ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ದೇಶವನ್ನಾವರಿಸುತ್ತಿರುವ ಸೈಬರ್ ಕ್ರೖ

ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ. ಜನಸಾಮಾನ್ಯರ ನಿತ್ಯಜೀವನದ ಮೇಲೆ ಅಂತರ್ಜಾಲ ಬೀರುತ್ತಿರುವ ಪ್ರಭಾವದ ತೀವ್ರತೆಯನ್ನು ಪರಿಗಣಿಸಿ ಸೈಬರ್ ಅಪರಾಧಗಳನ್ನು ಇನ್ನು ರಾಷ್ಟ್ರೀಯ ಅಪರಾಧಗಳ ದಾಖಲೆ ಸಂಸ್ಥೆಯ (ಎನ್​ಸಿಆರ್​ಬಿ)ಮಾಹಿತಿ ಸಂಗ್ರಹಾಗಾರದಲ್ಲಿ ಸೇರಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಒಟಿಪಿ ವಂಚನೆ ಸೇರ್ಪಡೆ: ಈವರೆಗೆ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಮೂಲಕ ವಂಚನೆಯ ಅಪರಾಧಗಳ ಮಾಹಿತಿಯನ್ನಷ್ಟೇ ಎನ್​ಸಿಆರ್​ಬಿ ಸಂಗ್ರಹಿಸುತ್ತಿತ್ತು, ಇನ್ಮುಂದೆ ಎಟಿಎಂ ಮೂಲಕ ವಂಚನೆ, ಆನ್​ಲೈನ್ ಬ್ಯಾಂಕಿಂಗ್ ಹಗರಣಗಳು, ಒಟಿಪಿ ವಂಚನೆ ಅಪರಾಧಗಳು ಪ್ರತ್ಯೇಕವಾಗಿ ಪಟ್ಟಿ ಮಾಡಿ, ಅವುಗಳ ಮಾಹಿತಿಯನ್ನು ದತ್ತಾಂಶ ಸಂಗ್ರಹದಲ್ಲಿ ಸೇರ್ಪಡೆಗೊಳಿಸಲು ಎನ್​ಸಿಆರ್​ಬಿ ಮುಂದಾಗಿದೆ.
ನೆಟ್ ಪ್ಯಾಕ್ ಪರಿಣಾಮ
ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿಯಿಂದಾಗಿ ಇಂಟರ್ನೆಟ್ ಪ್ಯಾಕ್​ಗಳು ಅಗ್ಗದ ಬೆಲೆಗೆ ಸಿಗುತ್ತಿರುವುದರಿಂದ ಸೈಬರ್ ಕ್ರೖೆಂ ಹೆಚ್ಚಾಗುತ್ತಿರುವುದನ್ನು ಹಲವು ಸಂಶೋಧನೆ ಹಾಗೂ ಅಪರಾಧ ಪ್ರಕರಣಗಳ ದಾಖಲೆಗಳು ದೃಢಪಡಿಸಿವೆ. ಅಂತರ್ಜಾಲವನ್ನು ಚಟವಾಗಿಸಿಕೊಂಡವರು ಅದನ್ನು ದುರ್ಬಳಕೆ ಮಾಡಿಕೊಂಡು ಚಿತ್ರ, ವಿಡಿಯೋಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವುದರಿಂದ ಹಲವು ಅಮಾಯಕರು ಆತ್ಮಹತ್ಯೆಗೆ ಶರಣಾಗಿದ್ದೂ ಇದೆ.
ರಾಜ್ಯದಲ್ಲೂ ನಿಗಾ
ಬೆಂಗಳೂರು: ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ ಸೂಚನೆಯಂತೆ ರಾಜ್ಯ ಪೊಲೀಸ್ ಇಲಾಖೆಯ ಸೈಬರ್ ಕ್ರೖೆಂ ಘಟಕ ಸಾಮಾಜಿಕ ಜಾಲತಾಣದ ಎಲ್ಲ ಮಾಹಿತಿಗಳನ್ನು ಕಲೆ ಹಾಕಿ ಮೇಲ್ವಿಚಾರಣೆ ನಡೆಸಲು ಮುಂದಾಗಿದೆ. ಅನವಶ್ಯಕವಾಗಿ ಸಂದೇಶಗಳನ್ನು ಕಳುಹಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಎಲ್ಲ ದೂರ ಸಂಪರ್ಕಗಳ ಮಾಹಿತಿಯನ್ನು ದಾಖಲಿಸಿಕೊಳ್ಳಲು ಸೈಬರ್ ಘಟಕ ಕ್ರಮ ಕೈಗೊಂಡಿದೆ.
ದೇಶಾದ್ಯಂತ ಹಲವಾರು ರೀತಿಯ ಸೈಬರ್ ಅಪರಾಧಗಳು ನಡೆಯುತ್ತಿವೆ. ಇವುಗಳ ಪೂರ್ಣ ಮಾಹಿತಿ ಕಲೆ ಹಾಕುವುದರಿಂದ ನಿರ್ದಿಷ್ಟವಾಗಿ ಯಾವ ರೀತಿಯ ಅಪರಾಧ ಹೆಚ್ಚಿದೆ ಎಂಬುದು ತಿಳಿಯುತ್ತದೆ. ಇದರಿಂದ ಸರ್ಕಾರ ಮತ್ತು ಕಾನೂನು ಸಂಸ್ಥೆಗಳಿಗೆ ಅಪರಾಧ ನಿಯಂತ್ರಿಸಲು ನೆರವಾಗುತ್ತದೆ.
| ಅಂಕುರ್ ರಹೇಜಾ ಸೈಬರ್ ಕಾನೂನು ತಜ್ಞ
ತನಿಖೆಗೆ ಟ್ರಾ್ಯಕಿಂಗ್ ನೆರವು
ನಕಲಿ ಆನ್​ಲೈನ್ ಖಾತೆ ಸೃಷ್ಟಿಸಿ ಅಪರಾಧ ಎಸಗುವವರ ಸಂಖ್ಯೆ ಹೆಚ್ಚಳವಾಗಿರುವುದು ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಿದೆ. ಇದರ ನಿಯಂತ್ರಣಕ್ಕಾಗಿ ‘ಅಪರಾಧ ಮತ್ತು ಅಪರಾಧಿಗಳ ಟ್ರಾ್ಯಕಿಂಗ್ ನೆಟ್​ವರ್ಕ್ಸ್ ಮತ್ತು ಸಿಸ್ಟಮ್್ಸ ’ ಹೆಸರಿನಲ್ಲಿ ಯೋಜನೆಯನ್ನು ಸರ್ಕಾರ ಆರಂಭಿಸಿದೆ. ಇದರಲ್ಲಿ ದೇಶಾದ್ಯಂತ ನಡೆದ ಎಲ್ಲ ರೀತಿಯ ಆನ್​ಲೈನ್ ಅಪರಾಧಗಳು, ಅಪರಾಧಿಗಳ ವಿಸõತ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ದೇಶದ ಎಲ್ಲ ರಾಜ್ಯಗಳ ಪೊಲೀಸರಿಗೆ ಈ ದಾಖಲೆಗಳು ತನಿಖೆಗೆ ನೆರವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಐಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕೆಲವು ಕಾನೂನು ಅನ್ವಯ ಸೈಬರ್ ಅಪರಾಧಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ.
ಸುಳ್ಳುಸುದ್ದಿ ತಡೆಯಿರಿ, -ಠಿ; 34 ಲಕ್ಷ ಗೆಲ್ಲಿ!
ಸುಳ್ಳು ಸಂದೇಶಗಳ ರವಾನೆಯಿಂದಾಗುತ್ತಿರುವ ಅನಾಹುತ ತಡೆಯಲು ಮುಂದಾಗಿರುವ ವಾಟ್ಸ್​ಆಪ್, ಈ ನಿಟ್ಟಿನಲ್ಲಿ ಸಂಶೋಧನೆ ನಡೆಸುವವರಿಗೆ 50 ಸಾವಿರ ಡಾಲರ್​ವರೆಗೆ (-ಠಿ; 34.43 ಲಕ್ಷ ) ಧನಸಹಾಯ ನೀಡುವುದಾಗಿ ಘೋಷಿಸಿದೆ. ‘ಸಂಶೋಧನೆಗೆ ಸಂಬಂಧಿಸಿದಂತೆ ವಾಟ್ಸ್​ಆಪ್ ಯಾವುದೇ ಡೇಟಾ ನೀಡುವುದಿಲ್ಲ. ಸಂಶೋಧನೆಗೆ ಅಗತ್ಯವಿರುವ ಎಲ್ಲ ಡೇಟಾಗಳನ್ನು ಸಂಶೋಧಕರೇ ಸಂಗ್ರಹಿಸಿಕೊಳ್ಳಬೇಕು. ಉತ್ತಮ ಫಲಿತಾಂಶ ನೀಡಬೇಕು’ ಎಂದು ಬ್ಲಾಗ್​ನಲ್ಲಿ ಹೇಳಲಾಗಿದೆ.
ಯಾವ್ಯಾವ ಮಾಹಿತಿ ಸಂಗ್ರಹ?
ಕೇಂದ್ರ ಗೃಹ ಸಚಿವಾಲಯದ ಭಾಗವಾಗಿರುವ ಎನ್​ಸಿಆರ್​ಬಿ ಈಗಾಗಲೇ ನಕಲಿ ಆನ್​ಲೈನ್ ಬಳಕೆದಾರರ ಖಾತೆಗಳು (ಟ್ರೋಲ್​ಗಳು), ಆನ್​ಲೈನ್​ನಲ್ಲಿ ಮಾನನಷ್ಟದ ಪ್ರಕರಣಗಳು, ಆನ್​ಲೈನ್ ವಂಚನೆ, ಸೈಬರ್ ಪೀಡನೆ (ಅಂತರ್ಜಾಲದಲ್ಲಿ ಕೆಲವರನ್ನು ಗುರಿಯಾಗಿಸಿ ದೌರ್ಜನ್ಯ), ಆನ್​ಲೈನ್ ಜೂಜಾಟ ಮತ್ತು ಆನ್​ಲೈನ್ ಪ್ರಚೋದನೆಯಿಂದ ಆತ್ಮಹತ್ಯೆ ಪ್ರಕರಣಗಳ ಮಾಹಿತಿ ಸಂಗ್ರಹಿಸಲಾರಂಭಿಸಿದೆ. ಆ ಮೂಲಕ ದೇಶಾದ್ಯಂತ ನಡೆಯುವ ಅಪರಾಧಗಳ ಮಾಹಿತಿ ಸಂಗ್ರಹದಲ್ಲಿ ಕ್ಷೇತ್ರಗಳನ್ನು ವಿಸ್ತರಿಸಲು ಸರ್ಕಾರ ಮುಂದಾಗಿದೆ. ಮುಂದಿನ ಕೆಲ ತಿಂಗಳಲ್ಲಿ ದೇಶಾದ್ಯಂತ ನಡೆದ ಈ ಎಲ್ಲ ಪ್ರಕರಣಗಳು ಒಳಗೊಂಡ ವರದಿಯನ್ನು ಎನ್​ಸಿಆರ್​ಬಿ ಬಿಡುಗಡೆ ಮಾಡಲಿದೆ. ಇದುವರೆಗೂ ರಾಷ್ಟ್ರೀಯ ಮಟ್ಟದಲ್ಲಿ ಆನ್​ಲೈನ್ ಅಪರಾಧಗಳ ದಾಖಲೆಗಳನ್ನು ಸಂಗ್ರಹಿಸುವ ವ್ಯವಸ್ಥೆ ಇರಲಿಲ್ಲ.
ಪರಿಣಾಮಗಳೇನು?
# ಫೇಸ್​ಬುಕ್, ವಾಟ್ಸ್​ಆಪ್​ನಲ್ಲಿ ಹರಿದಾಡುತ್ತಿರುವ ಹಳೆಯ ವಿಡಿಯೋಗಳಿಂದಾಗಿ ಮಕ್ಕಳ ಕಳ್ಳತನ ವದಂತಿ ಸೃಷ್ಟಿಯಾಗಿ ದೇಶಾದ್ಯಂತ ಹತ್ತಾರು ಅಮಾಯಕರು ಹತ್ಯೆಗೀಡಾಗಿದ್ದಾರೆ.
# ಬದುಕಿರುವವರನ್ನು ಸತ್ತರೆಂದು ಬಿಂಬಿಸಿದ ಹಲವು ಸಂದೇಶ ಹರಿದಾಡಿದ ಬಳಿಕ ಆಸ್ಪತ್ರೆಯಲ್ಲಿದ್ದವರೇ ಬೆಡ್ ಮೇಲೆ ಎದ್ದು ಕುಳಿತು ತಾನಿನ್ನೂ ಬದುಕಿದ್ದೇನೆಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
# ಚುನಾವಣೆ ಸಂದರ್ಭದಲ್ಲಿ ನಕಲಿ ವಿಡಿಯೋ ಕ್ಲಿಪ್​ಗಳನ್ನು ಬಳಸಿಕೊಂಡು ಅಪಪ್ರಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....