ಅರ್ಜೆಂಟೀನಾದಲ್ಲಿರುವ ವಿಶ್ವದ ಅತಿ ಎತ್ತರದ ಅಗ್ನಿಪರ್ವತ ಮೌಂಟ್ ಓಜೋಸ್ ಸಲಾಡೋ ಏರುವ ಮೂಲಕ ಬೆಂಗಳೂರು ಟೆಕ್ಕಿ ಸತ್ಯರೂಪ್ ಸಿದ್ಧಾಂತ್ (35) ವಿಶ್ವದ ಗಮನ ಸೆಳೆದಿದ್ದಾರೆ. ಮೂಲತಃ ಪಶ್ಚಿಮ ಬಂಗಾಳದ ಇವರು, ಈ ಪರ್ವತ ಏರಿದ ಎರಡನೆಯ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ. ಅರ್ಜೆಂಟೀನಾ-ಚಿಲಿ ದೇಶಗಳ ಗಡಿಯಲ್ಲಿರುವ ಈ ಪರ್ವತ 6,893 ಮೀಟರ್ (22,615 ಅಡಿ) ಎತ್ತರವಿದೆ. ಈ ಮೊದಲು ಮಲ್ಲಿಮಸ್ಕಾನ್ ಬಾಬು ಅವರು ಪರ್ವತಾರೋಹಣ ಮಾಡಿದ್ದರು. ಸತ್ಯರೂಪ್ 2015ರಲ್ಲಿ ಎವರೆಸ್ಟ್ ಪರ್ವತ ಏರಿದ್ದರು. ಸದ್ಯದಲ್ಲಿಯೇ ಅಂಟಾರ್ಟಿಕಾದಲ್ಲಿರುವ ಮೌಂಟ್ ಸಿಡ್ಲೆ ಅಗ್ನಿಪರ್ವತ ಏರುವುದಾಗಿ ಹೇಳಿದ್ದಾರೆ. ಇದು ಯಶಸ್ವಿಯಾದರೆ ಈ ಪರ್ವತ ಏರುವ ಮೊದಲ ಭಾರತೀಯ ಎನಿಸಲಿದ್ದಾರೆ. ವಿಶ್ವದ ಅತಿ ಎತ್ತರದ ಏಳು ಪರ್ವತಗಳನ್ನು ಏರಿರುವ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ. -ಏಜೆನ್ಸೀಸ್
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ