ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ.
ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ.
ಆಡಳಿತಕ್ಕೆ ಹೊಸ ಸ್ಪರ್ಶ
‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ.
ಓಬೀರಾಯನ ಕಾಲದ ಕಾನೂನು ರದ್ದು
ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ಕಾಯ್ದೆಗಳನ್ನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದೆ. ಇದರಲ್ಲಿ 2 ಸಾವಿರಕ್ಕೂ ಅಧಿಕ ಕಾಯ್ದೆಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಸುಮಾರು 1 ಸಾವಿರ ಕಾಯ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆಯು ಲೋಕಸಭೆ ಮುಂದಿದೆ.
ವಾಸ್ತವಿಕ ಮುಂಗಡಪತ್ರ, ಅಭಿವೃದ್ಧಿ ಕಾರ್ಯತಂತ್ರ
ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸತತ 5 ಬಜೆಟ್ ಮಂಡಿಸಿದ್ದಾರೆ. ಆಕರ್ಷಕ ಯೋಜನೆಗಳನ್ನು ಘೋಷಿಸಿ ಜನರನ್ನು ಮರುಳು ಮಾಡುವ ಕಸರತ್ತಿನ ಬದಲು ವಾಸ್ತವಿಕ ಬಜೆಟ್​ನತ್ತ ಗಮನ ನೀಡಲಾಗಿದೆ. ಸ್ವಚ್ಛ ಭಾರತ್, ಸ್ಮಾರ್ಟ್ ಇಂಡಿಯಾ, ಮೇಕ್ ಇನ್ ಇಂಡಿಯಾ, ವಸತಿ ರಹಿತರಿಗೆ ಸೂರು, ಅಮೃತ್​ನಂತಹ ಪರಿಣಾಮಕಾರಿ ಯೋಜನೆಗಳಿಗೆ ಮಣೆ ಹಾಕಲಾಗಿದೆ. ಈ ಬಾರಿ ಸರ್ವರಿಗೂ ಆರೋಗ್ಯ ವಿಮೆ ಯೋಜನೆ ಘೋಷಿಸಿದ್ದು, ಭಾರತೀಯ ಆರೋಗ್ಯ ಕ್ಷೇತ್ರದ ಕ್ರಾಂತಿಗೆ ಕಾರಣವಾಗಲಿದೆ ಎಂಬ ನಿರೀಕ್ಷೆಯಿದೆ. ರೇಲ್ವೆ ಬಜೆಟ್ಟನ್ನು ಸಾಮಾನ್ಯ ಮುಂಗಡಪತ್ರದಲ್ಲಿ ವಿಲೀನಗೊಳಿಸಿದ್ದು, ಹೊಸ ರೇಲ್ವೆ ಯೋಜನೆ-ಮಾರ್ಗಗಳ ಘೋಷಣೆ ಬದಲು ಹಿಂದಿನ ಸರ್ಕಾರಗಳು ಘೋಷಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಿದೆ. ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.
ಹಣದುಬ್ಬರ ನಿಯಂತ್ರಣ
ಯುಪಿಎ ಸರ್ಕಾರದ ಅವಧಿಯಲ್ಲಿ ಎರಡಂಕಿ ತಲುಪಿದ್ದ ಹಣದುಬ್ಬರವು ಈಗ ಶೇ.4ರ ಆಸುಪಾಸಿನಲ್ಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದು ಮೋದಿ ಸರ್ಕಾರಕ್ಕೆ ವರವಾಗಿ ಪರಿಣಮಿಸಿತು.
ಕಾರ್ವಿುಕ ನೀತಿ
# ಮಹಿಳಾ ಉದ್ಯೋಗಿಗಳ ಹೆರಿಗೆ ರಜೆ ಅವಧಿ 16 ವಾರದಿಂದ 26 ವಾರಕ್ಕೆ ಏರಿಕೆ
# ಸ್ಕಿಲ್ ಇಂಡಿಯಾ ಯೋಜನೆ ಮೂಲಕ ಕಾರ್ವಿುಕರಿಗೆ ಕೌಶಲ ತರಬೇತಿ
# ಇಪಿಎಫ್​ಒ ಸಂಪೂರ್ಣ ಆನ್​ಲೈನ್. ಒಂದು ಕಂಪನಿಯಿಂದ ಮತ್ತೊಂದು ಕಂಪನಿಗೆ ಖಾತೆ ವರ್ಗಾವಣೆ ಸೌಲಭ್ಯ.
# ಭೂಸ್ವಾಧೀನ ಮಸೂದೆ
# ಕೈಗಾರಿಕೆಗೆ ಭೂಮಿ ವಶಪಡಿಸಿಕೊಳ್ಳುವ ನೀತಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ವಿವಾದ ಬಳಿಕ ಹಿಂದಕ್ಕೆ ಪಡೆಯಲಾಯಿತು.
 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....