ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮೆಗಾ ಡೇರಿಗೆ ಕೇಂದ್ರ ನೆರವು

ನವದೆಹಲಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಲಿನ ಮೆಗಾ ಡೇರಿ ಸ್ಥಾಪಿಸಲು ಕೇಂದ್ರ ಸರ್ಕಾರ 900 ಕೋಟಿ ರೂ. ನೆರವು ನೀಡಲು ಒಪ್ಪಿಕೊಂಡಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಸನ, ಕೋಲಾರ ಹಾಗೂ ದಕ್ಷಿಣ ಕನ್ನಡ ಸೇರಿ ಅನೇಕ ಜಿಲ್ಲೆಗಳಲ್ಲಿ ಮೆಗಾ ಡೇರಿಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಉದ್ದೇಶ. ಇದಕ್ಕೆ ಕೇಂದ್ರದಿಂದ ಸೂಕ್ತ ಪ್ರತಿಸ್ಪಂದನೆ ಸಿಕ್ಕಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಮ್ ವಿಲಾಸ್ ಪಾಸ್ವಾನ್, ರಾಧಾ ಮೋಹನ್ ಸಿಂಗ್, ನಿರ್ಮಲಾ ಸೀತಾರಾಮನ್ ನಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.
ರಾಜ್ಯದ ಒಣಭೂಮಿಯಲ್ಲಿ ಸಹಜ ಕೃಷಿ ಉತ್ತೇಜನಕ್ಕಾಗಿ 1,000 ಕೋಟಿ ರೂ. ವಿಶೇಷ ಅನುದಾನವನ್ನು ನೀಡುವಂತೆ ಕುಮಾರಸ್ವಾಮಿ, ಕೇಂದ್ರ ಸಚಿವರಾದ ರಾಧಾ ಮೋಹನ್ ಸಿಂಗ್ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕೇಂದ್ರ ಸರ್ಕಾರ ಸಹಜ ಕೃಷಿ ಬೆಂಬಲಿಸುತ್ತಿದೆ. ಹೀಗಾಗಿ, ಅಗತ್ಯವಿರುವ ಅನುದಾನವನ್ನು ಒದಗಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
ನಬಾರ್ಡ್ ಬ್ಯಾಂಕ್​ಗಳು ನೀಡುವ ಆರ್ಥಿಕ ಸಹಾಯದ ಪ್ರಮಾಣವನ್ನು ಶೇ.40ರಿಂದ 75ಕ್ಕೇರಿಸಬೇಕು ಎಂದು ಸಿಎಂ ಕೋರಿದರು. ಶೇ.60ಕ್ಕೆ ಏರಿಕೆ ಮಾಡಿಕೊಡುವುದಾಗಿ ಕೃಷಿ ಸಚಿವರು ತಿಳಿಸಿದರು. ಮಾರುಕಟ್ಟೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಚರಂಡಿ ಮತ್ತು ಗೋದಾಮು ನಿರ್ವಣಕ್ಕಾಗಿ -ಠಿ;600 ಕೋಟಿ ಒದಗಿಸುವ ಕೋರಿಕೆ ಪರಿಶೀಲಿಸುವುದಾಗಿ ಹೇಳಿದರು. ರಾಜ್ಯದಲ್ಲಿ ನೆಫೆಡ್ ಸುಮಾರು 13.44 ಲಕ್ಷ ಕ್ವಿಂಟಾಲ್ ಕಡಲೆಯನ್ನು 2017-18ರಲ್ಲಿ ಖರೀದಿಸಿದೆ. ನೆಫೆಡ್​ಗೆ
ಬಾಕಿ ಮೊತ್ತ ಬಿಡುಗಡೆ ಕೋರಿಕೆಗೆ ಪ್ರತಿಕ್ರಿಯಿಸಿ, ಈಗಾಗಲೇ ಮೊದಲ ಕಂತಿನ ರೂಪದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬಳಕೆ ಪ್ರಮಾಣ ಪತ್ರ ಸಲ್ಲಿಸಿದ ತಕ್ಷಣ ಉಳಿದ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.
ಹಾಸನ ಬಗ್ಗೆ ಅತ್ಯಾಸಕ್ತಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಮಂಗಳವಾರ ಭೇಟಿ ಮಾಡಿದಾಗ ಹಾಸನಕ್ಕೆ ಸಂಬಂಧಿಸಿದ ರಸ್ತೆಗಳ ಬಗ್ಗೆ ಮನವಿ ಮಾಡಲಾಗಿತ್ತು. ಬುಧವಾರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭೇಟಿಯಲ್ಲೂ ಮತ್ತೆ ಹಾಸನದ್ದೇ ಪ್ರಸ್ತಾಪವಾಗಿದೆ.
2 ದಿನ ಭೇಟಿ ಅನುದಾನ -ಠಿ;2,500 ಕೋಟಿ
ನವದೆಹಲಿ: ಕೇಂದ್ರ ಸರ್ಕಾರ ವಿವಿಧ ಸಚಿವರೊಂದಿಗೆ ಎರಡು ದಿನಗಳಿಂದ ನಡೆಸಿದ ಮಾತುಕತೆಯಿಂದಾಗಿ ವಿವಿಧ ಯೋಜನೆಗಳಿಗೆ ಹೆಚ್ಚುವರಿಯಾಗಿ 2,500 ಕೋಟಿ ರೂ. ಅನುದಾನ ಪಡೆಯಲು ಸಾಧ್ಯವಾಗಿದ್ದು, ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸಂಸದರ ಸಭೆಗಾಗಿ ದೆಹಲಿಗೆ ಆಗಮಿಸಿದ್ದ ಕುಮಾರಸ್ವಾಮಿ, ಕೇಂದ್ರ ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು, ರಕ್ಷಣಾ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಆಹಾರ ಸಚಿವ ರಾಮ್ ವಿಲಾಸ್​ಪಾಸ್ವಾನ್ ಜತೆಗಿನ ಚರ್ಚೆ ವೇಳೆ 2014ರಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತ 954 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದ್ದಾರೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...