ವಾಷಿಂಗ್ಟನ್: ಝಿಕಾ, ವೆಸ್ಟ್ ನೈಲ್ ವೈರಸ್ ಮತ್ತು ಮಲೇರಿಯಾ ಸೋಂಕು ಹರಡುವ ಸೊಳ್ಳೆಗಳ ಬಗ್ಗೆ ಮುನ್ಸೂಚನೆ ನೀಡುವಂತಹ ನೂತನ ಮಾದರಿಗಳನ್ನು ಸೃಷ್ಟಿಸುವ ಅಧ್ಯಯನಕ್ಕೆ ವಿಜ್ಞಾನದಲ್ಲಿ ಆಸಕ್ತಿ ಇರುವ ನಾಗರಿಕರ ಸಹಾಯವನ್ನು ನಾಸಾ ಕೋರಿದೆ. ಸೊಳ್ಳೆಗಳನ್ನು ಗುರುತಿಸಲು ಮತ್ತು ಅವುಗಳ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶ ಮಾಡುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡುವಂತಹ ‘ಗ್ಲೋಬ್ ಅಬ್ಸರ್ವರ್’ ಆಪನ್ನು ನಾಸಾ ಅಭಿವೃದ್ಧಿ ಪಡಿಸಿದೆ. ಆಸಕ್ತರು ಇದನ್ನು ಅಳವಡಿಸಿಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗವನ್ನು ಹಬ್ಬಿಸುವ ಸೊಳ್ಳೆಗಳನ್ನು ಗುರುತಿಸಬಹುದು ಮತ್ತು ಇದೇ ಆಪ್ನಲ್ಲಿರುವ ಸಾಧನವನ್ನು ಬಳಸಿಕೊಂಡು ಬೇಸಿಗೆ ಸಮಯದಲ್ಲಿ ಸೊಳ್ಳೆಗಳ ವಾಸಸ್ಥಾನದ ನಕ್ಷೆಯನ್ನು ರೂಪಿಸಿ ಅವುಗಳ ಡೇಟಾ ಸಂಗ್ರಹಿಸಿ ಅಧ್ಯಯನಕಾರರಿಗೆ ಮಾಹಿತಿ ಒದಗಿಸಬಹುದು.-ಪಿಟಿಐ
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ