ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಾರ್ನಿಶ್ ನೋಟು!

ನೋಟುಗಳ ಬಾಳಿಕೆ ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ ವಿಶಿಷ್ಟ ಕ್ರಮಕ್ಕೆ ಮುಂದಾಗಿದೆ. ವಾರ್ನಿಶ್ ಮಾಡಿದ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿದೆ. ಆರ್​ಬಿಐನ 2017-18ನೇ ಹಣಕಾಸು ವರ್ಷದ ವಾರ್ಷಿಕ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ಈ ಪ್ರಯೋಗ ಯಶಸ್ವಿಯಾದರೆ, ನೋಟುಗಳ ಮುದ್ರಣ ವೆಚ್ಚದಲ್ಲಿ ಭಾರಿ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ. ಕೆನ್ಯಾ, ಜಾಂಬಿಯಾ ಮತ್ತಿತರ ದೇಶಗಳಲ್ಲಿ ವಾರ್ನಿಶ್ ಮಾಡಲಾದ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ. ಅಧ್ಯಯನ ಭಾರತದಲ್ಲಿ ನೋಟುಗಳ ಬಾಳಿಕೆ ಹೆಚ್ಚಿಸಲು ಆರ್​ಬಿಐ ಗಂಭೀರ ಚಿಂತನೆ ನಡೆಸುತ್ತಿದೆ. ಕೇಂದ್ರ ಸರ್ಕಾರದ ಜತೆ ಈಗಾಗಲೇ ಚರ್ಚೆಗಳೂ ನಡೆದಿವೆ. ವಿವಿಧ ದೇಶಗಳಲ್ಲಿ ಚಲಾವಣೆಯಲ್ಲಿರುವ ನೋಟುಗಳ ಕುರಿತು ಅಧ್ಯಯನ ನಡೆಸಲಾಗಿದೆ. ವಾರ್ನಿಶ್ ಮಾಡಿದ ನೋಟುಗಳು ಹೆಚ್ಚು ಕಾಲ ಬಾಳಿಕೆ ಬರುತ್ತವೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ ಎಂದು ಆರ್​ಬಿಐ ವರದಿಯಲ್ಲಿ ತಿಳಿಸಲಾಗಿದೆ.
ಆರ್​ಬಿಐ ಹಿಂಪಡೆದ ನೋಟುಗಳ ಸಂಖ್ಯೆ
# 2015-16 – 1,636 ಕೋಟಿ
# 2016-17 – 1,250 ಕೋಟಿ
# 2017-18 – 2,767 ಕೋಟಿ
ಏಕೆ ಅಗತ್ಯ?
ವಿಶೇಷ ಮಾದರಿಯ ಕಾಗದದಲ್ಲಿ ನೋಟುಗಳನ್ನು ಮುದ್ರಿಸಲಾಗುತ್ತದೆ. ಇವು ಕೆಲ ವರ್ಷಗಳಲ್ಲಿ ಹರಿದು ಹೋಗುತ್ತವೆ ಅಥವಾ ಚಲಾವಣೆಗೆ ಯೋಗ್ಯವಲ್ಲದ ರೀತಿಯಲ್ಲಿ ಬ್ಯಾಂಕುಗಳಿಗೆ ವಾಪಸಾಗುತ್ತವೆ. ಹೀಗಾಗಿ ಆರ್​ಬಿಐ ಹೊಸ ನೋಟುಗಳನ್ನು ಮುದ್ರಿ್ರಬೇಕಾಗುತ್ತದೆ. ಇದರಿಂದ ವೆಚ್ಚ ಹೆಚ್ಚಾಗುತ್ತದೆ. ದೀರ್ಘಕಾಲ ಬಾಳಿಕೆ ಬರುವ ನೋಟುಗಳನ್ನು ಜಾರಿಗೆ ತಂದರೆ ಪದೇ ಪದೆ ನೋಟು ಮುದ್ರಣ ಮಾಡುವ ಅನಿವಾರ್ಯತೆ ತಪ್ಪಲಿದೆ. ಹೀಗಾಗಿ ವೆಚ್ಚ ಕಡಿಮೆಯಾಗಲಿದೆ.
ವರ್ಷಗಳೇ ಬೇಕು
ವಾರ್ನಿಶ್ ಮಾಡಲಾದ ನೋಟುಗಳ ಚಲಾವಣೆ ಕುರಿತು ಕೇಂದ್ರ ಸರ್ಕಾರಕ್ಕೆ ಆರ್​ಬಿಐ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಸಾಕಷ್ಟು ಅಧ್ಯಯನಗಳನ್ನು ನಡೆಸಿ ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಪ್ರಯೋಗಿಕ ಪರೀಕ್ಷೆ ಯಶಸ್ವಿಯಾದ ಬಳಿಕ, ಈ ನೋಟುಗಳು ಮುದ್ರಣಗೊಂಡು ಚಲಾವಣೆಗೆ ಬರಲಿವೆ. ಇವು ಜನರ ಕೈಗೆ ಸಿಗಲು ಕೆಲ ವರ್ಷಗಳು ಬೇಕಾಗಬಹುದು.
ಪ್ಲಾಸ್ಟಿಕ್ ನೋಟು ಯೋಜನೆ ಪ್ರಗತಿಯಲ್ಲಿ
ಕಾಗದ ಬದಲಾಗಿ ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರಲು ಆರ್​ಬಿಐ ಚಿಂತನೆ ನಡೆಸಿತ್ತು. ಈ ಕುರಿತ ಆರಂಭಿಕ ಪ್ರಕ್ರಿಯೆಯೂ ಶುರುವಾಗಿತ್ತು. ಮೈಸೂರಿನ ಘಟಕದಲ್ಲಿ ಈ ನೋಟಿನ ಮುದ್ರಣ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಈ ಮಧ್ಯೆ -ಠಿ; 500, -ಠಿ; 1000 ಹಳೇ ನೋಟು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತು. ಇದರ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಎರಡು ವರ್ಷ ಬೇಕಾಯಿತು. ಹೊಸ ನೋಟುಗಳನ್ನು ಮೈಸೂರಿನ ಆರ್​ಬಿಐ ಘಟಕದಲ್ಲಿ ಮುದ್ರಿಸಲಾಗಿತ್ತು. ಹೀಗಾಗಿ ಪ್ಲಾಸ್ಟಿಕ್ ನೋಟಿನ ಯೋಜನೆಗೆ ಸಮಯ ಸಿಗಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...