ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತ ಮೇ ೨೫



ಪ್ರಚಲಿತಗಳು:
ಎಸ್‌ಸಿಒಗೆ ಭಾರತ, ಪಾಕ್ ಸೇರ್ಪಡೆಯಿಂದ ಶಕ್ತಿ:
ಭಾರತ ಹಾಗೂ ಪಾಕಿಸ್ತಾನ ಸೇರ್ಪಡೆಯಿಂದ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಹಕಾರ ವೃದ್ಧಿಯಾಗಿದ್ದು, ಅಂತರರಾಷ್ಟ್ರೀಯ ಸಮುದಾಯದ ನಿರೀಕ್ಷೆಗಳೂ ಹೆಚ್ಚಾಗಿವೆ ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಹೇಳಿದ್ದಾರೆ.
ಸಂಘಟನೆಯ ಭದ್ರತಾ ಮಂಡಳಿಯ ಕಾರ್ಯದರ್ಶಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆ ರಚನೆಯಾದಾಗಿನಿಂದ ಪ್ರಾದೇಶಿಕ ಭದ್ರತೆ ಹಾಗೂ ಸ್ಥಿರತೆ ಆದ್ಯತೆಯ ವಿಷಯಗಳಾಗಿವೆ ಎಂದಿದ್ದಾರೆ.
ಸಂಘಟನೆಯ ಸದಸ್ಯ ರಾಷ್ಟ್ರಗಳು ಮೂರು ದುಷ್ಟಶಕ್ತಿಗಳಾದ ಭಯೋತ್ಪಾದನೆ, ಪ್ರತ್ಯೇಕತಾವಾದ ಹಾಗೂ ತೀವ್ರವಾದದ ವಿರುದ್ಧ ಹೋರಾಡುತ್ತ ಬಂದಿವೆ. ಗಂಭೀರ ವಿಷಯಗಳಿಂದ ಉಂಟಾಗಬಹುದಾದ ವ್ಯತಿರಿಕ್ತ ಪರಿಣಾಮಗಳನ್ನು ತಡೆದಿವೆ. ಪ್ರಾದೇಶಿಕ ಶಾಂತಿ, ಅಭಿವೃದ್ಧಿ ಹಾಗೂ ಸಮೃದ್ಧತೆಗೆ ಕೊಡುಗೆ ನೀಡುತ್ತಾ ಬಂದಿವೆಎಂದು ಷಿ ಹೇಳಿದರು.
ಭಾರತ ಹಾಗೂ ಪಾಕಿಸ್ತಾನ ಕಳೆದ ವರ್ಷ ಸಂಘಟನೆಯ ಸದಸ್ಯರಾಗಿ ಸೇರ್ಪಡೆಯಾಗಿದ್ದವು. ಜೂನ್ 9,10ರಂದು ಚೀನಾದ ಕ್ವಿಂಗ್‌ಡೊನಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆ ನಡೆಯಲಿದ್ದು, ಮೋದಿ ಅವರು ಭಾಗಿಯಾಗುವ ಸಾಧ್ಯತೆಯಿದೆ.
**
ಉಗ್ರವಾದದ ವಿರುದ್ಧ ಹೋರಾಟಕ್ಕೆ ಸಿದ್ಧ
ಇಸ್ಲಾಮಾಬಾದ್: ಯಾವುದೇ ಧರ್ಮ, ದೇಶ ಅಥವಾ ರಾಷ್ಟ್ರೀಯತೆಯ ಮೂಲಕ ಭಯೋತ್ಪಾದನೆಯನ್ನು ಗುರುತಿಸಬಾರದು ಎಂದು ಪಾಕಿಸ್ತಾನ ಹೇಳಿದೆ. ಪ್ರಾದೇಶಿಕ ದೇಶಗಳ ಜೊತೆ ಸೇರಿ ಉಗ್ರವಾದದ ವಿರುದ್ಧ ಹೋರಾಟ ನಡೆಸಲು ಸಿದ್ಧ ಎಂದು ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ಅದು ತಿಳಿಸಿದೆ. ಈ ಸಭೆಯಲ್ಲಿ ಭಾರತವೂ ಭಾಗಿಯಾಗಿತ್ತು.
ಭಯೋತ್ಪಾದನೆಯಿಂದ ಪಾಕಿಸ್ತಾನವು ಸಾವಿರಾರು ನಾಗರಿಕರು, ಭದ್ರತಾ ಸಿಬ್ಬಂದಿಯನ್ನು ಕಳೆದುಕೊಂಡಿದೆ. ದೇಶದ ಆರ್ಥಿಕತೆಗೆ ಸುಮಾರು ₹80 ಲಕ್ಷ ಕೋಟಿ ರೂಪಾಯಿಯಷ್ಟು ಆರ್ಥಿಕ ಹೊಡೆತ ಬಿದ್ದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ತಹಮಿನಾ ಜನುವಾ ಹೇಳಿದ್ದಾರೆ. ಈ ವಿಚಾರವಾಗಿ ಸಂಘಟನೆಯು ಪಾಕಿಸ್ತಾನದತ್ತ ವಿಶೇಷ ಗಮನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

**ಜಾರ್ಜಿಯಾ ಗವರ್ನರ್ ಹುದ್ದೆಯತ್ತ ಕಪ್ಪುವರ್ಣೀಯ ಮಹಿಳೆ**
ವಕೀಲರಾದ ಸ್ಟೇಸಿ ಅಬ್ರಾಮ್ಸ್ ಅವರು ಜಾರ್ಜಿಯಾದ ಗವರ್ನರ್ ಆಗುವತ್ತ ಹೆಜ್ಜೆ ಇಟ್ಟಿದ್ದಾರೆ. ಇವರು ಅಮೆರಿಕದ ಇತಿಹಾಸದಲ್ಲಿ ಜಾರ್ಜಿಯಾದಲ್ಲಿ ಈ ಹುದ್ದೆಗೆ ಏರಲಿರುವ ಮೊದಲ ಕಪ್ಪುವರ್ಣೀಯ ಮಹಿಳೆ ಆಗಲಿದ್ದಾರೆ.
ಹುದ್ದೆ ಮೇಲೆ ಕಣ್ಣಿಟ್ಟಿದ್ದ ಹಲವು ಮಹಿಳೆಯರ ಪೈಕಿ, ಸ್ಟೇಸಿ ಅವರನ್ನು ಡೆಮಾಕ್ರಟಿಕ್ ಪಕ್ಷದವರು ಆಯ್ಕೆ ಮಾಡಿಕೊಂಡಿದ್ದಾರೆ.
ಮಂಗಳವಾರ ನಡೆದ ಪ್ರಾಥಮಿಕ ಚುನಾವಣೆಯಲ್ಲಿ 44 ವರ್ಷದ ಸ್ಟೇಸಿ ಅವರು ಸ್ಟೇಸಿ ಇವಾನ್ಸ್ ವಿರುದ್ಧ ಜಯ ಸಾಧಿಸಿ, ಗವರ್ನರ್ ಹುದ್ದೆಗೆ ನಾಮ ನಿರ್ದೇಶನಗೊಂಡಿದ್ದಾರೆ.
ಕೆಂಟುಕಿ, ಅರ್ಕಾನ್ಸಾಸ್ ಹಾಗೂ ಟೆಕ್ಸಾಸ್ ರಾಜ್ಯಗಳಲ್ಲಿಯೂ ನವೆಂಬರ್ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದೆ.

**ಅಂತರ್ಜಲದ ಮೇಲೆ ನಿಗಾ: ನಾಸಾದ ಜೋಡಿ ವ್ಯೋಹನೌಕೆ ಗಗನಕ್ಕೆ**
ಸಮುದ್ರದಲ್ಲಿ ನೀರಿನ ಮಟ್ಟದಲ್ಲಿನ ಏರಿಕೆ, ಮಂಜುಗಡ್ಡೆ ಕರಗುವುದು ಹಾಗೂ ಭೂಮಿಯಲ್ಲಿನ ಬರ ಪರಿಸ್ಥಿತಿ ಮೇಲೆ ನಿಗಾ ಇಡಲು ಜೋಡಿ ವ್ಯೋಮನೌಕೆಗಳನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹೇಳಿದೆ.
ಸಂವಹನಕ್ಕೆ ನೆರವಾಗುವ ಐದು ಉಪಗ್ರಹಗಳನ್ನು ಸಹ ಇದೇ ರಾಕೆಟ್‌ ಮೂಲಕ ಉಡ್ಡಯನ ಮಾಡಲಾಗಿದೆ. ವ್ಯೋಮನೌಕೆ ಗ್ರೇಸ್‌ಎಫ್‌ಓ ಮತ್ತು ಐದು ಉಪಗ್ರಹಗಳನ್ನು ಹೊತ್ತ ಸ್ಪೇಸ್‌ ಎಕ್ಸ್‌ಫಾಲ್ಕನ್‌ 9 ಎಂಬ ರಾಕೆಟ್‌ ಕ್ಯಾಲಿಫೋರ್ನಿಯಾದಲ್ಲಿರುವ ವ್ಯಾಂಡೇನ್‌ಬರ್ಗ್ ವಾಯುಸೇನಾ ನೆಲೆಯಿಂದ ಬುಧವಾರ ನಭದತ್ತ ಹಾರಿತು.
ಗ್ರೇಸ್‌ಎಫ್‌ಓ ಎಂಬ ವ್ಯೋಮನೌಕೆ ಉಡ್ಡಯನ ಯೋಜನೆಯನ್ನು ನಾಸಾ ಮತ್ತು ಜರ್ಮನಿಯ ಭೂವಿಜ್ಞಾನ ಸಂಶೋಧನಾ ಕೇಂದ್ರ (ಜಿಎಫ್‌ಝಡ್‌) ಜಂಟಿಯಾಗಿ ಅನುಷ್ಠಾನಗೊಳಿಸಿವೆ.
ಸಂಭಾವ್ಯ ಬರ ಪರಿಸ್ಥಿತಿ, ನೀರಿನ ನಿರ್ವಹಣೆ, ಅಂತರ್ಜಲ ಮಟ್ಟದಲ್ಲಿನ ಏರಿಳಿತದ ಬಗ್ಗೆ ಗ್ರೇಸ್‌ಎಫ್‌ಓ ಮಾಹಿತಿ ಒದಗಿಸುವುದು. ಜನರ ಜೀವನಮಟ್ಟವನ್ನು ಸುಧಾರಿಸಲು ನೆರವಾಗುವ ಈ ಮಾಹಿತಿಯನ್ನು ಎಲ್ಲ ದೇಶಗಳೊಂದಿಗೆ ಹಂಚಿಕೊಳ್ಳಲಾಗುತ್ತದೆಎಂದು ನಾಸಾದ ಸೈನ್ಸ್‌ ಮಿಷನ್‌ ನಿರ್ದೇಶನಾಲಯದ ಸಹಾಯಕ ಆಡಳಿತಾಧಿಕಾರಿ ಥಾಮಸ್‌ ಝರ್ಬಚೆನ್‌ ತಿಳಿಸಿದ್ದಾರೆ.
ಈ ವ್ಯೋಹನೌಕೆ ಮೊದಲ ಮಾಹಿತಿಯನ್ನು ಕಳಿಸಲು ಏಳು ತಿಂಗಳು ಬೇಕಾಗಬಹುದುಎಂದೂ ಅವರು ಹೇಳಿದ್ದಾರೆ.
**ಸುಮಾರು 400 ವರ್ಷ ನಂತರ ಅಂತ್ಯಕ್ರಿಯೆ!**
ಸುಮಾರು 400 ವರ್ಷಗಳ ಹಿಂದೆ ನಡೆದ ಯುದ್ಧದಲ್ಲಿ ಮರಣ ಹೊಂದಿದ್ದ ಕರ್ನಲ್‌ ಶೆಲ್ಟೆ ವ್ಯಾನ್ ಐಸ್ಮಾ ಅಂತ್ಯಕ್ರಿಯೆ ನೆದರ್‌ಲ್ಯಾಂಡ್ಸ್‌ನಲ್ಲಿ
ಮಿಲಿಟರಿ ಗೌರವದೊಂದಿಗೆ ಬುಧವಾರ ನೆರವೇರಿ ಸಲಾಯಿತು.
ಸ್ಪೇನ್‌ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು 1637ರಲ್ಲಿ ನಡೆದಿದ್ದ ಹೋರಾಟದಲ್ಲಿ ಕರ್ನಲ್‌ ಸಾವನ್ನಪ್ಪಿದ್ದರು. ಆದರೆ, ಸಾವು ಹೇಗೆ ಸಂಭವಿಸಿತು ಎಂಬ ಮಾಹಿತಿ ಇಲ್ಲಎಂದು ನೆದರ್‌ಲ್ಯಾಂಡ್ಸ್‌ ಸೇನೆ ತಿಳಿಸಿದೆ.
ಐಸ್ಮಾ ಧರಿಸಿದ್ದ ಹೆಲ್ಮೆಟ್‌ ಅನ್ನು ಡಚ್‌ ನ್ಯಾಷನಲ್‌ ಮಿಲಿಟರಿ ಮ್ಯೂಸಿಯಂ ಅಧಿಕಾರಿಗಳು 2015ರಲ್ಲಿ ಶೆಟ್ಟೆನ್‌ ಎಂಬಲ್ಲಿನ ಚರ್ಚ್‌ನಲ್ಲಿ ಪತ್ತೆ ಹಚ್ಚಿದರು. ಅಂತಿಮವಾಗಿ ಡಿಎನ್‌ಎ ಪರೀಕ್ಷೆಯಿಂದ ದೃಢಪಟ್ಟಿತು ಎಂದು ತಿಳಿಸಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...