ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ನಿಮ್ಮನ್ನೇ ಓದುವ ಹೊಸ ಆ್ಯಂಡ್ರಾಯ್ಡ್​ -9:

ಇದರ ಹೆಸರು ಪೈ, ಸರಳತೆಗೆ ಸೈ, ನವದೆಹಲಿ: ಗೂಗಲ್​ ಹೊಸ ಆಪರೇಟಿಂಗ್​ ಸಿಸ್ಟಂ ಆ್ಯಂಡ್ರಾಯ್ಡ್​ -9 ‘ಪೈ’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆ್ಯಂಡ್ರಾಯ್ಡ್​-9 ಅತ್ಯಂತ ಸ್ಮಾರ್ಟ್​ ಆಗಿ (ಜಾಣ್ಮೆಯಿಂದ) ಬಳಸುವವರ ಇಚ್ಛೆಗೆ ತಕ್ಕಂತೆ ಅತ್ಯಂತ ಸಲೀಸಾಗಿ ಕಾರ್ಯನಿರ್ವಹಿಸುತ್ತದೆ.
ಆರ್ಟಿಫಿಷಿಯಲ್​ ಇಂಟಲಿಜೆನ್ಸ್​ (ಕೃತಕ ಬುದ್ಧಿಮತ್ತೆ) ಎಂಬ ತಂತ್ರಜ್ಞಾನ ಹೊಂದಿರುವ ಈ ಆವೃತ್ತಿಯು ಫೋನ್​ ಬಳಕೆದಾರರ ಬಯಕೆಗೆ ತಕ್ಕಂತೆ ವರ್ತಿಸುತ್ತದೆ. ಬಳಕೆದಾರರ ಅಭಿರುಚಿ ಗ್ರಹಿಸಿ, ಅವರಿಂದಲೇ ಮೊದಲೇ ಮಾಹಿತಿ ಪಡೆದು ಅದರ ಆಧಾರದಲ್ಲಿಯೇ ಕಾರ್ಯನಿರ್ವಹಿಸುವುದು ಆ್ಯಂಡ್ರಾಯ್ಡ್​-9ನ ಪ್ರಮುಖ ವಿಶೇಷತೆ.
🎉 Introducing Android 9 Pie 🎉
Packed with smarts and tailored to you. Learn more:  https://t.co/LGeZUrz2BV,   #Android9,   pic.twitter.com/gwUEjqHH1l,
— Android (@Android)  August 6, 2018,
ಬ್ಯಾಟರಿಯನ್ನು ಸ್ವಯಂ ನಿಯಂತ್ರಿಸಿಕೊಳ್ಳುವ ಗುಣವುಳ್ಳ ಈ ಆ್ಯಂಡ್ರಾಯ್ಡ್​, ಬಳಕೆದಾರರು ಆ್ಯಪ್​ಗಳಿಗೆ ನೀಡುವ ಪ್ರಾಶಸ್ತ್ಯದ ಆಧಾರದ ಮೇಲೆ ನಿರ್ದಿಷ್ಟ ಆ್ಯಪ್​ಗಳಿಗೆ ಶಕ್ತಿ ಪೂರೈಸುತ್ತದೆ. ಅಲ್ಲದೆ, ಇದೇ ಆಧಾರದಲ್ಲೇ ಸ್ಕ್ರೀನ್​ನ ಬ್ರೈಟ್​ನೆಸ್​ ಅನ್ನು ಸ್ವಯಂಚಾಲಿತವಾಗಿಯೇ ನಿಯಂತ್ರಿಸುತ್ತದೆ.
ನೀವು ಫೋನ್​ನಲ್ಲಿ ಯಾವ ಆ್ಯಪ್​ ಅಥವಾ ಏನನ್ನು ಬಳಸಲು, ಹುಡುಕಲು ಬಯಸುತ್ತೀರೋ ಅದನ್ನು ಮೊದಲಿಗೇ ಗ್ರಹಿಸುವ ಈ ಆವೃತ್ತಿ ಅದಕ್ಕೆ ತಕ್ಕ ಪ್ರೋಗ್ರಾಂಗಳನ್ನು ಸ್ಕ್ರೀನ್​ ಮೇಲೆ ಬಿತ್ತರಿಸುತ್ತದೆ. ಬಳಕೆದಾರರಿಗೆ ಹೆಚ್ಚು ಶ್ರಮ ನೀಡದೇ ಇದು ಕಾರ್ಯ ನಿರ್ವಹಿಸುತ್ತದೆ.
Smart, easy, and insPIEred by you.  #Android9,  is baked with features for an experience that adapts to you.  pic.twitter.com/8ajl5lJfeA,
— Android (@Android)  August 6, 2018,
ಈಗ ಬಿಡುಗಡೆಯಾಗಿರುವ ಆ್ಯಂಡ್ರಾಯ್ಡ್​-9 ಆವೃತ್ತಿಯು ಫಿಕ್ಸೆಲ್​​ ಫೋನ್​ಗಳಲ್ಲಿ ಮಾತ್ರ ಅಳವಡಿಕೆಯಾಗಿದೆ. ಇದಲ್ಲದೆ, ಬಿಟಾ ಪ್ರೋಗ್ರಾಮ್​ ಹೊಂದಿರುವ ಸೋನಿ ಮೊಬೈಲ್​, ಕ್ಸಿಯೋಮಿ, ಎಚ್​ಎಂಡಿ ಗ್ಲೋಬಲ್​, ಓಪ್ಪೋ, ವಿವೋ, ಒನ್​ಪ್ಲಸ್​ ಮೊಬೈಲ್​ಗಳಿಗೂ ಹೊಂದಲಿದೆ.
‘ಪೈ’ ಎಂಬ ಹೆಸರು ಬಂದಿದ್ದು ಏಕೆ?
ಗೂಗಲ್​ ಈಗಾಗಲೇ ತನ್ನ ಈ ಹಿಂದಿನ ಆವೃತ್ತಿಗಳಿಗೆ ಇಂಗ್ಲಿಷ್​ನ ವರ್ಣ ಮಾಲೆಯ A ನಿಂದ 0 ವರೆಗೆ ಸಿಹಿ ತಿನಿಸುಗಳ ಹೆಸರುಗಳನ್ನೇ ನಾಮಕಾರಣ ಮಾಡಿದೆ. ಈಗ P ಸರದಿ ಅದಕ್ಕಾಗಿಯೇ P ನಿಂದ ಬರುವ ಪೈ(ಸಿಹಿಯನ್ನೇ ತುಂಬಿಕೊಂಡ ಒಂದು ಬಗೆಯ ತಿನಿಸು) ಎಂದು ನಾಮಕರಣ ಮಾಡಿದೆ.
Android P will be officially known as Android 9 Pie. The previous 'sweet' versions:
Cupcake
Donut
Eclair
Froyo
Gingerbread
Honeycomb
Ice Cream Sandwich
Jelly Bean
KitKat
Lollipop
Marshmallow
Nougat
Oreo
Pie (Android 9)
Q (Android 10) is going to be a real challenge for Google!
— Mohandas Menon (@mohanstatsman)  August 7, 2018,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...