ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ನಿಧನ

ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ (79) ಶುಕ್ರವಾರ ಸಂಜೆ ನಿಧನರಾದರು.
ಧಾರವಾಡ ಸಾಹಿತ್ಯ ಸಂಭ್ರಮ ಟ್ರಸ್ಟ್ ಅಧ್ಯಕ್ಷರಾಗಿದ್ದ ಅವರು ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಹಲವಾರು ಕತೆ, ಕವಿತೆ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಇರುವ ತಮ್ಮ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಕನ್ನಡದ ಶ್ರೇಷ್ಠ ವಿಮರ್ಶಕ ಗಿರಡ್ಡಿ
ಗಿರಡ್ಡಿ ಗೋವಿಂದರಾಜ ಅವರು ಹುಟ್ಟಿದ್ದು ಧಾರವಾಡ ಜಿಲ್ಲೆಯ ರೋಣ ತಾಲ್ಲೂಕಿನ ಅಬ್ಬಿಗೇರಿಯಲ್ಲಿ. ತಂದೆ ಅಂದಾನಪ್ಪ, ತಾಯಿ ಸಂಗಮ್ಮ. ಅಬ್ಬಿಗೇರಿ, ನರೇಗಲ್ಲ, ರೋಣಗಳಲ್ಲಿ ಪ್ರಾರಂಭಿಕ ಶಿಕ್ಷಣ ಪಡೆದ ಇವರು ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ., ಕರ್ನಾಟಕ ವಿಶ್ವವಿದ್ಯಾಲಯದಿಂದ 1963ರಲ್ಲಿ ಎಂ.ಎ. (ಇಂಗ್ಲಿಷ್) ಮತ್ತು ಎಂ.ಎ. (ಕನ್ನಡ) ಪದವಿ ಪಡೆದರು. ನಂತರ ಇಂಗ್ಲೆಂಡ್‌ನಲ್ಲಿ ಭಾಷಾಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದಿದ್ದರು. ಹೈದರಾಬಾದ್ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್‌ನಲ್ಲಿ ‘ಡಿಪ್ಲೊಮ ಇನ್ ಇಂಗ್ಲಿಷ್ ಸ್ಟಡೀಸ್’ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದರು. ‘FREE INDIRECT SPEECH IN ENGLISH FICTIONS’ (ಶೈಲಿ ಶಾಸ್ತ್ರಕ್ಕೆ ಸಂಬಂಧಿಸಿದ್ದು) ಮಹಾಪ್ರಬಂಧ ಮಂಡಿಸಿ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪಡೆದಿದ್ದರು.
ಹನುಮನ ಹಟ್ಟಿಯ ಮಹಾವಿದ್ಯಾಲಯದಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಗಿರಡ್ಡಿಯವರು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ 1996ರಲ್ಲಿ ನಿವೃತ್ತಿ ಹೊಂದಿದ್ದರು. ಪ್ರೌಢಶಾಲೆಯಲ್ಲಿದ್ದಾಗಲೇ ಸಾಹಿತ್ಯದತ್ತ ಒಲವು ಹೊಂದಿದ್ದರು. ಇವರ ‘ಶಾರದಾ ಲಹರಿ’ ನೀಳ್ಗವಿತೆ 1956ರಲ್ಲಿ ಪ್ರಕಟವಾಗಿತ್ತು. ಕಾಲೇಜು ವಿದ್ಯಾರ್ಥಿಯಾಗಿದ್ದಾಗಲೇ ‘ರಸವಂತಿ’ ಕವನ ಸಂಕಲನ ಪ್ರಕಟಿಸಿದ್ದರು.
ಗೆಳೆಯರಾದ ಚಂಪಾ, ಸಿದ್ಧಲಿಂಗ ಪಟ್ಟಣಶೆಟ್ಟಿ  ಜೊತೆಗೂಡಿ ‘ಸಂಕ್ರಮಣ’ ದ್ವೈಮಾಸಿಕ ಪತ್ರಿಕೆ ಹೊರತಂದಾಗ ವಿಮರ್ಶೆ ಬರೆಯಬೇಕಾದ ಪರಿಸ್ಥಿತಿ ಅವರಿಗೆ ಎದುರಾಗಿತ್ತು. ಮುಂದೆ ವಿಮರ್ಶಾ ಕ್ಷೇತ್ರದಲ್ಲಿ ಸ್ಥಾನ ಪಡೆದರು. ‘ರಂಗ ಮಾಧ್ಯಮ’ ನಾಟಕ ಸಂಸ್ಥೆಯ ಸ್ಥಾಪಿಸಿ ಅಭಿನಯ, ನಟನೆ, ನಿರ್ದೇಶನದಲ್ಲಿ ಖ್ಯಾತಿ ಪಡೆದರು.
ಹತ್ತಾರು ಪ್ರಶಸ್ತಿಗಳು...
ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಅಂಬಿಕಾತನಯದತ್ತ ಪ್ರಶಸ್ತಿ, ಡಾ. ಜಿಎಸ್ಸೆಸ್ ಪ್ರಶಸ್ತಿ, ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಬಹುಮಾನ, ಆರ್.ಎಸ್.ನಾಯಡು ಬಹುಮಾನ, ವಿ.ಎಂ.ಇನಾಮದಾರ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಗಿರಡ್ಡಿ ಅವರು ಭಾಜನರಾಗಿದ್ದಾರೆ.
ಪ್ರಕಟಿತ ಪ್ರಮುಖ ಕೃತಿಗಳು
* ಶಾರದಾ ಲಹರಿ (ಕಾವ್ಯ)
* ರಸವಂತಿ (ಕವನ ಸಂಕಲನ)
* ಮರ್ಲಿನ್ ಮನ್ರೋ
* ಆ ಮುಖ ಈ ಮುಖ, ಹಂಗು ಮತ್ತು ಇತರ ಕಥೆಗಳು(ಕಥಾಸಂಕಲನ) (ಹಂಗು ಕಥೆ ಪುಟ್ಟಣ್ಣ ಕಣಗಾಲರ ನಿರ್ದೇಶನದ ಕಥಾಸಂಗಮದ ಚಲನಚಿತ್ರದಲ್ಲಿ ಚಿತ್ರಿತವಾದ ಕಥೆ)
* ಒಂದು ಬೇವಿನ ಮರದ ಕಥೆ
* ಸಣ್ಣ ಕಥೆಯ ಹೊಸ ಒಲವುಗಳು (ವಿಮರ್ಶೆ)
* ಜನಪದ ಕಾವ್ಯ
* ನವ್ಯ ವಿಮರ್ಶೆ
* ಕಾದಂಬರಿ-ವಸ್ತು ಮತ್ತು ತಂತ್ರ
* ಸಾಹಿತ್ಯ ಮತ್ತು ಪರಂಪರೆ ಇಂಗ್ಲೆಂಡಿನ ರಂಗಭೂಮಿ
* ನಾಟಕ ಸಾಹಿತ್ಯ ಮತ್ತು ರಂಗಭೂಮಿ
* ಸಾತತ್ಯ, AN INTRODUCTION TO GENERAL LINGUISTICS
* ಸಾಮಾಜಿಕ ಭಾಷಾಶಾಸ್ತ್ರ-ಕನ್ನಡ ಡೈಗ್ಲಾಸಿಯಾ
* ವಚನಗಳ ರಾಚನಿಕ ವಿನ್ಯಾಸ ಮುಂತಾದ ಕೃತಿಗಳು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...