ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಣೆಕಟ್ಟು ಸುರಕ್ಷೆಗೆ ಕಾಯ್ದೆ

ಅಣೆಕಟ್ಟು ಸುರಕ್ಷಾ ಕಾಯ್ದೆಗೆ ಪ್ರಧಾನಿ
ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ. ದೇಶಾದ್ಯಂತ ಎಲ್ಲ
ಜಲಾಶಯಗಳಿಗೆ ಒಂದೇ ರೀತಿಯ ನಿಯಮಾವಳಿ, ಭದ್ರತಾ ವ್ಯವಸ್ಥೆ ಜಾರಿಗೆ ತರುವುದು ಈ ಕಾಯ್ದೆ
ಉದ್ದೇಶವಾಗಿದೆ. ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದ ತಜ್ಞರ ಸಲಹೆಗಳನ್ನು ಪಡೆದು ಈ
ಕಾಯ್ದೆ ರಚಿಸಲಾಗಿದೆ. ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೀವಹಾನಿ, ಆಸ್ತಿ ನಷ್ಟ
ತಡೆಯಲು ಹಲವು ಕ್ರಮಗಳನ್ನು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ಜಲಾಶಯ ಪ್ರದೇಶಗಳಲ್ಲಿ ನಿಗಾ
ಇರಿಸುವುದು, ನಿಯಮಿತ ಪರಿಶೀಲನೆ, ಕಾರ್ಯಾಚರಣೆಯ ನಿರ್ವಹಣೆ ಹಾಗೂ ಭದ್ರತೆಗೆ ದೇಶಾದ್ಯಂತ
ಸಮಾನವಾದ ನೀತಿ ಜಾರಿಗೆ ಬರಲಿದೆ. ಪ್ರಸ್ತುತ ಒಂದೊಂದು ರಾಜ್ಯದಲ್ಲಿ ಒಂದೊಂದು ನೀತಿ
ಜಾರಿಯಲ್ಲಿದೆ.

*ಪ್ರಾಧಿಕಾರ ರಚನೆ:* ನೂತನ ಕಾಯ್ದೆ ಪ್ರಕಾರ, ರಾಷ್ಟ್ರೀಯ ಜಲಾಶಯ ಭದ್ರತಾ ಪ್ರಾಧಿಕಾರ
ರಚಿಸಲಾಗುತ್ತದೆ. ನೀತಿ ನಿರೂಪಣೆ, ಅವುಗಳನ್ನು ಜಾರಿಗೊಳಿಸುವುದು, ಮಾರ್ಗದರ್ಶನ ಮತ್ತಿತರ
ಕಾರ್ಯಗಳನ್ನು ಈ ಸಮಿತಿ ನಿರ್ವಹಿಸಲಿದೆ. ಪ್ರತಿ ರಾಜ್ಯಕ್ಕೂ ಪ್ರತ್ಯೇಕವಾಗಿ ಇಂಥ ಸಮಿತಿ
ರಚಿಸಿಕೊಳ್ಳಲು ಅವಕಾಶವಿದೆ. ರಾಜ್ಯ ಹಾಗೂ ರಾಷ್ಟ್ರೀಯ ಸಮಿತಿಗಳು ಸಮನ್ವಯತೆಯೊಂದಿಗೆ ಕೆಲಸ
ಮಾಡಲಿವೆ. ರಾಷ್ಟ್ರೀಯ ಜಲಾಶಯ ಭದ್ರತಾ ಪ್ರಾಧಿಕಾರ ದೇಶದ ಎಲ್ಲ ಜಲಾಶಯಗಳ ದತ್ತಾಂಶವನ್ನು
ಕ್ರೋಡೀಕರಿಸಿ, ಪರಿಶೀಲನೆ ನಡೆಸುತ್ತದೆ. ಶಿಥಿಲಾವಸ್ಥೆಗೆ ತಲುಪಿರುವ ಡ್ಯಾಂಗಳ ನಿರ್ವಹಣೆ,
ತುರ್ತು ಕ್ರಮಗಳ ಕುರಿತು ಸಂಬಂಧಿಸಿದ ಇಲಾಖೆಗೆ ಸೂಚನೆ ರವಾನಿಸುತ್ತದೆ. ದುರ್ಘಟನೆ, ಭದ್ರತಾ
ಲೋಪ ಸಂಭವಿಸಿದಲ್ಲಿ ಈ ಸಮಿತಿ ತನಿಖೆ ಕೈಗೊಳ್ಳಲಿದೆ. ಕಾಲಕಾಲಕ್ಕೆ ಡ್ಯಾಂಗಳಿಗೆ ಭೇಟಿ
ನೀಡಿ, ಪರಿಶೀಲನೆ ನಡೆಸಲಿದೆ.

*ಸಂಪುಟದ ಇತರ ನಿರ್ಣಯಗಳು*

ನವದೆಹಲಿಯಲ್ಲಿರುವ 3.70 ಎಕರೆಯ ಪ್ರಗತಿ ಮೈದಾನ ನವೀಕರಣ, ನಿರ್ವಹಣೆ ಹಾಗೂ ಹೊಟೇಲ್
ನಿರ್ವಣಕ್ಕೆ ಖಾಸಗಿ ಸಹಭಾಗಿತ್ವ

ರಾಜ್ಯಸಭೆಯಲ್ಲಿ ಅಂಗೀಕಾರಗೊಳ್ಳದೇ ಬಾಕಿ ಇರುವ ನಳಂದಾ ವಿಶ್ವವಿದ್ಯಾಲಯ ಮಸೂದೆ – 2013
ಹಿಂದಕ್ಕೆ

ಕೃಷಿ ಶಿಕ್ಷಣ ವಿಭಾಗ ಹಾಗೂ ಭಾರತೀಯ ಕೃಷಿ ಸಂಶೋಧನಾ ಕೌನ್ಸಿಲ್​ನ ಮೂರು ವರ್ಷದ
ಕಾರ್ಯಸೂಚಿ ರಚನೆಗೆ ನಿರ್ಧಾರ

ಜಲಸಂರಕ್ಷಣೆ ಅಗತ್ಯತೆ ಹಿನ್ನೆಲೆಯಲ್ಲಿ ಸಮಗ್ರ ಜಲ ನಿರ್ವಹಣೆ ಸೂಚ್ಯಂಕ ಮತ್ತು ರಾಜ್ಯಗಳಿಗೆ
ಶ್ರೇಯಾಂಕ ನೀಡುವುದನ್ನು ಜಾರಿಗೊಳಿಸಲು ನೀತಿ ಆಯೋಗ ನಿರ್ಧರಿಸಿದೆ

ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ 24 ಸಾವಿರ ಕೋಟಿ ರೂ. ವಿದೇಶಿ ಹೂಡಿಕೆ ಮಾಡಲು ಸಂಪುಟ
ಒಪ್ಪಿಗೆ ನೀಡಿದೆ. ಈ ಮೂಲಕ ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ ಒಟ್ಟು ಶೇ. 74ರವರೆಗೆ ಹೂಡಿಕೆ
ಮಾಡಲು ಅವಕಾಶ ಸಿಕ್ಕಂತಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...