ವಿಷಯಕ್ಕೆ ಹೋಗಿ

**ಜ್ಞಾನಕಾರಂಜಿ**::: ಮೂಲಸೌಕರ್ಯಕ್ಕೆ ಎನ್​ಡಿಎ ಮುನ್ನುಡಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಮೂರನೇ ಭಾಗ ಇಲ್ಲಿದೆ.
ಜನರಿಗೆ ಅತಿ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಕೇಂದ್ರ ಸರ್ಕಾರ ದಾಪುಗಾಲಿಡುತ್ತಿದೆ. ಹತ್ತು ಹಲವು ಯೋಜನೆಗಳನ್ನು ಕೈಗೊಂಡು ಅವುಗಳನ್ನು ಸಮರ್ಪಕವಾಗಿ ಅನುಷ್ಠಾನವನ್ನೂ ಮಾಡುತ್ತಿದೆ. ಈ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ…
ಬೆಳಗಿತು ಗ್ರಾಮ
ದೇಶದ ಎಲ್ಲ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು ಮೋದಿ ಸರ್ಕಾರದ ಮಹತ್ವದ ಸಾಧನೆ. ಮಣಿಪುರ ರಾಜ್ಯದ ಲೀಸಾಂಗ್ ಗ್ರಾಮಕ್ಕೆ ಕಳೆದ ಏ. 28ರಂದು ವಿದ್ಯುತ್ ಸಮರ್ಪಕ ಕಲ್ಪಿಸುವ ಮೂಲಕ ಸರ್ಕಾರ ಮೈಲಿಗಲ್ಲು ಸ್ಥಾಪಿಸಿದೆ. ಮುಂದಿನ ವರ್ಷ ಅಂತ್ಯದ ವೇಳೆಗೆ ದೇಶದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಮಹತ್ವದ ಯೋಜನೆಯನ್ನು ಸರ್ಕಾರ ಹಮ್ಮಿಕೊಂಡಿದೆ.
ಮೇಕ್ ಇನ್ ಇಂಡಿಯಾ
ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿಸುವುದು ಪ್ರಧಾನಿ ಮೋದಿ ಕನಸು. ಇದನ್ನು ನನಸಾಗಿಸುವ ಉದ್ದೇಶದಿಂದ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಬದಲು ಭಾರತದಲ್ಲೇ ವಸ್ತುಗಳನ್ನು ಉತ್ಪಾದಿಸುವುದು, ದೇಶೀಯ ಉದ್ದಿಮೆಗಳಿಗೆ ಉತ್ತೇಜನ ನೀಡುವುದು ಪ್ರಮುಖ ಗುರಿಯಾಗಿದೆ. ಪ್ರಮುಖವಾಗಿ ರಕ್ಷಣಾ ಉಪಕರಣಗಳನ್ನು ಈ ಯೋಜನೆ ಅಡಿಯಲ್ಲಿ ಉತ್ಪಾದಿಸಲಾಗುತ್ತಿದೆ. ಇದರಿಂದಾಗಿ ಅಪಾರ ಉದ್ಯೋಗ ಸೃಷ್ಟಿಯಾಗುತ್ತಿದೆ.
ಸರ್ವಋತು ರಸ್ತೆ
ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಲ್ಲಿ ರಸ್ತೆ ನಿರ್ಮಾಣ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಪ್ರತಿ ದಿನ 133 ಕಿ.ಮೀ. ಹೊಸ ರಸ್ತೆ ನಿರ್ವಿುಸಲಾಗುತ್ತಿದೆ. ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 1.5 ಲಕ್ಷ ಕಿ.ಮೀ ರಸ್ತೆ ನಿರ್ವಣವಾಗಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿ ಸುಮಾರು 60 ಸಾವಿರ ಕಿ.ಮೀ. ರಸ್ತೆ ನಿರ್ವಣವಾಗಿದೆ.
ಡಿಜಿಟಲ್ ಭಾರತ
ಪ್ರತಿ ಗ್ರಾಮ ಪಂಚಾಯಿತಿಗೂ ಸುಧಾರಿತ ಅಂತರ್ಜಾಲ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ. ವಿವಿಧ ಬಿಲ್ ಪಾವತಿ, ಹಲವು ಪ್ರಮಾಣಪತ್ರ, ಸರ್ಕಾರದ ಸೇವೆಗಳನ್ನು ಆನ್​ಲೈನ್ ಮೂಲಕವೇ ಪಡೆಯಬಹುದಾಗಿದೆ. ಇ- ಗವರ್ನಮೆಂಟ್ ವ್ಯವಸ್ಥೆ ಮೂಲಕ ಜನರು ಕಿರುಬೆರಳಿನಲ್ಲಿ ಸರ್ಕಾರದ ಸಾಕಷ್ಟು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ದೇಶಾದ್ಯಂತ ಆಪ್ಟಿಕಲ್ ಕೇಬಲ್ ಅಳವಡಿಕೆ ಕಾರ್ಯವೂ ವೇಗವಾಗಿ ನಡೆಯುತ್ತಿದೆ.
# ಪ್ರತಿದಿನ 133 ಕಿ.ಮೀ. ರಸ್ತೆ ನಿರ್ಮಾಣ
# ಉಡಾನ್ ಯೋಜನೆಯಡಿ 2500 ರೂ.ಗೆ ವಿಮಾನ ಪ್ರಯಾಣ
# ಸ್ಕಿಲ್ ಇಂಡಿಯಾ ಯೋಜನೆಯಡಿ 1 ಕೋಟಿ ಜನರಿಗೆ ಉದ್ಯೋಗ ತರಬೇತಿ
# ವಿಮಾನಯಾನ ಭಾಗ್ಯ
ಹವಾಯಿ ಚಪ್ಪಲಿ ಧರಿಸುವವರೂ ವಿಮಾನದಲ್ಲಿ ಪ್ರಯಾಣಿಸುವಂತಾಗಬೇಕು ಎಂಬುದು ಪ್ರಧಾನಿ ಮೋದಿ ಕನಸು. ಇದಕ್ಕಾಗಿ ಸರ್ಕಾರ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆ ಜಾರಿಗೆ ತಂದಿದೆ. ಪ್ರಮುಖವಾಗಿ ಸಣ್ಣ ಪಟ್ಟಣಗಳನ್ನು ಸಂರ್ಪಸುವ ಯೋಜನೆ ಇದಾಗಿದೆ. ಒಂದು ಗಂಟೆಯೊಳಗೆ ಪ್ರಯಾಣಿಸಬಹುದಾದ ಸ್ಥಳಗಳಿಗೆ ಕೇವಲ 2500 ರೂ. ದರ ನಿಗದಿ ಮಾಡಲಾಗಿದೆ.
ಸ್ಕಿಲ್ ಇಂಡಿಯಾ
ಯುವಕರಲ್ಲಿ ಕೌಶಲ ಹೆಚ್ಚಿಸಿ, ಉದ್ಯೋಗಾವಕಾಶ ವಿಸ್ತರಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಯೋಜನೆಯೇ ಸ್ಕಿಲ್ ಇಂಡಿಯಾ. 2015 ಜುಲೈ 15ರಂದು ಇದಕ್ಕೆ ಚಾಲನೆ ನೀಡಲಾಗಿದೆ. ಖಾಸಗಿ ಹಾಗೂ ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ಒಂದು ಕೋಟಿಗೂ ಅಧಿಕ ವ್ಯಕ್ತಿಗಳಿಗೆ ವೃತ್ತಿ ತರಬೇತಿ ನೀಡಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....