ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: 21ರಂದು ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಕಾರ್ಯಾರಂಭ

ಬಹುನಿರೀಕ್ಷಿತ ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ (ಐಪಿಪಿಬಿ)ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆ. 21ರಂದು ಚಾಲನೆ ನೀಡಲಿದ್ದಾರೆ. ಆರಂಭದಲ್ಲಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಶಾಖೆ ಆರಂಭಿಸಲು ನಿರ್ಧರಿಸಲಾಗಿದೆ. ಈ ವ್ಯವಸ್ಥೆ ಗ್ರಾಮೀಣ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಮೇಲೆ ಗಮನಹರಿಸಲಿದೆ. ದೇಶದ ಅತಿದೊಡ್ಡ ಬ್ಯಾಂಕಿಂಗ್ ಕಾರ್ಯಜಾಲ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಲಿದೆ.
1.55 ಲಕ್ಷ ಅಂಚೆ ಕಚೇರಿ
ಏರ್​ಟೆಲ್ ಮತ್ತು ಪೇಟಿಎಂ ಕಂಪನಿಗಳ ನಂತರ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ಪಡೆದ ಮೂರನೇ ಸಂಸ್ಥೆ ಇಂಡಿಯಾ ಪೋಸ್ಟ್. ಇದರ ಎರಡು ಶಾಖೆಗಳು ಈಗಾಗಲೇ ಕಾರ್ಯನಿರತವಾಗಿದ್ದು, 648 ಶಾಖೆಗಳು ದೇಶಾದ್ಯಂತದ ಪ್ರತಿ ಜಿಲ್ಲೆಯಲ್ಲೂ ಕಾರ್ಯಾರಂಭ ಮಾಡಲಿವೆ. ಈ ವರ್ಷಾಂತ್ಯದ ವೇಳೆಗೆ ದೇಶದ 1.55 ಲಕ್ಷ ಅಂಚೆ ಕಚೇರಿ ಶಾಖೆಗಳು ಇದರ ಸೇವಾವ್ಯಾಪ್ತಿಗೆ ಬರಲಿವೆ.
ಪೇಮೆಂಟ್ಸ್ ಬ್ಯಾಂಕ್ ಪರಿಕಲ್ಪನೆ
ಪೇಮೆಂಟ್ಸ್ ಬ್ಯಾಂಕ್​ಗಳು ಪ್ರತಿ ಗ್ರಾಹಕರಿಂದ ಗರಿಷ್ಠ 1 ಲಕ್ಷ ರೂ. ಠೇವಣಿ ಸ್ವೀಕರಿಸಬಹುದಾಗಿದೆ. ್ಕಎಖ, ಘಉಊಖ, ಐMಕಖ ವ್ಯವಹಾರ ನಿರ್ವಹಣೆಗಳನ್ನು ಕೈಗೊಳ್ಳುವುದಕ್ಕೆ ಪೋಸ್ಟಲ್ ಪೇಮೆಂಟ್ಸ್ ಬ್ಯಾಂಕ್​ಗೆ ಅನುಮತಿ ಸಿಕ್ಕಿದೆ. ಇದರಿಂದಾಗಿ ಗ್ರಾಹಕರು ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲು ಮತ್ತು ಯಾವುದೇ ಬ್ಯಾಂಕ್ ಖಾತೆಯಿಂದ ಹಣ ಸ್ವೀಕರಿಸಲು ಸಾಧ್ಯವಾಗಲಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಂಬಂಧಿತ ದಿನಗೂಲಿ/ವೇತನಗಳು, ಅನುದಾನಗಳು, ಪಿಂಚಣಿ ಇತ್ಯಾದಿಗಳ ವಿತರಣೆಗೂ ಸರ್ಕಾರ ಪೇಮೆಂಟ್ ಬ್ಯಾಂಕ್ ಬಳಸಿಕೊಳ್ಳಲಿದೆ.
ಐಪಿಪಿಬಿ ವೈಶಿಷ್ಟ್ಯ
ದೇಶಾದ್ಯಂತ ಹಬ್ಬಿರುವ 1.55 ಲಕ್ಷ ಅಂಚೆ ಕಚೇರಿ ಶಾಖೆಗಳು ಐಪಿಪಿಬಿಯ ಕಾರ್ಯಜಾಲಕ್ಕೆ ಬರುತ್ತವೆ. ಹಳ್ಳಿಹಳ್ಳಿಗಳಲ್ಲೂ ಬ್ಯಾಂಕಿಂಗ್ ವ್ಯವಸ್ಥೆ ಲಭ್ಯವಾಗಲಿದೆ. ಸುಮಾರು 17 ಕೋಟಿಯಷ್ಟಿರುವ ಅಂಚೆ ಉಳಿತಾಯ ಬ್ಯಾಂಕ್ (ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್- ಪಿಎಸ್​ಬಿ) ಖಾತೆಗಳು ಐಪಿಪಿಬಿ ಖಾತೆಯೊಂದಿಗೆ ವಿಲೀನಗೊಳ್ಳಲಿದೆ. ಗ್ರಾಮೀಣ ಜನರು ಮೊಬೈಲ್ ಆಪ್ ಮೂಲಕ ಅಥವಾ ಅಂಚೆ ಕಚೇರಿಗೆ ಭೇಟಿ ನೀಡುವ ಮೂಲಕ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಹಾಗೂ ಹಣಕಾಸು ಸೇವೆ ಒದಗಿಸಲು ಈ ಕ್ರಮ ಮಹತ್ವದ್ದಾಗಿದೆ. ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳು ಮನೆಬಾಗಿಲಲ್ಲೇ ಲಭ್ಯವಾಗಲಿದೆ. ಅಂಚೆ ಕಚೇರಿಗಳಲ್ಲಿ ಸ್ಥಾಪಿಸಲಾಗಿರುವ 3,250 ಪ್ರವೇಶ ತಾಣಗಳು (ಅ್ಚಠಠ ಟಟಜ್ಞಿಠಿಠ) ಮತ್ತು ಗ್ರಾಮೀಣ-ನಗರ ಪ್ರದೇಶಗಳಲ್ಲಿ ಸುಮಾರು 11,000 ಅಂಚೆಪೇದೆಗಳನ್ನು ಸಜ್ಜುಗೊಳಿಸಲಾಗಿದೆ.
ಐಪಿಪಿಬಿ ಆಪ್
ಆ. 21ರಂದೇ ಐಪಿಪಿಬಿ ಆಪ್​ಗೂ ಚಾಲನೆ ಸಿಗುವ ನಿರೀಕ್ಷೆಯಿದ್ದು, ಫೋನ್ ರೀಚಾರ್ಜ್ ಮತ್ತು ಬಿಲ್, ವಿದ್ಯುಚ್ಛಕ್ತಿ ಬಿಲ್, ಡಿಟಿಎಚ್ ಸೇವೆ, ಕಾಲೇಜು ಶುಲ್ಕ ಪಾವತಿ (ನ್ಯಾಷನಲ್ ಪೇಮೆಂಟ್ಸ್ ಕಾಪೋರೇಷನ್ ಆಫ್ ಇಂಡಿಯಾದ ‘ಭಾರತ್ ಬಿಲ್’ ಪೇಮೆಂಟ್ಸ್ ವ್ಯವಸ್ಥೆಯಲ್ಲಿ ಇವೆಲ್ಲ ಲಭ್ಯವಿವೆ) ಸಹಿತ ಸುಮಾರು 100 ಸಂಸ್ಥೆಗಳ ಸೇವಾಸೌಲಭ್ಯಗಳಿಗೆ ಹಣ ಪಾವತಿಸಲು ಗ್ರಾಹಕರಿಗೆ ಈ ಆಪ್ ಅನುವುಮಾಡಿಕೊಡಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...