ ಬೀಳಲಿಲ್ಲ. ಇದು ನನ್ನ ಅದೃಷ್ಟವೆಂದೇ ಹೇಳಬೇಕು’ ಎಂದು ಸತೀಶ್‌ ಅಭಿಪ್ರಾಯಪಟ್ಟರು.
2014ರ ಕಾಮನ್‌ವೆಲ್ತ್ ಕೂಟದಲ್ಲಿ ಸತೀಶ್‌ ಒಟ್ಟು 328 ಕೆ.ಜಿ (149 ಕೆ.ಜಿ ಸ್ನ್ಯಾಚ್ ಹಾಗೂ 179 ಕೆ.ಜಿ ಕ್ಲೀನ್ ಮತ್ತು ಜರ್ಕ್‌) ಎತ್ತಿ ಚಿನ್ನ ಗೆದ್ದಿದ್ದರು.
ಮಹಿಳೆಯರ 63 ಕೆ.ಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ವಂದನಾ ಗುಪ್ತಾ ಐದನೇ ಸ್ಥಾನ ಗಳಿಸಿದರು.
**
ಏಷ್ಯನ್‌ ಗೇಮ್ಸ್‌ಗೆ ಅಭ್ಯಾಸ ನಡೆಸಲು ಸಾಕಷ್ಟು ಕಾಲಾವಕಾಶ ಇದೆ. ಆದ್ದರಿಂದ ಅಲ್ಲಿ ಇದಕ್ಕಿಂತ ಉತ್ತಮ ಸಾಧನೆ ಮಾಡುವ ಭರವಸೆ ಇದೆ.
- ಸತೀಶ್‌ ಶಿವಲಿಂಗಂ, ಚಿನ್ನ ಗೆದ್ದ ವೇಟ್‌ಲಿಫ್ಟರ್‌
**
ರಾಹುಲ್‌ಗೆ ಚಿನ್ನದ ಸಂಭ್ರಮ
ಸಮೋದ ಡಾನ್ ಒಪೆಲಾಗ್ ಅವರಿಂದ ಎದುರಾದ ತೀವ್ರ ಪೈಪೋಟಿ ಮೆಟ್ಟಿ ನಿಂತ ರಾಹುಲ್‌ ಕಾಮನ್‌ವೆಲ್ತ್‌ ಕೂಟದ ಎರಡನೇ ಚಿನ್ನ ಗೆದ್ದ ಸಾಧನೆ ಮಾಡಿದರು. ಸ್ನ್ಯಾಚ್‌ನಲ್ಲಿ 151 ಕೆ.ಜಿ ಭಾರ ಎತ್ತಿದ ಅವರು ಕ್ಲೀನ್ ಮತ್ತು ಜರ್ಕ್‌ನಲ್ಲಿ 187 ಕೆ.ಜಿ ಎತ್ತಿದರು. ಸಮೊ ಒಟ್ಟು 331 ಕೆ.ಜಿ ಸಾಧನೆ ಮಾಡಿದರು.
ಡಾನ್ ಒಪೆಲಾಗ್ ಮತ್ತು ರಾಹುಲ್‌ ಕ್ಲೀನ್ ಮತ್ತು ಜರ್ಕ್ ವಿಭಾಗದ ಕೊನೆಯ ಪ್ರಯತ್ನದಲ್ಲಿ ತಲಾ 191 ಕೆ.ಜಿ ಎತ್ತಿದರು. ಆದರೆ ಯತ್ನದಲ್ಲಿ ಇಬ್ಬರೂ ವಿಫಲರಾದರು. ಎರಡನೇ ಪ್ರಯತ್ನದಲ್ಲೂ ವೈಫಲ್ಯ ಕಂಡಿದ್ದ ಒಪೆಲಾಗ್ ಬೆಳ್ಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...