ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಎಜುಸ್ಯಾಟ್ ಹೋಯ್ತು ಹ್ಯಾಂಗ್​ಔಟ್ ಬೋಧನೆ ಬಂತು!

ದೇವರಾಜ್ ಎಲ್.
ಬೆಂಗಳೂರು: ಉಪಗ್ರಹ ಆಧಾರಿತ ‘ಎಜುಸ್ಯಾಟ್’ ವ್ಯವಸ್ಥೆಗೆ ತಿಲಾಂಜಲಿ ನೀಡಿ ಹೊಸದಾಗಿ ‘ಆನ್​ಲೈನ್ ಇಂಟರಾಕ್ಟೀವ್’ ಯೋಜನೆ ಜಾರಿಗೆ ತಾಂತ್ರಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಎಜುಸ್ಯಾಟ್ ಮೂಲಕ ಕೇವಲ ರೇಕಾರ್ಡ್ ಆಗಿದ್ದ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳಿನ್ನು ಗೂಗಲ್ ಹ್ಯಾಂಗ್​ಔಟ್ ಮೂಲಕ ಲೈವ್ ಆಗಿ ಪಾಠ ಕೇಳಬಹುದಾಗಿದ್ದು, ಸ್ಥಳದಲ್ಲೇ ಅನುಮಾನಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಸಿಗಲಿದೆ.
ಈಗಾಗಲೇ ತಾಂತ್ರಿಕ ಶಿಕ್ಷಣ ಇಲಾಖೆ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ ಪತ್ರ ಬರೆದು 2018-19ನೇ ಸಾಲಿನಿಂದ ಎಜುಸ್ಯಾಟ್ ಕಾರ್ಯಕ್ರಮದ ಬದಲು ಇಂಟರಾಕ್ಟೀವ್ ಪದ್ಧತಿ ಅಳವಡಿಸಿಕೊಳ್ಳಲು ಸೂಚಿಸಿದ್ದು, ಎಜುಸ್ಯಾಟ್ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದ ಕೊಠಡಿಗಳನ್ನು ಬಳಸಿಕೊಳ್ಳಲು ಸೂಚಿಸಿದೆ.
ಕಾರಣವೇನು?: ಎಜುಸ್ಯಾಟ್ ತಾಂತ್ರಿಕ ಶಿಕ್ಷಣ ಇಲಾಖೆಗೆ ಆರ್ಥಿಕ ಹೊರೆಯಾಗಿದ್ದು, ಅಧ್ಯಾಪಕರ ಬೋಧನೆಯ ವಿಡಿಯೋ ರೆಕಾರ್ಡ್​ಗಾಗಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಸ್ಟುಡಿಯೋವನ್ನು ಬಳಸಿಕೊಳ್ಳ ಲಾಗುತ್ತಿದ್ದು, ಇದಕ್ಕಾಗಿ ಡಿಎಸ್​ಇಆರ್​ಟಿಗೆ ವಾರ್ಷಿಕ 3.58 ಲಕ್ಷ ರೂ. ನೀಡಲಾಗುತ್ತಿತ್ತು. ಬೋಧಕರಿಗೆ ವಾರ್ಷಿಕ 2 ಲಕ್ಷ ರೂ. ಗೌರವ ಧನ ನೀಡಲಾಗುತ್ತಿತ್ತು.
ಎಜುಸ್ಯಾಟ್ ಏಕಮುಖ ಸಂವಹನ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳ ಗೊಂದಲಕ್ಕೆ ತಕ್ಷಣ ಪರಿಹಾರ ಸಿಗುತ್ತಿರಲಿಲ್ಲ. ಆದರೆ ನೂತನ ಯೋಜನೆಯಲ್ಲಿ ಪರಸ್ಪರ ಸಂವಹನಕ್ಕೆ ಅವಕಾಶವಿದ್ದು, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲೇ ಸುಸಜ್ಜಿತ ರೆಕಾರ್ಡಿಂಗ್ ಸ್ಟುಡಿಯೋ ನಿರ್ಮಾಣ ಮಾಡಲಾಗಿದೆ.
ಎಜುಸ್ಯಾಟ್: 2008-09ನೇ ಸಾಲಿನಿಂದ ತಾಂತ್ರಿಕ ಶಿಕ್ಷಣ ಇಲಾಖೆಯು ಈ ಯೋಜನೆಯನ್ನು ಜಾರಿಗೆ ತಂದಿತ್ತು. ಅಂದಾಜು 200 ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 2 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಯಾಗಿದ್ದರು. ಸಂಪನ್ಮೂಲ ವ್ಯಕ್ತಿಗಳಿಂದ ವಿಷಯ ಬೋಧನೆ ಮಾಡಿಸಿ ಅದರ ವಿಡಿಯೋವನ್ನು ತನ್ನ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡುತ್ತಿತ್ತು. ಕಾಲೇಜಿನವರು ಇದನ್ನು ಡೌನ್​ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳ ಮುಂದೆ ಪ್ರಸಾರ ಮಾಡುತ್ತಿದ್ದರು.
2016 ರಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಎಜುಸ್ಯಾಟ್ ಅನುಷ್ಠಾನದ ಬಗ್ಗೆ ತಿಳಿಯಲು ಸಮಿತಿ ರಚಿಸಿತ್ತು. ಸಮಿತಿಯ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿ ಕೆಲವು ಕಡೆ ಇಂಟರ್​ನೆಟ್ ಸಮಸ್ಯೆ ಮತ್ತು ರಿಸೀವ್ ಒನ್ಲಿ ಟರ್ವಿುನಲ್(ಆರ್​ಒಟಿಎಸ್) ಲಭ್ಯವಾಗದಿರುವುದರಿಂದ ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲವೆಂದು ವರದಿ ನೀಡಿತ್ತು.
ಬೋಧಕರ ಕೊರತೆಗೆ ಪರಿಹಾರ
ರಾಜ್ಯದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2017ರ ಮಾಹಿತಿ ಪ್ರಕಾರ 646 ಬೋಧಕರ ಹುದ್ದೆಗಳ ಮಂಜೂರು ಮಾಡಲಾಗಿದ್ದು, 357 ಹುದ್ದೆಗಳು ಖಾಲಿ ಉಳಿದಿವೆ. ಇದೇ ರೀತಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2,812 ಹುದ್ದೆಗಳು ಮುಂಜೂರಾಗಿದ್ದು, 2,098 ಭರ್ತಿಯಾಗಿವೆ. 714 ಹುದ್ದೆಗಳು ಖಾಲಿ ಇವೆ. ಗ್ರಾಮೀಣ ಭಾಗದಲ್ಲಿ ಪಾಠ ಮಾಡಲು ಬೋಧಕರು ಹಿಂಜರಿಯುವುದರಿಂದ ಸಾಕಷ್ಟು ವಿಷಯಗಳ ಬೋಧಕರ ಕೊರತೆ ಎದುರಾಗಿದೆ. ಇದನ್ನು ನೀಗಿಸುವ ಉದ್ದೇಶದಿಂದ ಈ ಲೈವ್ ಬೋಧನೆ ಮಾಡಲಾಗುತ್ತದೆ.
ಎಜುಸ್ಯಾಟ್ ಕಾರ್ಯಕ್ರಮ ಏಕಮುಖವಾಗಿದ್ದರಿಂದ ಇದನ್ನು ನಿಲ್ಲಿಸಿ ಆನ್​ಲೈನ್ ಇಂಟರಾಕ್ಟೀವ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿದ್ದೇವೆ.
|ಎಚ್.ಯು.ತಳವಾರ, ನಿರ್ದೇಶಕರು, ತಾಂತ್ರಿಕ ಶಿಕ್ಷಣ ಇಲಾಖೆ
ಲೈವ್ ಬೋಧನೆ
ಗೂಗಲ್ ಹ್ಯಾಂಗ್​ಔಟ್ ಬಳಕೆ ಸಾರ್ವಜನಿಕರಿಗೆ ಮುಕ್ತವಾಗಿದ್ದು, ಇದನ್ನೇ ಶಿಕ್ಷಣ ಇಲಾಖೆಯು ಬಳಕೆ ಮಾಡಿಕೊಂಡು ಲೈವ್ ಆಗಿ ಬೋಧನೆ ಮಾಡುತ್ತದೆ. ಹಣ ಸಂದಾಯ ಮಾಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ಪ್ರತಿ ಕಾಲೇಜು ಒಂದು ಲ್ಯಾಪ್​ಟ್ಯಾಪ್, ಎಲ್​ಸಿಡಿ ಪರದೆ, ಸೌಂಡ್ ಬಾಕ್ಸ್ ಹೊಂದಿರಬೇಕಾಗುತ್ತದೆ. 1 ಎಂಬಿಪಿಎಸ್ ಸಾಮರ್ಥ್ಯದ ಇಂಟರ್​ನೆಟ್ ಅಗತ್ಯವಾಗಿದೆ. ಇವೆಲ್ಲ ಈಗಾಗಲೇ ಎಲ್ಲ ಕಾಲೇಜುಗಳಲ್ಲೂ ಲಭ್ಯವಿರುವುದರಿಂದ ಖರೀದಿಸಬೇಕಾಗಿಲ್ಲ. ವಿದ್ಯಾರ್ಥಿಗಳಿಗೆ ಗೊಂದಲ ಉಂಟಾದರೆ ಲೈವ್​ನಲ್ಲೇ ನೇರವಾಗಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಬಹುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....