ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸೆನ್ಸಾರ್ ವ್ಯವಸ್ಥೆಗೆ ಶತಮಾನ

ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಸೆನ್ಸಾರ್ ವ್ಯವಸ್ಥೆ ಆರಂಭವಾಗಿ 100 ವರ್ಷ ಪೂರ್ಣಗೊಳ್ಳುತ್ತಿದೆ. ಚಿತ್ರರಂಗದ ಆರಂಭದ ದಿನಗಳಿಂದ ಹಿಡಿದು ಇತ್ತೀಚಿನ ಬಾಲಿವುಡ್ ಚಿತ್ರ ಪದ್ಮಾವತಿ ವರೆಗೆ ಅದೆಷ್ಟೋ ಬಾರಿ ಸೆನ್ಸಾರ್ ಮಂಡಳಿ ವಿವಾದಕ್ಕೆ ಗುರಿಯಾಗಿದೆ. ಸೆನ್ಸಾರ್ ಹುಟ್ಟಿದ್ದು ಹೇಗೆ? ಆರಂಭದ ದಿನಗಳು ಹೇಗಿದ್ದವು ಎಂಬ ಕುರಿತ ಹಿನ್ನೋಟ ಇಲ್ಲಿದೆ.
ಮೊದಲ ಮಂಡಳಿ
1920ರಲ್ಲಿ ಅಂದಿನ ಬಾಂಬೆ, ಮದ್ರಾಸ್, ಕಲ್ಕತ್ತಾ ಹಾಗೂ ರಂಗೂನ್​ಗಳಲ್ಲಿ ಸೆನ್ಸಾರ್ ಮಂಡಳಿಗಳನ್ನು ಸ್ಥಾಪಿಸಲಾಗಿತ್ತು. ದೇಶ, ವಿದೇಶದ ಸಿನಿಮಾಗಳನ್ನೂ ಸೆನ್ಸಾರ್ ಮಾಡಿದ ಬಳಿಕವೇ ಪ್ರದರ್ಶನ ಮಾಡಲಾಗುತ್ತಿತ್ತು. ಇದಕ್ಕಾಗಿ ಕೆಲ ನಿಯಮಗಳನ್ನೂ ಜಾರಿಗೆ ತರಲಾಯಿತು. 1927-28ರಲ್ಲಿ ಬ್ರಿಟಿಷ್ ಸರ್ಕಾರ ಭಾರತೀಯ ಸಿನಿಮಾಟೊಗ್ರಾಫ್ ಸಮಿತಿ ರಚಿಸಿ, ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಟಿ. ರಾಗಾಚಾರಿಯರ್ ಸಮಿತಿ ಮುಖ್ಯಸ್ಥರಾಗಿದ್ದರು. ಸಿನಿಮಾಗಳನ್ನು ವರ್ಗೀಕರಣ ಮಾಡಬೇಕು. ಯು, ಎ ಪ್ರಮಾಣಪತ್ರಗಳನ್ನು ನೀಡಬೇಕು ಎಂದು ಶಿಫಾರಸು ಮಾಡಿತು. ಆದರೆ ಪ್ರಮಾಣಪತ್ರ ನೀಡಿಕೆ ಶಿಫಾರಸನ್ನು ಬ್ರಿಟಿಷ್ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. 1940ರ ವೇಳೆಗೆ 1,774 ಚಿತ್ರಗಳನ್ನು ವೀಕ್ಷಿಸಿದ್ದ ಸೆನ್ಸಾರ್ ಮಂಡಳಿ, 25ಕ್ಕೂ ಅಧಿಕ ಚಿತ್ರಗಳಿಗೆ ಸೂಕ್ತ ತಿದ್ದುಪಡಿ ಮಾಡಿ ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು.
ಆರಂಭವಾಗಿದ್ದು ಹೀಗೆ…
ಪ್ಯಾರಿಸ್​ನ ಬಾಜಾರ್ ಆಫ್ ಚಾರಿಟಿಯಲ್ಲಿ ಚಲನಚಿತ್ರ ಪ್ರದರ್ಶನ ಅಂದಿನ ಕಾಲದಲ್ಲಿ ಪ್ರಮುಖ ಆಕರ್ಷಣೆ. ಇಂದಿನ ಚಿತ್ರಮಂದಿರದ ರೀತಿ ಸೌಲಭ್ಯಗಳು ಅಂದು ಇರಲಿಲ್ಲ. ಮರದ ಹಲಗೆಗಳಿಂದ ನಿರ್ವಿುಸಲಾದ ಕೊಠಡಿಯಲ್ಲಿ ಸಿನಿಮಾ ಪ್ರದರ್ಶಿಸಲಾಗುತ್ತಿತ್ತು. 1897ರಲ್ಲಿ ಚಿತ್ರಪ್ರದರ್ಶನ ವೇಳೆ ನೈಟ್ರೇಟ್ ರಾಸಾಯನಿಕದಿಂದ ಬೆಂಕಿ ಅನಾಹುತ ಸಂಭವಿಸಿ 126 ಜನರು ಮೃತಪಟ್ಟರು. ಈ ಘಟನೆ ಬಳಿಕ ಸಿನಿಮಾ ಪ್ರದರ್ಶನಕ್ಕೆ ಮೊದಲ ಬಾರಿಗೆ ಕಾನೂನು ರೂಪಿಸಲಾಯಿತು.
ಬೆಳೆದು ಬಂದಿದ್ದು ಹೀಗೆ…
1918ರ ಕಾಯ್ದೆ ಪ್ರಕಾರ ಸಿನಿಮಾಗಳ ಪ್ರದರ್ಶನಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್​ಗಳು ಪರವಾನಗಿ ಬೇಕಿತ್ತು. ಪ್ರದರ್ಶನಗೊಳ್ಳುತ್ತಿರುವ ಚಿತ್ರಗಳು ಪರವಾನಗಿ ಪಡೆದಿವೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಇನ್​ಸ್ಪೆಕ್ಟರ್​ಗಳನ್ನು ನೇಮಕ ಮಾಡಲಾಗುತ್ತಿತ್ತು. ಆದರೆ ಯಾವ ಅಂಶಗಳನ್ನು ಪ್ರದರ್ಶಿಸಬೇಕು, ಯಾವ ಅಂಶಗಳನ್ನು ತೋರಿಸಬಾರದು ಎಂಬ ಕುರಿತು ಯಾವುದೇ ಸ್ಪಷ್ಟತೆ ಇರಲಿಲ್ಲ.
ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಸೆನ್ಸಾರ್
ಮೊದಲು ಭದ್ರತೆಗೆ ಮಾತ್ರ ಸೀಮಿತವಾಗಿದ್ದ ನಿಯಮಗಳು ನಂತರದ ದಿನಗಳಲ್ಲಿ ಸಿನಿಮಾದಲ್ಲಿರುವ ದೃಶ್ಯಾವಳಿಗೂ ವಿಸ್ತರಣೆ ಯಾಯಿತು. 1912ರಲ್ಲಿ ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಸೆನ್ಸಾರ್ ಸ್ಥಾಪನೆಯಾಯಿತು.
ಕೆಲ ಚಿತ್ರಗಳು ಬ್ಯಾನ್
ಗಾಂಧಿ ಐತಿಹಾಸಿಕ ಯಾತ್ರೆ ಸಹಿತ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಹಲವು ಚಿತ್ರಗಳ ಪ್ರದರ್ಶನಕ್ಕೆ ಅಂದಿನ ಬ್ರಿಟಿಷ್ ಸರ್ಕಾರ ನಿಷೇಧ ಹೇರಿತ್ತು.
ಭಾರತದಲ್ಲೂ ಆರಂಭ
ಭಾರತದಲ್ಲಿ ಆರಂಭದ ದಿನಗಳಲ್ಲಿ ಸುದ್ದಿ, ಕಿರುಚಿತ್ರ, ಸಾಕ್ಷ್ಯಚಿತ್ರಗಳನ್ನು ನಿರ್ವಿುಸಲಾಗುತ್ತಿತ್ತು. 1913ರಲ್ಲಿ ರಾಜಾ ಹರಿಶ್ಚಂದ್ರ ಪೂರ್ಣ ಪ್ರಮಾಣದ ಸಿನಿಮಾ ಬಿಡುಗಡೆಯಾಯಿತು. 1918ರಲ್ಲಿ ಸಿನಿಮಾಟೊಗ್ರಾಫ್ ಕಾಯ್ದೆ ಜಾರಿಗೆ ಬಂತು. ಸಿನಿಮಾಗಳ ಸೆನ್ಸಾರ್​ಶಿಪ್ ಕೂಡ ಆರಂಭವಾಯಿತು.
ಹಲವು ಸವಾಲುಗಳು
ಸ್ವಾತಂತ್ರ್ಯ ನಂತರ ಸಾಕಷ್ಟು ಬದಲಾವಣೆ, ವಿವಾದಕ್ಕೆ ಸಾಕ್ಷಿಯಾಗಿರುವ ಸೆನ್ಸಾರ್ ಮಂಡಳಿ, ಈಗ ಮುಂದುವರಿದ ತಂತ್ರಜ್ಞಾನದ ಪರಿಣಾಮ ಅಷ್ಟೇ ಸವಾಲುಗಳನ್ನೂ ಎದುರಿಸುತ್ತಿದೆ. ಅಂತರ್ಜಾಲ ತಾಣಗಳಲ್ಲೇ ನೇರವಾಗಿ ಸಿನಿಮಾಗಳನ್ನು ಬಿಡುಗಡೆ ಮಾಡಬಹುದಾಗಿದೆ. ಕೆಲ ಆಪ್, ವೆಬ್​ಸೈಟ್​ಗಳಿಗೆ ಚಂದಾದಾರರಾಗಿ ಚಿತ್ರಗಳನ್ನು ವೀಕ್ಷಿಸಬಹುದಾಗಿದೆ. ಇವುಗಳಲ್ಲಿನ ಆಕ್ಷೇಪಾರ್ಹ ಅಂಶ ನಿಯಂತ್ರಣ ಸೆನ್ಸಾರ್ ಮಂಡಳಿಗೆ ಸವಾಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...