ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸಿಂಗಾಪುರ ಶೃಂಗ ಭಾರತಕ್ಕೆ ಲಾಭ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು
ಉತ್ತರಕೊರಿಯಾ ನಾಯಕ ಕಿಮ್ ಜಾಂಗ್ ಉನ್​ರ ಐತಿಹಾಸಿಕ ಸಿಂಗಾಪುರ ಭೇಟಿ ಜಾಗತಿಕವಾಗಿ ಮೂಡಿದ್ದ
ಯುದ್ಧದ ಕಾಮೋಡವನ್ನು ಸರಿಸಿದೆ. ಅಷ್ಟೇ ಅಲ್ಲ, ಉ.ಕೊರಿಯಾ ಜಗತ್ತಿಗೆ ತೆರೆದು ಕೊಳ್ಳಲು
ಅವಕಾಶ ದೊರೆತಿದೆ. ಈ ಬೆಳವಣಿಗೆಯನ್ನು ಭಾರತವೂ ಸ್ವಾಗತಿಸಿದೆ. ಈ ಮಾತುಕತೆಯಿಂದ ಭಾರತಕ್ಕೂ
ಹಲವು ಲಾಭಗಳು ಆಗಲಿವೆ.

ಉ.ಕೊರಿಯಾ- ಪಾಕ್ ಮಧ್ಯೆ ಇರುವ ಅಣ್ವಸ್ತ್ರ ಸಂಬಂಧದ ಬಗ್ಗೆ ಭಾರತ ತನಿಖೆಗೆ
ಒತ್ತಾಯಿಸುತ್ತಿದೆ. ಈಗ ಅಮೆರಿಕ ಮತ್ತು ಉ.ಕೊರಿಯಾ ಮಧ್ಯೆ ಆಗಿರುವ ಸಮಗ್ರ
ನಿಶ್ಶಸ್ತ್ರೀಕರಣದ ಒಪ್ಪಂದ ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಆಗಬಹುದು.

ಉ.ಕೊರಿಯಾ ಮೇಲೆ ನಿರ್ಬಂಧ ಹೇರುವುದಕ್ಕೂ ಮುನ್ನ ಈ ದೇಶದ ಜತೆ ವ್ಯವಹಾರ ನಡೆಸುತ್ತಿದ್ದ
ರಾಷ್ಟ್ರಗಳ ಪೈಕಿ ಭಾರತ ಮೂರನೇ ದೊಡ್ಡ ರಾಷ್ಟ್ರ. ಈಗ ನಿರ್ಬಂಧ ತೆರವುಗೊಂಡರೆ ಈ ವಹಿವಾಟು
ಮತ್ತೆ ಆರಂಭವಾಗಿ ಭಾರತದ ವಾಣಿಜ್ಯೋದ್ಯಮಕ್ಕೆ ಲಾಭವಾಗುತ್ತದೆ. (2016ರಲ್ಲಿ ಉ.ಕೊರಿಯಾ
ಭಾರತದ ಜತೆ 58.99 ದಶಲಕ್ಷ ಡಾಲರ್ ವಹಿವಾಟು ನಡೆಸಿತ್ತು)

ಅಮೆರಿಕ ಜತೆ ದೃಢ ಮೈತ್ರಿ ಏರ್ಪಡುವುದರಿಂದ ಉ.ಕೊರಿಯಾದಲ್ಲಿ ಚೀನಾದ ಪ್ರಭಾವ ತಗ್ಗುತ್ತದೆ.
ಇದು ಭಾರತಕ್ಕೆ ಲಾಭಕರವಾಗುವ ಸನ್ನಿವೇಶ.

ಸಿಂಗಾಪುರದ ಶೃಂಗಸಭೆ ನಡೆಯವುದಕ್ಕೂ ಕೆಲವು ವಾರ ಮೊದಲು ವಿದೇಶಾಂಗ ಖಾತೆ ರಾಜ್ಯ ಸಚಿವ
ವಿ.ಕೆ.ಸಿಂಗ್ ಅವರು ಪ್ಯೋಂಗ್​ಯಾಂಗ್ ಭೇಟಿ ನೀಡಿದ್ದರು. 1998ರ ನಂತರ ಭಾರತದ ಉನ್ನತ
ಮಟ್ಟದ ನಿಯೋಗ ಉ.ಕೊರಿಯಾಕ್ಕೆ ನೀಡಿದ ಭೇಟಿಯಾಗಿತ್ತು.

*ಟ್ರಂಪ್​ಗೆ ಕಿಮ್ ಆಹ್ವಾನ*

ಸಿಂಗಾಪುರದ ಶೃಂಗ ಸಭೆಯ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಪಿಯಾಂಗ್​ಯಾಂಗ್​ಗೆ
ಭೇಟಿ ನೀಡುವಂತೆ ಉ.ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಆಹ್ವಾನ ನೀಡಿದ್ದು, ಅದನ್ನು ಅವರು
ಒಪ್ಪಿಕೊಂಡಿರುವುದು ಕೊರಿಯಾ ಪ್ರಾದೇಶಿಕದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸುವಂತೆ
ಮಾಡುತ್ತದೆೆ ಎಂದು ಉ.ಕೊರಿಯಾ ಸರ್ಕಾರಿ ಸ್ವಾಮ್ಯದ ಕೆಸಿಎನ್​ಎ ಸುದ್ದಿಸಂಸ್ಥೆ
ವಿಶ್ಲೇಷಿಸಿದೆ.

*ಸಂಚಾರಿ ಶೌಚ ಘಟಕ ತಂದಿದ್ದ ಕಿಮ್ ಜಾಂಗ್*

ಅಮೆರಿಕ ಅಧ್ಯಕ್ಷರ ಜತೆಗೆ ಐತಿಹಾಸಿಕ ಮಾತುಕತೆಗಾಗಿ ಸಿಂಗಾಪುರದಲ್ಲಿ ಮೂರು ದಿನ
ಉಳಿದುಕೊಂಡಿದ್ದ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ತಮ್ಮ ದೇಶದಿಂದಲೇ ಸಂಚಾರಿ ಸ್ನಾನ
ಮತ್ತು ಶೌಚ ಘಟಕವನ್ನು ತಂದಿದ್ದರು. ಅಷ್ಟೇ ಅಲ್ಲ, ತಮಗೆ ಬೇಕಾದ ಆಹಾರ ವಸ್ತುಗಳನ್ನೂ
ಸ್ವದೇಶದಿಂದಲೇ ತಂದುಕೊಂಡಿದ್ದರು. ಜಾಗತಿಕ ಮಟ್ಟದಲ್ಲಿ ಜೀವಬೆದರಿಕೆ ಇರುವ ಕಾರಣ ಕಿಮ್
ಸಿಂಗಾಪುರದ ಸೇಂಟ್ ರೆಗಿಸ್ ಹೋಟೆಲ್​ನಲ್ಲಿ ಯಾವುದನ್ನೂ ಬಳಸಿಲ್ಲ ಎಂದು ವರದಿಯಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...