ಬೆಂಗಳೂರು: ಬುಡಕಟ್ಟು ಜನರ ಮನೆ ಬಾಗಿಲಲ್ಲೇ ವೈದ್ಯಕೀಯ ಸೌಲಭ್ಯ ನೀಡುವ ಸಂಚಾರಿ ಆರೋಗ್ಯ ಘಟಕ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ತಲಾ ₹50 ಲಕ್ಷ ವೆಚ್ಚದಲ್ಲಿ ಒಟ್ಟು ₹8 ಕೋಟಿಯ 16 ಸಂಚಾರಿ ಆರೋಗ್ಯ ಘಟಕಗಳನ್ನು ಸಜ್ಜುಗೊಳಿಸಲಾಗಿದೆ.
ಜೇನು ಕುರುಬ, ಕೊರಗ ಮತ್ತು ಅರಣ್ಯ ಅವಲಂಬಿತ ಬುಡಕಟ್ಟು ಜನರು ಎಂಟು ಜಿಲ್ಲೆಗಳಲ್ಲಿ ನೆಲೆಸಿದ್ದು, ಈ ಜಿಲ್ಲೆಗಳಲ್ಲಿ ತಲಾ ಎರಡು ಸಂಚಾರಿ ಘಟಕಗಳು ಕಾರ್ಯೋನ್ಮುಖವಾಗಲಿವೆ.
ಮೊದಲನೇ ಹಂತದಲ್ಲಿ ಕೊಡಗು ಜಿಲ್ಲೆಯ ಸೋಮವಾರ ಪೇಟೆ, ವಿರಾಜಪೇಟೆ ಮತ್ತು ಮಡಿಕೇರಿ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಮತ್ತು ಹುಣಸೂರು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಯಳಂದೂರು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳಲ್ಲಿ ಸಂಚಾರಿ ಆರೋಗ್ಯ ಘಟಕಗಳ ಸೇವೆ ಆರಂಭಗೊಳ್ಳಲಿವೆ.
ಎರಡನೇ ಹಂತದಲ್ಲಿ ದಕ್ಷಿಣ ಕನ್ನಡದ ಬಂಟ್ವಾಳ ಹಾಗೂ ಪುತ್ತೂರು, ಉಡುಪಿಯ ಕುಂದಾಪುರ ಮತ್ತು ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ತರೀಕೆರೆ ತಾಲ್ಲೂಕು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮತ್ತು ಉತ್ತರ ಕನ್ನಡದ ಹಳಿಯಾಳ ತಾಲ್ಲೂಕಿನಲ್ಲಿ ಉಳಿದ ಎಂಟು ಸಂಚಾರಿ ಘಟಕಗಳು ಕಾರ್ಯಾರಂಭಿಸಲಿವೆ.
ಪ್ರತಿ ಸಂಚಾರಿ ಆರೋಗ್ಯ ಘಟಕವು ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್, ಕಿರಿಯ ಆರೋಗ್ಯ ಸಹಾಯಕಿ ಹಾಗೂ ಚಾಲಕರ ತಂಡವನ್ನು ಒಳಗೊಂಡಿರುತ್ತದೆ. ಸಂಚಾರಿ ಘಟಕವು ಪ್ರತಿನಿತ್ಯ ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಗ್ರಾಮಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ, ಆರೋಗ್ಯ ಜಾಗೃತಿ ಮತ್ತು ಸರಳ ಆರೋಗ್ಯ ಸೇವೆ ನೀಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರೋಗಿಗಳಿಗೆ ಅವಶ್ಯವಿರುವ ಔಷಧ ಸಾಮಗ್ರಿಗಳು ಈ ಸಂಚಾರಿ ಘಟಕದಲ್ಲಿ ಲಭ್ಯವಿರಲಿದ್ದು, ಅವಶ್ಯವಿರುವ ರೋಗಿಗಳಿಗೆ ಔಷಧಗಳನ್ನೂ ಸ್ಥಳದಲ್ಲಿಯೇ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ