ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಟಲ್ ಬಿಹಾರಿ ವಾಜಪೇಯಿ (ರಾಜಕೀಯ)



ರಾಜಕೀಯ
ಭಾರತದ ರಾಜಕೀಯದಲ್ಲಿ ಬಹುಕಾಲದಿಂದ ಸಕ್ರಿಯರಾದವರು. ಇವರು ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರು. 1968 ಹಾಗೂ 1973ರಲ್ಲಿ ಇವರು ಇದರ ಮುಖ್ಯಸ್ಥರಾಗಿದ್ದರು. ಶ್ರೀ ವಾಜಪೇಯಿ ಯವರು ಲೋಕಸಭೆಗೆ 1957ರಲ್ಲಿ ಮೊದಲು ಆಯ್ಕೆಯಾದರು. []1977ರಲ್ಲಿ ಜನತಾ ಪಕ್ಷ ಸ್ಥಾಪನೆಯಾಗುವವರೆಗೂ ಜನಸಂಘದ ನಾಯಕರಾಗಿದ್ದರು.
ಮೊರಾರ್ಜಿ ದೇಸಾಯಿಯವರ ಸರಕಾರದಲ್ಲಿ ಮಾರ್ಚ್ 1977 ರಿಂದ ಜುಲೈ 1979 ರವರೆಗೆ ವಿದೇಶ ಮಂತ್ರಿಯಾಗಿ ಕಾರ್ಯನಿರ್ವಹಿಸಿದರು. 1980ರಲ್ಲಿ ಇವರು ಜನತಾಪಾರ್ಟಿಯನ್ನು ತೊರೆದು ಭಾರತೀಯ ಜನತಾ ಪಕ್ಷ ನಿರ್ಮಿಸುವಲ್ಲಿ ಸಹಾಯ ಮಾಡಿದರು. ನಿರ್ಣಯ ಆರ್‌.ಎಸ್‌.ಎಸ್ ಒತ್ತಡದ ಮೇರೆಗೆ ಬಂದಿತೆಂದು ಹೇಳಲಾಗುತ್ತದೆ.
ಬಿಜೆಪಿ ಪಾರ್ಲಿಮೆಂಟರಿ ಪಾರ್ಟಿಯ ನಾಯಕರಾಗಿ ವಾಜಪೇಯಿಯವರು 1980ರಿಂದ 1984 ರವರೆಗೆ ಹಾಗೂ 1986 ರಿಂದ 1993 ಮತ್ತು 1996ರಲ್ಲಿ ಕಾರ್ಯ ನಿರ್ವಹಿಸಿದರು. 11ನೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಇವರು ಸೇವೆ ಸಲ್ಲಿಸಿದರು. ಸ್ವಾತಂತ್ರ್ಯ ನಂತರ ಪಂಡಿತ ಜವಹಾರಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ನಂತರ ದೇಶದ ಜನಮಾನಸವನ್ನು ಅಷ್ಟೊಂದು ವ್ಯಾಪಕವಾಗಿ ಮುಟ್ಟಿದ, ತಟ್ಟಿದ ಮತ್ತೊಬ್ಬ ವ್ಯಕ್ತಿಯಿದ್ದರೆ ಅವರು ವಾಜಪೇಯಿ.
ಪ್ರಧಾನಮಂತ್ರಿಯಾಗಿ ಮೊದಲ ಕಾರ್ಯಾವಧಿ[
• 1996ರಲ್ಲಿ ನಡೆದ ಲೋಕ ಸಭಾ ಚುನಾವಣೆಯಲ್ಲಿ ಬಿ ಜೆ ಪಿ ಹೆಚ್ಚು ಮತಗಳನ್ನು ಪಡೆದ ಏಕ ಪಕ್ಷವಾಗಿ ಹೊರ ಹೊಮ್ಮಿತು. 519 ಸೀಟುಗಳ ಪೈಕಿ ಬಿ ಜೆ ಪಿ 187 ಸೀಟುಗಳನ್ನು ಗೆದ್ದರೆ ಕಾಂಗ್ರೆಸ್ 140 ಹಾಗು ಬಿ ಜೆ ಪಿಯೇತರ, ಕಾಂಗ್ರೆಸ್ಸೇತರ ಪಕ್ಷಗಳ ಸಂಘ ಯುನೈಟೆಡ್ ಫ್ರಂಟ್ 192 ಸೀಟುಗಳನ್ನು ಗೆದ್ದುಕೊಂಡಿತು. ಹೆಚ್ಚು ಸೀಟು ಪಡೆದ ಏಕೈಕ ಪಕ್ಷವಾದ ಕಾರಣ ಬಿ ಜೆ ಪಿ ಗೆ ಸರ್ಕಾರ ರಚಿಸಲು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಆಹ್ವಾನವಿತ್ತರು.
ಸ್ಥಳೀಯ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳು ಬಿ ಜೆ ಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಬಹುದೆಂದು ಭಾವಿಸಿ ವಾಜಪೇಯಿ ಭಾರತದ ಹತ್ತನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಬಿ ಜೆ ಪಿ ನಾಯಕತ್ವದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಆದರೆ ಯುನೈಟೆಡ್ ಫ್ರಂಟ್ ಬಹುಮತ ಸಾಧಿಸಲು ಕಾಂಗ್ರೆಸ್ ಅನ್ನು ಬಾಹ್ಯ ಬೆಂಬಲಕ್ಕಾಗಿ ಯಾಚಿಸಿತು.
ಕಾಂಗ್ರೆಸ್ ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರಿಂದ ವಾಜಪೇಯಿ ಕೇಂದ್ರದಲ್ಲಿ ಬಹುಮತ ಸಾಧಿಸಲು ಸಾಧ್ಯವಾಗಲಿಲ್ಲ. ಯುನೈಟೆಡ್ ಫ್ರಂಟ್ H.D.ದೇವೇಗೌಡರ ಮುಂದಾಳತ್ವದಲ್ಲಿ ಸರ್ಕಾರ ರಚನೆ ಮಾಡಲು ಮುಂದಾದಾಗ ಕೇವಲ ಹದಿಮೂರು ದಿನವಾಗಿದ್ದ ವಾಜಪೇಯಿ ಸರ್ಕಾರ ಪತನಗೊಂಡಿತು.
ಪ್ರಧಾನಮಂತ್ರಿಯಾಗಿ ಎರಡನೇ ಕಾರ್ಯಾವಧಿ[
• 1998 ರಲ್ಲಿ ಚುನಾವಣೆಗಳು ನಡೆದಾಗ ಮತ್ತೆ ಬಿ ಜೆ ಪಿ ಯೇ ಮಿಕ್ಕ ಪಕ್ಷಗಳಿಗಿಂತ ಮುನ್ನಡೆ ಸಾಧಿಸಿತಾದರೂ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಕೂಡಲೇ ಸಮಾನ ಮನಸ್ಕ ಪಕ್ಷಗಳ ಒಡಗೂಡಿ ಎನ್ ಡಿ ಮೈತ್ರಿ ಕೂಟ ರಚಿಸಿತು.ಮೈತ್ರಿ ಕೂಟದ ಮೂಲಕ ಬಹುಮತ ಸಾಧಿಸಿದ ಕಾರಣ 10 ಮಾರ್ಚ್ 1998 ರಂದು ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಲಾಯಿತು.
ಅವಧಿಯಲ್ಲಿಯೇ ದೇಶ ಕಾರ್ಗಿಲ್ ಯುದ್ಧವನ್ನು ಎದುರಿಸಿತು. ಎನ್ ಡಿ ಮೈತ್ರಿ ಕೂಟದಲ್ಲಿದ್ದ ಒಂದು ಮುಖ್ಯ ಪಕ್ಷ ತಮಿಳುನಾಡಿನ ಡಿ ಎಂ ಕೆ. 1999 ರಲ್ಲಿ ಬಿ ಜೆ ಪಿ ಪಕ್ಷವು ಜಯಲಲಿತಾ ಕೆಲವು ಭ್ರಷ್ಟಾಚಾರ ಸಂಬಂಧಿ ದೂರುಗಳಲ್ಲಿ ನಿಯಂತ್ರಣ ಕಾಯ್ದುಕೊಳ್ಳಲು ಹವಣಿಸಿರುವ ಬಗ್ಗೆ ಗಂಭೀರ ಆರೋಪ ಮಾಡಿತು. ಎನ್ ಡಿ ಮೈತ್ರಿ ಕೂಟ ಸರ್ಕಾರ ಪತನವಾಗುವಂತಹ ಯಾವ ಒಪ್ಪಂದಗಳಿಗೂ ಅವಕಾಶವಿಲ್ಲ ಎಂದಿತು.
ಕೂಡಲೇ ಜಯಲಿತಾ ಸರ್ಕಾರಕ್ಕೆ ಕೊಟ್ಟಿದ್ದ ತಮ್ಮ ಬೆಂಬಲವನ್ನು ಹಿಂಪಡೆದರು. ಸರ್ಕಾರ ರಚಿಸಲು ಬೇಕಾದಷ್ಟು ಸೀಟುಗಳ ಸಂಖ್ಯೆಯನ್ನು ವಾಜಪೇಯಿ ಸರ್ಕಾರ ಹೊಂದಿಲ್ಲದ ಕಾರಣ ವಿಶ್ವಾಸ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ನಿರ್ಧರಿಸಲಾಯಿತು. ಆದರೆ ವಿಶ್ವಾಸ ಮತಗಳಲ್ಲಿಯೂ ಅವಶ್ಯ ಸಂಖ್ಯೆಯನ್ನು ತಲುಪಲು ಸಾಧ್ಯವಾಗದ ಕಾರಣ ವಾಜಪೇಯಿ ಸರ್ಕಾರ ಪತನವಾಯಿತು.
ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರಿಗೆ ಸರ್ಕಾರ ರಚಿಸಲು ಸಾಧ್ಯವಾದ ಪಕ್ಷದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡಲು ಸೂಚಿಸಿದರು, ಆದರೆ ಕಾಂಗ್ರೆಸ್ ಪಕ್ಷವು ಬಹುಮತಗಳ ಕೊರತೆಯಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದಿತು.
ಯಾವ ಪಕ್ಷಗಳಿಗೂ ಬಹುಮತವಾಗದ ಕಾರಣ ಹನ್ನೆರಡನೆ ಲೋಕಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದರು. ಹಾಗೂ ಮುಂದಿನ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾಗುವ ವರೆವಿಗೂ ವಾಜಪೇಯಿ ಕಾರ್ಯ ನಿರ್ವಾಹಕ ಪ್ರಧಾನಿಯಾಗಿ ಮುಂದುವರೆಯಲು ಸೂಚಿಸಿದರು.
ಪ್ರಧಾನಮಂತ್ರಿಯಾಗಿ ಮೂರನೇ ಕಾರ್ಯಾವಧಿ[
ಕಾರ್ಗಿಲ್ ಯುದ್ಧ ನಡೆದ ಕೆಲವೇ ತಿಂಗಳುಗಳಲ್ಲಿ ನಡೆದ ಹದಿಮೂರನೇ ಲೋಕಸಭಾ ಚುನಾವಣೆಗಳು ನಡೆದು ಮತ್ತೆಯೂ ಬಿ ಜೆ ಪಿ ಪಕ್ಷ ಮುನ್ನಡೆ ಸಾಧಿಸಿತು. ಯುನೈಟೆಡ್ ಫ್ರಂಟ್ ಪಕ್ಷಗಳೂ ಕೂಡ ಮುನ್ನಡೆ ಸಾಧಿಸಿದವು.ಬಿ ಜೆ ಪಿ ನೇತೃತ್ವದ ಎನ್ ಡಿ 270 ಸೀಟುಗಳನ್ನು ಪಡೆಯಿತು, ಕಾಂಗ್ರೆಸ್ 156 ಸೀಟುಗಳಿಗೆ ತೃಪ್ತಿ ಪಟ್ಟುಕೊಂಡು ವಿರೋಧ ಪಕ್ಷದಲ್ಲಿ ಕೂರಬೇಕಾಯಿತು.
ಎನ್ ಡಿ ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸಿ ಬಹುಮತ ಸಾಧಿಸಿತು.ಇದರ ಫಲವಾಗಿ ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆಯಾಯಿತು. ಅಕ್ಟೋಬರ್ 1999 ರಲ್ಲಿ ವಾಜಪೇಯಿ ಮೂರನೇ ಬಾರಿಗೆ ಪ್ರಧಾನಿಯಾದರು.ಸಂಪೂರ್ಣ ಐದು ವರ್ಷ ಅವಧಿಯನ್ನು ಪೂರೈಸಿದ ಕಾಂಗ್ರೆಸ್ಸೇತರ ಮೊದಲ ಸರಕಾರವೆಂಬ ಪಾತ್ರಕ್ಕೂ ವಾಜಪೇಯಿ ಸರ್ಕಾರ ಭಾಜನವಾಯಿತು.
ಇಂಡಿಯನ್ ಏರ್ ಲೈನ್ಸ್ ಹೈಜಾಕ್ ಪ್ರಕರಣ[ಬದಲಾಯಿಸಿ]
ಡಿಸೆಂಬರ್ 1999 ರಲ್ಲಿ ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ನವದೆಹಲಿಗೆ ಹೊರಟಿದ್ದ ಇಂಡಿಯನ್ ಏರ್ ಲೈನ್ಸ್ ವಿಮಾನ ಅನ್ನು ತಾಲಿಬಾನಿ ಉಗ್ರರು ಪ್ರಯಾಣಿಕರ ಸಮೇತ ಅಪಹರಿಸುವ ಮೂಲಕ ರಾಷ್ಟ್ರೀಯ ಬಿಕ್ಕಟ್ಟಿಗೆ ನಾಂದಿ ಹಾಡಿದರು. ದೆಹಲಿಯಲ್ಲಿ ಇಳಿಯಬೇಕಾದ ವಿಮಾನವನ್ನು ತಾಲಿಬಾನ್ ಮುಷ್ಟಿಯಲ್ಲಿದ್ದ ಆಫ್ಘಾನಿಸ್ಥಾನಕ್ಕೆ ಕೊಂಡೊಯ್ದು ವಿಮಾನದ ಸಿಬ್ಬಂದಿ ಹಾಗು ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡರು.
ವಿಮಾನವನ್ನು ಬಿಡುಗಡೆ ಮಾಡುವುದಕ್ಕೆ ಪ್ರತಿಯಾಗಿ ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಬೇಡಿಕೆಗಳನ್ನಿಟ್ಟರು. ಆಗ ಭಾರತ ಸರ್ಕಾರಕ್ಕೆ ಸಿಕ್ಕಿಬಿದ್ದು ಸೆರೆಯಾಗಿದ್ದ ಉಗ್ರ 'ಮೌಲಾನ ಮಸೂದ್ ಅಝರ್' ಬಿಡುಗಡೆಯೂ ಸೇರಿ ಭಯೋತ್ಪಾದನೆಗೆ ಅನುಕೂಲವಾಗುವಂತಹ ಅನೇಕ ಬೇಡಿಕೆಗಳು ಈಡೇರುವ ವರೆವಿಗೂ ಪ್ರಯಾಣಿಕರ ಬಿಡುಗಡೆ ಸಾಧ್ಯವಿಲ್ಲವೆಂದು ವಾಜಪೇಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ದೇಶದಾದ್ಯಂತ ಆತಂಕ ಮನೆ ಮಾಡುವಂತೆ ಮಾಡಿದ್ದರು.
ಉಗ್ರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಲ ಪ್ರಯೋಗ ಮಾಡುವ ಮೂಲಕ ಪ್ರಯಾಣಿಕರನ್ನು ಮರಳಿ ಪಡೆಯುವ ಮಾರ್ಗ ಸಾಧುವಾಗಿರಲಿಲ್ಲ ಹಾಗೂ ನೈಜತೆಗೆ ಹತ್ತಿರವೂ ಆಗಿರಲಿಲ್ಲ. ಕಾರಣದಿಂದ ಸರ್ಕಾರ ಉಗ್ರರ ಮಾತಿಗೆ ಮಣಿಯಲೇ ಬೇಕಾಯಿತು. ಆಗ ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಜಸ್ವಂತ್ ಸಿಂಗ್ ಜವಾಬ್ದಾರಿ ಮೆರೆದು ಭಾರತದ ಜೈಲಿನಲ್ಲಿದ್ದ ತಾಲಿಬಾನಿ ಉಗ್ರ ಪ್ರಮುಖರನ್ನು ತಮ್ಮೊಂದಿಗೆ ಕರೆದುಕೊಂಡು ಆಫ್ಘಾನಿಸ್ತಾನಕ್ಕೆ ಹೋಗಿ ಭಾರತೀಯ ಪ್ರಯಾಣಿಕರನ್ನು ಹಾಗೂ ಉಗ್ರರನ್ನು ವಿನಿಮಯ ಮಾಡಿಕೊಂಡು ಭಾರತಕ್ಕೆ ಹಿಂದಿರುಗಿದರು.
2001 ಸಂಸತ್ ಭವನದ ಮೇಲಿನ ದಾಳಿ[ಬದಲಾಯಿಸಿ]
• 2001 ಡಿಸೆಂಬರ್ 13 ರಂದು ಮುಖಮರೆಸಿಕೊಂಡ ಶಸ್ತ್ರಧಾರಿ ವ್ಯಕ್ತಿಗಳಿಂದ ಭಾರತದ ಆಡಳಿತ ಕೇಂದ್ರ ಸಂಸತ್ ಭವನದ ಮೇಲೆ ದಾಳಿ ನಡೆಯಿತು.ಕಾರುಗಳ ಮೇಲೆ ಕೇಂದ್ರ ಗೃಹ ಇಲಾಖೆ ಹಾಗು ಸಂಸತ್ ಸದಸ್ಯರು ಎಂಬ ಪಟ್ಟಿಗಳನ್ನು ಬಳಸಿಕೊಂಡು ಸಂಸತ್ ಭವನದ ಆವರಣ ಪ್ರವೇಶಿಸಿಸಿ ಹಠಾತ್ ಗುಂಡಿನ ದಾಳಿ ನಡೆಸಲು ಶುರು ಮಾಡಿದ ಉಗ್ರರು ಸಂಸತ್ ಭವನದ ಹಲವಾರು ಭದ್ರತಾ ಸಿಬ್ಬಂದಿಗಳನ್ನು ಆಹುತಿ ಪಡೆದರು.
ದಾಳಿಗೂ ಮುನ್ನ ಕೇವಲ 40 ನಿಮಿಷಗಳ ಮುಂಚೆ ರಾಜ್ಯ ಸಭಾ ಹಾಗು ಲೋಕ ಸಭಾ ಅಧಿವೇಶನಗಳು ಮುಗಿದಿದ್ದವು.ಆದ್ದರಿಂದ ಬಹುತೇಕ ಸಂಸದರು, ಮಂತ್ರಿಗಳು ಹಾಗು ಅಧಿಕಾರಿ ವರ್ಗದವರು ಸಂಸತ್ ಭವನದಲ್ಲಿ ಇರಲಿಲ್ಲ. ಆದರೂ ಆಗಿನ ಗೃಹ ಮಂತ್ರಿಗಳಾಗಿದ್ದ ಎಲ್.ಕೆ ಅಡ್ವಾಣಿ ಹಾಗು ಕೇಂದ್ರದ ರಾಜ್ಯ ರಕ್ಷಣಾ ಸಚಿವ ಹರಿನ್ ಪಾಠಕ್ ಸಂಸತ್ ಭವನದ ಒಳಗೆ ಇದ್ದರು ಎಂಬ ವರದಿಗಳಿವೆ.
• 100 ಜನಕ್ಕೂ ಮಿಗಿಲಾಗಿ ರಾಜಕಾರಣಿಗಳು ಸಮಯದಲ್ಲಿ ಸಂಸತ್ ಒಳಗಿದ್ದರು. ಏಕಾಏಕಿ ದಾಳಿ ಮಾಡಿದ ಉಗ್ರರು ಕೆ 47, ಗ್ರೆನೇಡು ಉದಾಹಕಗಳು, ಗ್ರೆನೇಡುಗಳು ಹಾಗು ಪಿಸ್ತೂಲುಗಳನ್ನು ಹೊಂದಿದ್ದರು ಎಂಬ ವರದಿ ದೆಹಲಿ ಪೋಲಿಸ್ ರಿಂದ ಬಹಿರಂಗವಾಗಿದೆ. ಶೀಘ್ರ ತ್ವರೆ ಮಾಡಿದ ಭಾರತೀಯ ರಕ್ಷಣಾ ಪಡೆಗಳು ಸಂಸತ್ ಭವನದ ಪ್ರಮುಖ ದ್ವಾರಗಳನ್ನು ಬಂದ್ ಮಾಡಿಸಿ ಸತತ ಪ್ರಯತ್ನ ಪಟ್ಟು ಉಗ್ರರನ್ನು ಆಹುತಿ ಪಡೆದರು.
ಮುಂದೆ ಹತರಾದ ಅಷ್ಟೂ ಉಗ್ರರರು ಪಾಕಿಸ್ತಾನಿ ಪ್ರಜೆಗಳು ಎಂಬುದು ಸಾಬೀತಾಯಿತು. ಅಮೇರಿಕಾದ ಮೇಲೆ ದಾಳಿ ನಡೆದು ಕೇವಲ ಮೂರು ತಿಂಗಳ ಒಳಗೆ ಭಾರತದ ಮುಖ್ಯ ಕಟ್ಟಡದ ಮೇಲೆ ನಡೆದ ದಾಳಿ ಇಡೀ ದೇಶವನ್ನು ಆತಂಕಕ್ಕೆ ಸಿಲುಕುವಂತೆ ಮಾಡಿತು ಹಾಗೂ ಇತರ ದೇಶಗಳೂ ಭಯೋತ್ಪಾದನೆಯ ಹೆಸರು ಕೇಳಿ ಬೆಚ್ಚುವಂತೆ ಮಾಡಿತು.
ಪಾಕಿಸ್ತಾನ ಸರ್ಕಾರ ಕೃತ್ಯಕ್ಕೆ ವಿಷಾದ ವ್ಯಕ್ತಪಡಿಸಿತಾದರೂ ಭಾರತದ ಗುಪ್ತಚರ ಇಲಾಖೆ ದಾಳಿಗೆ ಪಾಕಿಸ್ತಾನದಲ್ಲೇ ಪಿತೂರಿ ನಡೆದಿತ್ತು ಹಾಗು ಅದರಲ್ಲಿ ಪಾಕಿಸ್ತಾನ ಸರ್ಕಾರದ ಕೈವಾಡವೂ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿತು. ಪ್ರಧಾನಿ ವಾಜಪೇಯಿ ಸೇನೆಯನ್ನು ಶೀಘ್ರ ವಿವಿಧ ಪ್ರದೇಶಗಳಲ್ಲಿ ನಿಯೋಜಿಸುವಂತೆ ಆದೇಶ ಹೊರಡಿಸಿದರು.
ಸುಮಾರು 5 ಲಕ್ಷ ಸೇನಾ ಸಿಬ್ಬಂದಿ ಪಂಜಾಬ್, ರಾಜಸ್ತಾನ, ಗುಜರಾತ್ ಹಾಗು ಜಮ್ಮು ಕಾಶ್ಮೀರ ಪ್ರಾಂತ್ಯಗಳ ಅಂತರಾಷ್ಟ್ರೀಯ ನಿಯಂತ್ರಣ ರೇಖೆಯಲ್ಲಿ ಕಾವಲಿಗೆ ನಿಂತರು. ಪಾಕಿಸ್ತಾನ ವು ಇದಕ್ಕೆ ಪ್ರತ್ಯುತ್ತರವೆಂಬಂತೆ ತನ್ನ ಸೈನಿಕರನ್ನು ಅಂತರಾಷ್ಟ್ರೀಯ ಗಡಿಯಲ್ಲಿ ತಂದು ನಿಲ್ಲಿಸಿತು. ಅದೇ ಸಮಯಕ್ಕೆ ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗು ಸೇನೆಯ ನಡುವೆ ಆಗಾಗ ಕದನಗಳು ಮರುಕಳಿಸುತ್ತಲೇ ಇದ್ದವು.
ಕದನ ಉತ್ಸಾಹಿ ಭಯೋತ್ಪಾದಕರೂ ಪಾಕಿಸ್ತಾನಿ ಪ್ರಾಯೋಜಿತ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ ಆಗಿದ್ದ ಕಾರಣ ಎರಡೂ ದೇಶಗಳು ಯುದ್ಧ ಆರಂಭಿಸುವ ಅಂತಿಮ ಹಂತಕ್ಕೆ ಬಂದು ಹಿಂದೆ ಸರಿದಿದ್ದವು. ಎರಡೂ ದೇಶಗಳು ಅಣ್ವಸ್ತ್ರ ಹೊಂದಿದ್ದ ಕಾರಣ, ಯುದ್ಧವಾದರೆ ಇಡೀ ದಕ್ಷಿಣ ಏಷ್ಯಾ ಅಲ್ಲೋಲ ಕಲ್ಲೋಲವಾಗುವುದು ಸತ್ಯಕ್ಕೆ ಹತ್ತಿರವಾಗಿತ್ತು. ವಿದ್ಯಮಾನಗಳನ್ನೆಲ್ಲ ಗಮನಿಸುತ್ತಿದ್ದ ವಿದೇಶಿ ಪ್ರವಾಸಿಗರು ತುರ್ತಾಗಿ ಎರಡೂ ದೇಶಗಳಿಂದ ನಿರ್ಗಮಿಸಿದರು.
ಭಯೋತ್ಪಾದನೆಯನ್ನು ಹತ್ತಿಕ್ಕುವ ಸಲುವಾಗಿ ವಾಜಪೇಯಿ ಆಡಳಿತ ಭಯೋತ್ಪಾದನಾ ನಿಷೇಧ ಕಾಯ್ದೆ ಯನ್ನು ಸಿದ್ಧಪಡಿಸಿ ಜಾರಿ ಮಾಡಿತು. ಯಾರನ್ನು ಬೇಕಾದರೂ ಭಯೋತ್ಪಾದಕರು ಎಂದು ಹಿಡಿದು ಶಿಕ್ಷಿಸುವ ಅವಕಾಶಗಳು ಕಾಯ್ದೆ ಯಲ್ಲಿ ಇರುವುದರಿಂದ ಕಾಯ್ದೆ ಜಾರಿಯಾಗ ಕೂಡದು ಎಂದು ಮಾನವ ಹಕ್ಕುಗಳ ಹೋರಾಟದ ಗುಂಪುಗಳು ವಿರೋಧ ತೋರಿದವು. ವಿಪಕ್ಷಗಳು ಕೂಡ ವಿಚಾರದಲ್ಲಿ ನಕಾರಾತ್ಮಕವಾಗಿ ಸ್ಪಂದಿಸಿದ್ದವು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....