ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಚೀನಾ ಹಿಂದಿಕ್ಕಿದ ಭಾರತ

ನೋಟು ಅಮಾನ್ಯೀಕರಣದ ನಂತರ ಮೊದಲ ಬಾರಿಗೆ ಭಾರತದ ಜಿಡಿಪಿ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚು ಅಭಿವೃದ್ಧಿ ಕಂಡಿದ್ದು, ಶೇ.7.7ನ್ನು ಮುಟ್ಟಿದೆ. ಪ್ರಸಕ್ತ ತ್ರೖೆ ಮಾಸಿಕ ಅವಧಿಯಲ್ಲಿ ಶೇ.7.4ರ ಬೆಳವಣಿಗೆ ಸಾಧಿಸ ಬಹುದು ಎಂಬ ನಿರೀಕ್ಷೆಯಿತ್ತು. ಈ ಬೆಳವಣಿಗೆಯೊಂದಿಗೆ ಭಾರತವು ಮತ್ತೆ ವಿಶ್ವ ಮಾರುಕಟ್ಟೆಯಲ್ಲಿ ವೇಗವಾಗಿ ಮುನ್ನುಗ್ಗುತ್ತಿರುವ ಆರ್ಥಿಕತೆ ಎಂಬ ಖ್ಯಾತಿಗೆ ಪಾತ್ರವಾಗಿದೆ.
 ನೋಟು ಅಮಾನ್ಯೀಕರಣ ಹಾಗೂ ಜಿಎಸ್​ಟಿ ಅನುಷ್ಠಾನದ ಬಳಿಕ ಭಾರತದ ಆರ್ಥಿಕತೆಯಲ್ಲಿ ತೀವ್ರ ಕುಸಿತ ಕಂಡಿತ್ತು. ಇದು ಅಲ್ಪಕಾಲಿಕ ಹಾಗೂ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ ಎಂದು ಕೇಂದ್ರ ಸರ್ಕಾರವು ಈ ಹಿಂದೆಯೇ ಹೇಳಿದ್ದರೂ, ಭಾರತದ ಆರ್ಥಿಕತೆಗೆ, ನರೇಂದ್ರ ಮೋದಿ ಸರ್ಕಾರಕ್ಕೆ ಆರ್ಥಿಕ ಕುಸಿತ ಭಾರಿ ಹೊಡೆತ ನೀಡಿತ್ತು. 4ನೇ ತ್ರೖೆಮಾಸಿಕದ ಈ ಏರಿಕೆ ಹೊರತಾಗಿಯೂ ಭವಿಷ್ಯದ ಬೆಳವಣಿಗೆ ದರ ಕಠಿಣ ಹಾದಿಯನ್ನು ಕ್ರಮಿಸಬೇಕಿದೆ ಎಂಬ ಮಾತೂ ಕೇಳಿಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಎನ್​ಪಿಎ ಕೂಡ ಜಿಡಿಪಿ ವೃದ್ಧಿಗೆ ಕಂಟಕವಾಗುವ ಲಕ್ಷಣವಿದೆ. ಸದ್ಯ ಚೀನಾ ಶೇ.6.8 ಜಿಡಿಪಿ ಬೆಳವಣಿಗೆ ದರ ಹೊಂದಿದ್ದು, ಭಾರತ ಅದನ್ನು ಮತ್ತೆ ಹಿಂದಿಕ್ಕಿ ಆರ್ಥಿಕ ಬೆಳವಣಿಗೆ ದರದಲ್ಲಿ ಮತ್ತೆ ಮುಂಚೂಣಿಗೆ ಬಂದಿದೆ. ಕಳೆದ ಆರ್ಥಿಕ ವರ್ಷ ಡಿಸೆಂಬರ್​ಗೆ ಶೇ.7.1ರ ಬೆಳವಣಿಗೆ ದರ ನಿರೀಕ್ಷಿಸಿದ್ದರೂ ಶೇ.7ಕ್ಕೆ ನಿಂತಿತ್ತು. ಇದರಿಂದ ಚೀನಾ ಹಿಂದಿಕ್ಕಲು ಸಾಧ್ಯವಾಗಿರಲಿಲ್ಲ. 2017-18 ನೇ ಸಾಲಿನ ಕೊನೆಯ ತ್ರೖೆಮಾಸಿಕಕ್ಕೆ ಶೇ.7.3ರ ಬೆಳವಣಿಗೆ ದರ ನಿರೀಕ್ಷಿಸಲಾಗಿತ್ತು.
ಮುಂದುವರಿಯಲಿದೆಯೇ ನಾಗಾಲೋಟ?
ನೋಟು ಅಮಾನ್ಯೀಕರಣದ ಬಳಿಕ ಕೇಂದ್ರ ಸರ್ಕಾರದ ನಿರೀಕ್ಷೆಗೂ ಕಡಿಮೆ ಬೆಳವಣಿಗೆ ದರವನ್ನು ಜಿಡಿಪಿ ತಲುಪುತ್ತಿತ್ತು. ಇದೇ ಮೊದಲ ಸಲ ಶೇ.04ರ ಹೆಚ್ಚುವರಿ ಬೆಳವಣಿಗೆ ದರ ಕಂಡಿದ್ದು, ಕೇಂದ್ರ ಸರ್ಕಾರಕ್ಕೆ ಚುನಾವಣೆ ವರ್ಷದಲ್ಲಿ ಆಶಾಭಾವನೆ ಮೂಡಿಸಿದೆ. ಇದಕ್ಕೆ ಪೂರಕವಾಗಿ ಭಾರತದಲ್ಲಿ ಈ ಬಾರಿ ಸಾಮಾನ್ಯ ಮುಂಗಾರಿನ ಮುನ್ಸೂಚನೆ ಕೂಡ ದೊರೆತಿರುವುದು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿಲ್ಲ. ಆದಾಗ್ಯೂ ಕಚ್ಚಾತೈಲ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್​ಗೆ 80 ಡಾಲರ್ ದಾಟಿದರೆ ಜಿಡಿಪಿ ಮೇಲೆ ಮತ್ತೆ ಪ್ರತಿಕೂಲ ಪರಿಣಾಮ ಬೀರಬಹುದು. ಅದರೊಂದಿಗೆ ಸುಮಾರು 14 ಲಕ್ಷ ಕೋಟಿ ರೂ. ಎನ್​ಪಿಎ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳ ಹಗರಣಗಳು ಕೂಡ ಭಾರತದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಮೂಡಿಸ್ ವರದಿ ನೀಡಿದೆ. ಇದಕ್ಕಾಗಿಯೇ 2018-19ನೇ ಸಾಲಿನ ಮಧ್ಯಂತರ ಅವಧಿಗೆ ಭಾರತವು ಶೇ.7.3ರಿಂದ 7.5ರ ಪ್ರಗತಿ ದರ ಕಾಣಬಹುದು ಎಂದು ಮೂಡಿಸ್ ಹೇಳಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...