ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ನ್ಯಾಯ ಮೂರ್ತಿಯಾಗಿ ಗೀತಾ ಮಿತ್ತಲ್ ಶನಿವಾರ ನೇಮಕಗೊಂಡಿದ್ದಾರೆ. ಈ ಮೂಲಕ ಕಣಿವೆ ರಾಜ್ಯಕ್ಕೆ ಮೊದಲ ಮಹಿಳಾ ಸಿಜೆ ಸಿಕ್ಕಂತಾಗಿದೆ. ದೆಹಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಕಾರ್ಯನಿರ್ವಹಿಸುತ್ತಿದ್ದರು. ದೇಶದ ವಿವಿಧ ಕೋರ್ಟ್ಗಳಿಗೆ ನ್ಯಾಯಮೂರ್ತಿಗಳನ್ನು ಕಾನೂನು ಸಚಿವಾಲಯ ನೇಮಕಮಾಡಿದೆ.
ಇತ್ತೀಚೆಗೆ ಸಿಂಧು ಶರ್ಮಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ಗೆ ನ್ಯಾಯಮೂರ್ತಿ ಯನ್ನಾಗಿ ಕೇಂದ್ರ ಸರ್ಕಾರ ನೇಮಿಸಿತ್ತು.
ಸುಪ್ರೀಂಕೋರ್ಟ್ ನಲ್ಲಿ ಮಹಿಳಾ ನ್ಯಾಯಮೂರ್ತಿಯರು: ಸುಪ್ರೀಂ ಕೋರ್ಟ್ಗೆ ನ್ಯಾಯಮೂರ್ತಿಗಳ ನೇಮಕ ಮುಂದುವರಿದಿದ್ದು, ನ್ಯಾಯಮೂರ್ತಿಗಳಾದ ಆರ್.ಭಾನುಮತಿ, ಇಂದು ಮಲ್ಹೋತ್ರಾ, ಇಂದಿರಾ ಬ್ಯಾನರ್ಜಿ ಸೇರಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೇರಿಕೆಯಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ