ಲಂಡನ್: ದತ್ತಾಂಶವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಳಕೆದಾರರ ಮಾಹಿತಿಯನ್ನು ಕಾಪಾಡಲು ವಿಫಲವಾದ ಫೇಸ್ಬುಕ್ ಸಂಸ್ಥೆಗೆ ಬ್ರಿಟನ್ ಸರ್ಕಾರ 5 ಲಕ್ಷ ಪೌಂಡ್ಸ್ (6,63,000 ಅಮೆರಿಕನ್ ಡಾಲರ್) ದಂಡ ವಿಧಿಸಿದೆ ಎಂದು ಬ್ರಿಟನ್ ಪಾರ್ಲಿಮೆಂಟ್ನ ಮಾಧ್ಯಮ ಸಮಿತಿಯ ಅಧ್ಯಕ್ಷ ಡಾಮಿಯನ್ ಕಾಲಿನ್ಸ್ ತಿಳಿಸಿದ್ದಾರೆ.
ಕೇಂಬ್ರಿಜ್ ಅನಾಲಿಟಿಕಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ನ ಮಾಹಿತಿ ಆಯೋಗ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ. ತನಿಖೆಯಿಂದ ಫೇಸ್ಬುಕ್ ಕಂಪನಿ ಬಳಕೆದಾರರ ಮಾಹಿತಿಯನ್ನು ರಕ್ಷಿಸಲು ವಿಫಲವಾಗಿರುವುದು ಕಂಡು ಬಂದಿದೆ ಎಂದು ಡಾಮಿಯನ್ ತಿಳಿಸಿದ್ದಾರೆ.
ಫೇಸ್ಬುಕ್ ಬಳಕೆದಾರರ ದತ್ತಾಂಶ ಬಳಸಿಕೊಂಡು ಅಮೆರಿಕದ ಅಧ್ಯಕ್ಷೀಯ ಚುನಾವಣೆ(2016)ಯಲ್ಲಿ ಟ್ರಂಪ್ ಪರ ಕೆಲಸ ಮಾಡಿದ ಆರೋಪವನ್ನು ಫೇಸ್ಬುಕ್ ಕಾರ್ಯವ್ಯಾಪ್ತಿಯಲ್ಲಿ ಬರುವ ಕೇಂಬ್ರಿಜ್ ಅನಾಲಿಟಿಕಾ ಎಂಬ ಸಂಸ್ಥೆ ಎದುರಿಸುತ್ತಿದೆ.
ಏನಿದು ಕೇಂಬ್ರಿಜ್ ಅನಾಲಿಟಿಕಾ ಪ್ರಕರಣ?
ದತ್ತಾಂಶ ವಿಶ್ಲೇಷಣೆ ಮಾಡುವ ಕೇಂಬ್ರಿಜ್ ಅನಾಲಿಟಿಕಾ ಸಂಸ್ಥೆ ಈ ಕೃತ್ಯದಲ್ಲಿ ಪ್ರಮುಖ ಪಾತ್ರವಹಿಸಿದೆ ಎನ್ನಲಾಗಿದೆ. ಲಂಡನ್ನ ದಿ ಅಬ್ಸರ್ವರ್ ಮತ್ತು ನ್ಯೂಯಾರ್ಕ್ ಟೈಮ್ಸ್ನ ವರದಿಗಾರರು ಕುಟುಕು ಕಾರ್ಯಾಚರಣೆ ನಡೆಸಿ ಪ್ರಕಟಿಸಿದ ವರದಿ ಪ್ರಕಾರ, ಬಳಕೆದಾರರ ಅನುಮತಿ ಇಲ್ಲದೆ ಕೇಂಬ್ರಿಜ್ ಅನಾಲಿಟಿಕಾ ಸಂಸ್ಥೆ ಅಂದಾಜು 5 ಕೋಟಿಗೂ ಹೆಚ್ಚು ಬಳಕೆದಾರರ ದತ್ತಾಂಶ ಸಂಗ್ರಹಿಸಿದೆ. ಇದನ್ನು ಬಳಸಿ ಕೊಂಡು 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರ ಅಭಿಪ್ರಾಯ ಮೂಡಿಸಲು ಪ್ರಯತ್ನಿಸಿದೆ ಎಂದು ಆರೋಪಿಸಲಾಗಿತ್ತು. (ಏಜೆನ್ಸೀಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ