ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಡಿಜಿಲಾಕರ್ ಆಪ್​ನಲ್ಲಿ ಪಿಯುಸಿ ಅಂಕಪಟ್ಟಿ

ದ್ವಿತೀಯ ಪಿಯುಸಿ ಅಂಕಪಟ್ಟಿ ಇನ್ನು ಡಿಜಿಟಲ್ ರೂಪದಲ್ಲೂ ವಿದ್ಯಾರ್ಥಿಗಳ ಕೈಸೇರಲಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಡಿಜಿಲಾಕರ್ ಆಪ್ ಮೂಲಕ ವಿದ್ಯಾರ್ಥಿಗಳು ಡಿಜಿಟಲ್ ಮಾದರಿ ಅಂಕಪಟ್ಟಿ ಪಡೆಯಬಹುದು.
2018ರ ಮಾರ್ಚ್​ನಲ್ಲಿ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಅಪ್​ಲೋಡ್ ಮಾಡಿದೆ. 2018-19ನೇ ಸಾಲಿನಿಂದ ಪ್ರತಿವರ್ಷ ಡಿಜಿಟಲ್ ಅಂಕಪಟ್ಟಿ ಅಪ್​ಲೋಡ್ ಮಾಡಲು ಇಲಾಖೆ ನಿರ್ಧರಿಸಿದೆ.
ಪ್ರಕ್ರಿಯೆ ಹೇಗೆ?: ವಿದ್ಯಾರ್ಥಿಗಳು ಸ್ಮಾರ್ಟ್​ಫೋನ್​ನಲ್ಲಿ ಡಿಜಿಲಾಕರ್ ಆಪ್ ಡೌನ್​ಲೋಡ್ ಮಾಡಿಕೊಂಡು, ಮೊಬೈಲ್ ಸಂಖ್ಯೆ ನಮೂದಿಸಬೇಕು(ವೆಬ್​ಸೈಟ್ ಮುಖಾಂತರವೂ ಲಾಗ್​ಇನ್ ಆಗಬಹುದು). ಈ ಸಂದರ್ಭ ಆಧಾರ್ ನೋಂದಣಿ ವೇಳೆ ಸಲ್ಲಿಸಿದ ಮೊಬೈಲ್ ಸಂಖ್ಯೆಗೆ ಒನ್ ಟೈಂ ಪಾಸ್​ವರ್ಡ್(ಒಟಿಪಿ) ರವಾನೆಯಾಗಲಿದೆ. ಆ ಪಾಸ್​ವರ್ಡ್ ಬಳಸಿ ಯೂಸರ್ ನೇಮ್ ಮತ್ತು ಪಾಸ್​ವರ್ಡ್ ರಚಿಸಬೇಕು. ಲಾಗ್​ಇನ್ ಆದ ನಂತರದಲ್ಲಿ ಆಧಾರ್ ಸಂಖ್ಯೆ ನಮೂದಿಸಬೇಕು(ಆಧಾರ್ ಜೋಡಣೆಯಾಗದೆ ಇದ್ದಲ್ಲಿ ಡಿಜಿಟಲ್ ಅಂಕಪಟ್ಟಿ ಪಡೆಯಲು ಸಾಧ್ಯವಿಲ್ಲ). ಆಧಾರ್ ಸಂಖ್ಯೆ ನಮೂದಿಸಿದ ನಂತರದಲ್ಲಿ ಇಶ್ಯೂಡ್ ವಿಭಾಗದಲ್ಲಿ ‘ಡಿಪಾರ್ಟ್​ವೆುಂಟ್ ಆಫ್ ಪ್ರೀ ಯೂನಿವರ್ಸಿಟಿ ಎಜುಕೇಷನ್, ಕರ್ನಾಟಕ’ ಎಂಬುದನ್ನು ಆಯ್ಕೆ ಮಾಡಬೇಕು. ನೋಂದಣಿ ಸಂಖ್ಯೆ ಹಾಗೂ ಉತ್ತೀರ್ಣರಾದ ವರ್ಷ ನಮೂದಿಸಿ ಅಂಕಪಟ್ಟಿ ಪಡೆಯಬಹುದಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಗುರುವಾರ ಮಧ್ಯಾಹ್ನ 12 ಗಂಟೆ ನಂತರ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್​ಎಂಎಸ್ ಮುಖಾಂತರ ಫಲಿತಾಂಶ ಕಳುಹಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಜು.20ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಶಾಲೆಗಳಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಲು ಆನ್​ಲೈನ್​ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಛಾಯಾಪ್ರತಿಗಳಿಗೆ ಜು.19ರಿಂದ ಜು.28ರವರೆಗೆ ಅರ್ಜಿ ಸಲ್ಲಿಸಬಹುದು. ಮರುಮೌಲ್ಯಮಾಪನಕ್ಕೆ ಜು.21ರಿಂದ ಆ.4ರವರೆಗೆ ಅರ್ಜಿ ಸಲ್ಲಿಸಬಹುದು. ಜೂ.21ರಿಂದ 28ರವರೆಗೆ ನಡೆದ ಪೂರಕ ಪರೀಕ್ಷೆಗೆ 2,08,151 ವಿದ್ಯಾರ್ಥಿಗಳು ಹಾಜರಾಗಿದ್ದು 84,701 ಮಕ್ಕಳು ಉತ್ತೀರ್ಣರಾಗಿದ್ದಾರೆ. ಶೇ.40.69 ಫಲಿತಾಂಶ ದಾಖಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವೆಬ್​ಸೈಟ್: www.kseeb.kar.nic.in. ಫಲಿತಾಂಶ ಪ್ರಕಟವಾಗುವ ವೆಬ್​ಸೈಟ್: http://sslc.kar.nic.in, http://karresults.nic.in

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...