ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಜುಲೈ 1ರಿಂದ ಬೆಂಗಳೂರು ವಿಜ್ಞಾನೋತ್ಸವ

41 ವರ್ಷಗಳಿಂದ ಒಮ್ಮೆಯೂ ತಪ್ಪದಂತೆ, ವ್ರತದಂತೆ ನಡೆದುಕೊಂಡು ಬಂದಿರುವ ಬೆಂಗಳೂರು ವಿಜ್ಞಾನೋತ್ಸವ ಜುಲೈ ಒಂದರಿಂದ ಆಗಸ್ಟ್ 2ರವರೆಗೂ ನಡೆಯಲಿದೆ. ಭಾರತೀಯ ಕ್ಷಿಪಣಿ ಕ್ಷೇತ್ರದಲ್ಲಿ ಮಿಸೈಲ್ ವುಮನ್ (ಅಗ್ನಿ ಕನ್ಯೆ!) ಎಂದೇ ಖ್ಯಾತರಾಗಿರುವ ಡಾ.ಟೆಸ್ಸಿ ಥಾಮಸ್ ‘ಬಾಹ್ಯಾಕಾಶ ತಂತ್ರಜ್ಞಾನದ ಪ್ರಗತಿ’ ಕುರಿತು ಉಪನ್ಯಾಸ ನೀಡಲಿರುವುದು ಉತ್ಸವದ ವಿಶೇಷಗಳಲ್ಲಿ ಒಂದು.
ಕೇರಳದ ತುಂಬಾ ಉಡಾವಣಾ ಕೇಂದ್ರದ ಸಮೀಪದಲ್ಲೇ ಹುಟ್ಟಿ ರಾಕೆಟ್ ಉಡಾವಣೆಯನ್ನು ನೋಡನೋಡುತ್ತ, ಒಂದಲ್ಲ ಒಂದು ದಿವಸ ಅಲ್ಲೇ ಉದ್ಯೋಗಿಯಾಗುವ ಕನಸು ಕಾಣುತ್ತ ಭವಿಷ್ಯದಲ್ಲಿ ನನಸಾಗಿಸಿಕೊಂಡ ಹಿರಿಮೆ ಹೆಮ್ಮೆ ಟೆಸ್ಸಿಯವರದು.
‘ಅಗ್ನಿ-4’ ಕ್ಷಿಪಣಿ ಯೋಜನಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಸಾಮರ್ಥ್ಯ ಮೆರೆದ ಟೆಸ್ಸಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಗ್ನಿ ಕನ್ಯೆ ಎಂದೇ ಹೆಸರಾದವರು. ಇವರ ಸಾಮರ್ಥ್ಯ ಬೆಳಕಿಗೆ ಕಾರಣರಾದವರು ಎ.ಪಿ.ಜೆ. ಅಬ್ದುಲ್ ಕಲಾಂ! ಜುಲೈ 21ರಂದು ಟೆಸ್ಸಿ ಉಪನ್ಯಾಸ ನೀಡಲಿದ್ದಾರೆ.
ವಿಜ್ಞಾನೋತ್ಸವಕ್ಕೆ ವೇದಿಕೆ ಕಲ್ಪಿಸಿರುವ ನ್ಯಾಷನಲ್ ಎಜುಕೇಷನ್ ಸೊಸೈಟಿಗೀಗ 100ರ ಸಂಭ್ರಮ, ಅದೇ ರೀತಿ ಡಾ.ಎಚ್. ನರಸಿಂಹಯ್ಯನವರ ಜನ್ಮ ಶತಾಬ್ದಿಯನ್ನೂ ಈ ಶಿಕ್ಷಣ ಸಂಸ್ಥೆ ಈಗಾಗಲೇ ಆರಂಭಿಸಿದೆ.
ಹಾಗಾಗಿ ಈ ಸಲದ ವಿಜ್ಞಾನೋತ್ಸವ ಹೆಚ್ಚು ಮಹತ್ವ ಪಡೆದುಕೊಂಡಿದೆ ಎನ್ನುವುದು ನ್ಯಾಷನಲ್ ಎಜುಕೇಷನ್ ಸೊಸೈಟಿಯ ಹಾಲಿ ಅಧ್ಯಕ್ಷ ಡಾ. ಎ.ಎಚ್.ರಾಮರಾವ್ ಅನಿಸಿಕೆ.
ಉದ್ಘಾಟನಾ ಉಪನ್ಯಾಸದ ವಸ್ತು ಬಾಹ್ಯಾಕಾಶ ತಂತ್ರಜ್ಞಾನ, ಸವಾಲುಗಳು ಮತ್ತು ಭವಿಷ್ಯದ ಸಂಶೋಧನೆ. ಈ ಉಪನ್ಯಾಸವನ್ನು ಇಸ್ರೋ ಅಧ್ಯಕ್ಷ ಡಾ.ಕೆ. ಶಿವನ್ ಜುಲೈ ಒಂದರಂದು ನೀಡಲಿದ್ದಾರೆ.
ನಂತರದ ದಿನಗಳಲ್ಲಿ ಮಣಿಪಾಲ ಆಸ್ಪತ್ರೆಯ ಬೆನ್ನು ಹುರಿ ಚಿಕಿತ್ಸಾ ಕೇಂದ್ರದ ಡಾ.ವಿದ್ಯಾಧರ (ಕವಲು ದಾರಿಯಲ್ಲಿ ವೈದ್ಯಕೀಯ ವೃತ್ತಿ);ಐಐಎಸ್ಸಿಯ ನಿವೃತ್ತ ನಿರ್ದೇಶಕ ಡಾ.ಜಿ. ಪದ್ಮನಾಭನ್ (ಸೊಳ್ಳೆಗಳನ್ನು ಮೂಲೋತ್ಪಾಟನ ಮಾಡಬಲ್ಲೆವೆ...? ಮಾಡಬೇಕೇ); ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ (ಆಧುನಿಕ ಭಾರತದಲ್ಲಿ ಸಂವಿಧಾನದ ಪ್ರಸ್ತುತತೆ); ಡಾ.ಮಯ್ಯ (ಔಷಧ,ವ್ಯಾಧಿಗಳು ಮತ್ತು ವೈದ್ಯರು); ನಿಮ್ಹಾನ್ಸ್ ನಿವೃತ್ತ ನಿರ್ದೇಶಕ ಡಾ.ಪಿ.ಸತೀಶ್ ಚಂದ್ರ (ಮೂರ್ಛೆ ರೋಗವನ್ನು ಅರ್ಥೈಸಿಕೊಳ್ಳುವ ಬಗೆ); ಹಿರಿಯ ಸರ್ಜನ್ ಡಾ.ಕೆ. ಲಕ್ಷ್ಮಣ್ (ಆಧುನಿಕ ವೈದ್ಯಕೀಯ ಸಂಶೋಧನೆ ಮತ್ತು ಇತಿಮಿತಿ); ಮನೋವಿಜ್ಞಾನಿ ಡಾ. ಸಿ.ಆರ್.ಚಂದ್ರಶೇಖರ್ (ನಂಬಿಕೆ ಹೇಗಿರಬೇಕು, ಎಷ್ಟಿರಬೇಕು); ಡಾ. ಸದಾನಂದ ಮಯ್ಯ (ಭಾರತದಲ್ಲಿ ಆಹಾರೋದ್ಯಮ: ಹಿಂದೆ, ಇಂದು ಮತ್ತು ಭವಿಷ್ಯ); ಡಾ.ಸಿ.ಶಿವರಾಂ (ಭೌತ ಶಾಸ್ತ್ರ, ಖಗೋಳಶಾಸ್ತ್ರ ಮತ್ತು ಜೀವಶಾಸ್ತ್ರಗಳಲ್ಲಿ ಉತ್ತರ ಸಿಗದ ಪ್ರಶ್ನೆಗಳು); ಇಸ್ರೊ ಮಾಜಿ ಅಧ್ಯಕ್ಷ ಡಾ. ಎ.ಎಸ್.ಕಿರಣ್ ಕುಮಾರ್ (ಬಾಹ್ಯಾಕಾಶ ತಂತ್ರಜ್ಞಾನ ಎತ್ತ ಸಾಗುತ್ತಿದೆ?); ಟೆಕ್ಸಾಸ್ ವಿಶ್ವವಿದ್ಯಾಲಯದ ಡಾ.ಪುನೀತ್ ಅಯ್ಯಂಗಾರ್ (ಭಾರತದಲ್ಲಿ ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆ) ಮುಂತಾದವರು ಉಪನ್ಯಾಸ ನೀಡಲಿದ್ದಾರೆ ಎನ್ನುತ್ತಾರೆ ಎ.ಎಚ್.ರಾಮರಾವ್.
ಈ 41 ವರ್ಷದಲ್ಲಿ ನೋಬೆಲ್ ಪುರಸ್ಕೃತರೂ ಒಳಗೊಂಡಂತೆ ನೂರಾರು ವಿಜ್ಞಾನಿಗಳು, ಗಣ್ಯರು 2875 ಉಪನ್ಯಾಸ ನೀಡಿದ್ದಾರೆ. ಒಪ್ಪಿಕೊಂಡ ಯಾರೊಬ್ಬರೂ ತಪ್ಪಿಸಿಕೊಂಡಿಲ್ಲ ಎನ್ನುವುದು ಬೆಂಗಳೂರು ವಿಜ್ಞಾನ ವೇದಿಕೆ ನಡೆಸುತ್ತಿರುವ ವಿಜ್ಞಾನ ಉತ್ಸವದ ಗುಣಮೌಲ್ಯಕ್ಕೆ ನಿದರ್ಶನವಾಗಿದೆ.
ಉಪನ್ಯಾಸವಿರದ ದಿನಗಳಲ್ಲಿ ವಿಜ್ಞಾನ ಸಂಬಂಧಿ ಸಾಕ್ಷ್ಯ, ಚಲನಚಿತ್ರಗಳ ಪ್ರದರ್ಶನವಿರುತ್ತದೆ.
ಸ್ಥಳ: ಡಾ. ಎಚ್. ಎನ್.ಮಲ್ಟಿ ಮೀಡಿಯಾ ಹಾಲ್, ನ್ಯಾಷನಲ್ ಕಾಲೇಜು, ಬಸವನಗುಡಿ. ಪ್ರತಿದಿನ ಸಂಜೆ 6

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...