ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಏರುತ್ತಿದೆ ಸಿಸೇರಿಯನ್‌ ಹೆರಿಗೆಯ ಪ್ರಮಾಣ

ಕಲಾವತಿ ಬೈಚಬಾಳ
ಮನೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿದ್ದ ಸಹಜ ಹೆರಿಗೆಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಹೆರಿಗೆಗಳ ಪೈಕಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.
2012 ರಲ್ಲಿ ಸುಮಾರು 8 ಲಕ್ಷ ಹೆರಿಗೆಗಳಾಗಿದ್ದು, ಈ ಪೈಕಿ ಸುಮಾರು 1.73 ಲಕ್ಷ ಸಿಸೇರಿಯನ್‌ ಹೆರಿಗೆಗಳಾಗಿದ್ದವು. ಆದರೆ,  2017 ರಲ್ಲಿ ಸುಮಾರು 9 ಲಕ್ಷ ಹೆರಿಗೆಗಳಾಗಿದ್ದು, ಈ ಪೈಕಿ ಸುಮಾರು 2.56 ಲಕ್ಷ ಸಿಸೇರಿಯನ್‌ ಹೆರಿಗೆಗಳಾಗಿವೆ. ಒಟ್ಟಾರೆ ವಾರ್ಷಿಕ ಹೆರಿಗೆ ಪ್ರಮಾಣದಲ್ಲಿ ಗಣನೀಯವಾಗಿ ಹೆಚ್ಚಳವಾಗದೇ ಇದ್ದರೂ, ಸಿಸೇರಿಯನ್‌ ಹೆರಿಗೆ ಮಾಡಿಸಿಕೊಳ್ಳುವವರ ಸಂಖ್ಯೆ ಐದು ವರ್ಷಗಳಲ್ಲಿ ಗಮನಾರ್ಹವಾಗಿ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಆರೋಗ್ಯ ನಿರ್ವಹಣೆ ಮಾಹಿತಿ ವ್ಯವಸ್ಥೆ (ಎಚ್‌ಎಮ್‌ಐಎಸ್‌) ವರದಿ ತಿಳಿಸಿದೆ ಎಂದು ಇಲಾಖೆಯ ಉಪ ನಿರ್ದೇಶಕ ಎನ್.ರಾಜಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.
ಸಿಸೇರಿಯನ್ ಹೆರಿಗೆಗಳ ಪ್ರಮಾಣ ಹೆಚ್ಚುತ್ತಿರುವುದಕ್ಕೆ ಖಾಸಗಿ ಆಸ್ಪತ್ರೆ ಮಾಲೀಕರ ಲಾಭದ ಆಸೆಯೇ ಕಾರಣ. ಆಸ್ಪತ್ರೆಗೆ ಹಾಗೂ ತಮಗೆ ಲಾಭವಾಗುತ್ತದೆ ಎಂಬ ಉದ್ದೇಶದಿಂದ ಸಣ್ಣಪುಟ್ಟ ಕಾರಣಗಳನ್ನು ನೀಡಿ ಸಿಸೇರಿಯನ್ ಹೆರಿಗೆ ಮಾಡಿಸಲು ವೈದ್ಯರು ಮುಂದಾಗುತ್ತಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ.
ಆದರೆ, ವೈದ್ಯರು ಈ ಮಾತನ್ನು ಒಪ್ಪಲು ತಯಾರಿಲ್ಲ. ಗರ್ಭಿಣಿಯರ ಆರೋಗ್ಯ ಸ್ಥಿತಿ, ಸುಲಭ ಹೆರಿಗೆ ಆಗುವ ಮತ್ತು ಆಗದಿರುವ ಸಾಧ್ಯಾಸಾಧ್ಯತೆಗಳನ್ನು ತಪಾಸಣೆ ನಡೆಸಿದ ಬಳಿಕವೇ ಸಿಸೇರಿಯನ್ ಹೆರಿಗೆ ಬಗ್ಗೆ ತೀರ್ಮಾನಿಸಲಾಗುತ್ತದೆ. ಹಣದ ಆಸೆಗಾಗಿ ಸಿಸೇರಿಯನ್ ಮಾಡಲು ಮುಂದಾಗುವುದಿಲ್ಲ ಎಂಬುದು ವೈದ್ಯ ಸಮೂಹದ ಪ್ರತಿಪಾದನೆ.
ಸಿಸೇರಿಯನ್‌ ಹೆರಿಗೆಗಳು ಕುಟುಂಬಕ್ಕೆ ಆರ್ಥಿಕ ಹೊರೆಯಾಗುತ್ತಿರುವುದರ ಜತೆಗೆ, ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೂ ಪ್ರಭಾವ ಬೀರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ, ಸಿಸೇರಿಯನ್ ಹೆರಿಗೆಗಳ ಬಗ್ಗೆ ಮಾಹಿತಿ ಕಲೆ ಹಾಕಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಅಭಿಮತ
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಒಂದು ದೇಶದಲ್ಲಿ ಒಟ್ಟು ಹೆರಿಗೆಗಳಲ್ಲಿ ಸಿಸೇರಿಯನ್ ಹೆರಿಗೆಗಳ ಪ್ರಮಾಣ ಶೇ10 ರಿಂದ ಶೇ 15 ಇರಬೇಕು. ಮಗುವಿನ ಜನನ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾದಲ್ಲಿ ಮತ್ತು ತಾಯಿಯ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಮಾತ್ರವೇ ಸಿಸೇರಿಯನ್ ಹೆರಿಗೆ ಮಾಡಿಸಬೇಕು ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ.  
ಕಡ್ಡಾಯ ತರಬೇತಿ
‘ಗ್ರಾಮ ಮತ್ತು ತಾಲೂಕುಗಳಲ್ಲಿ ಆಶಾ ಕಾರ್ಯಕರ್ತೆಯರಿಂದ ಹೆರಿಗೆ ಕುರಿತು ಮಾಹಿತಿ ಮತ್ತು ಜಾಗೃತಿ ನೀಡಲಾಗುತ್ತಿದೆ. ತುರ್ತು ಹೆರಿಗೆಗಾಗಿ ತಾಲೂಕುಗಳಲ್ಲಿ ವಾರದ 24 ಗಂಟೆ ಸೇವಾ ಸೌಲಭ್ಯ ನೀಡಲು ಉಪಕರಣ ಹಾಗೂ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದು ಉಪ ನಿರ್ದೇಶಕ ಎನ್.ರಾಜಕುಮಾರ್‌ ತಿಳಿಸಿದರು.
‘ತಾಯಿ ಮತ್ತು ಮಗುವಿನ ರಕ್ಷಣೆ ಕುರಿತು ವೈದ್ಯರು ಮತ್ತು ಸಿಬ್ಬಂದಿಗಳಿಗೆ ಕಡ್ಡಾಯ ತರಬೇತಿ ನೀಡಲಾಗುತ್ತಿದೆ. ಗರ್ಭಿಣಿಯರಿಗೆ ಸಹಜ ಹೆರಿಗೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈ ಮೂಲಕ ಸೀಸೇರಿಯನ್‌ ಹೆರಿಗೆಗೆ ಕಡಿವಾಣ ಹಾಕಲು ಪ್ರಯತ್ನಿಸಲಾಗುತ್ತಿದೆ’ ಎಂದರು. 
ನೋವಿಲ್ಲದೆ ಹೆರಿಗೆ ಬಯಕೆ...!
‘ನೋವಿಲ್ಲದೆ ಹೆರಿಗೆ ಬಯಸುವ ಗರ್ಭಿಣಿಯ‌ರು, ವೈದ್ಯರು ಮತ್ತು ಜೀವ ವಿಮಾ ಕಂಪನಿಗಳೇ ಸಿಸೇರಿಯನ್‌ ಹೆರಿಗೆಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲು ಮುಖ್ಯ ಕಾರಣ’ ಎಂದು ಮಾತೃ ಮೆಡಿಕೆರ್‌ ಸಂಸ್ಥೆಯ ಡಾ.ಜಯಲಕ್ಷ್ಮೀ ತಿಳಿಸಿದರು.
‘ಪ್ರಸ್ತುತ ಖಾಸಗಿ ಆಸ್ಪತ್ರೆಗಳಲ್ಲಿ ಸಹಜ ಹೆರಿಗೆಗೆ ಕನಿಷ್ಠ ₹40 ರಿಂದ ಗರಿಷ್ಠ ₹70 ಸಾವಿರ ಖರ್ಚಾಗುತ್ತಿದ್ದು, ಸಿಸೇರಿಯನ್‌ ಹೆರಿಗೆಗೆ ಕನಿಷ್ಠ ₹60 ರಿಂದ ಗರಿಷ್ಠ ₹80 ಸಾವಿರ, ಕೆಲವೊಮ್ಮೆ ₹1 ಲಕ್ಷಕ್ಕೂ ಮೀರಿ ಖರ್ಚಾಗುತ್ತದೆ’ ಎಂದೂ ಹೇಳಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....