ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತಕ್ಕೆ ನ್ಯಾಟೋ ಸ್ಥಾನಮಾನ

ವಾಷಿಂಗ್ಟನ್: ಭಾರತದ ಜತೆ ಗರಿಷ್ಠ ರಕ್ಷಣಾ ತಂತ್ರಜ್ಞಾನ ಹಂಚಿಕೊಳ್ಳು ವುದಕ್ಕೆ ಅನುಕೂಲವಾಗಲೆಂದು ವಾಣಿಜ್ಯ ಕಾರ್ಯತಂತ್ರದ ಎಸ್​ಟಿಎ-1 ಸ್ಥಾನಮಾನವನ್ನು ಅಮೆರಿಕ ಮಂಜೂರು ಮಾಡಿದೆ. ಇದರಿಂದ ಅಮೆರಿಕದ ಜತೆ ವಾಣಿಜ್ಯ ವ್ಯವಹಾರ ನಡೆಸುವ ಉತ್ತರ ಅಟ್ಲಾಂಟಿಕ್ ಒಪ್ಪಂದ ಒಕ್ಕೂಟದ (ನ್ಯಾಟೋ) ಸದಸ್ಯ ರಾಷ್ಟ್ರಗಳ ಮಟ್ಟಕ್ಕೆ ಭಾರತದ ಸ್ಥಾನ ಏರಿದೆ.
ರಾಜಧಾನಿ ದೆಹಲಿ ಮೇಲೆ ವಾಯು ಮಾರ್ಗದ ಮೂಲಕ ನಡೆಯಬಹುದಾದ ಸಂಭವನೀಯ ವೈಮಾನಿಕ, ಕ್ಷಿಪಣಿ, ಡ್ರೋನ್ ದಾಳಿಯನ್ನು ಧ್ವಂಸಗೊಳಿಸುವ ಅಮೆರಿಕ ನಿರ್ವಿುತ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹೊಂದಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಬೆನ್ನಿಗೆ ಭಾರತಕ್ಕೆ ಎಸ್​ಟಿಎ-1 ಸ್ಥಾನಮಾನ ದೊರಕಿರುವುದು ಮಹತ್ವ ಬೆಳವಣಿಗೆ ಯಾಗಿದೆ. ಅಮೆರಿಕ ಎಸ್​ಟಿಎ-1 ಸ್ಥಾನಮಾನವನ್ನು 36 ರಾಷ್ಟ್ರಗಳಿಗೆ ನೀಡಿದೆ. ಈ ಪೈಕಿ ಬಹುತೇಕ ನ್ಯಾಟೋ ಸದಸ್ಯ ದೇಶಗಳಿದ್ದು, ಆಪ್ತವಾಗಿರುವ ನ್ಯಾಟೋಯೇತರ ಕೆಲವು ರಾಷ್ಟ್ರಗಳು ಇವೆ. -ಏಜೆನ್ಸೀಸ್
ಸ್ಥಾನಮಾನದ ಪರಿಣಾಮ
ಭಾರತಕ್ಕೆ ರಫ್ತಾಗುವ ಅತ್ಯಾಧುನಿಕ ರಕ್ಷಣಾ, ರಕ್ಷಣೇತರ ಉತ್ಪನ್ನಗಳಿಗೆ ಹತ್ತು ಹಲವು ಪರವಾನಗಿಯನ್ನು ಪಡೆಯಬೇಕಾದ ಅಗತ್ಯ ಇರುವುದಿಲ್ಲ. ವಾಣಿಜ್ಯ ವ್ಯವಹಾರ ಸುಗಮವಾಗಲಿದೆ.
ಇಂಡೋ-ಪೆಸಿಫಿಕ್ ಆರ್ಥಿಕ ಮುನ್ನೋಟ
ಚೀನಾದ ವಲಯ ಮತ್ತು ರಸ್ತೆ ಯೋಜನೆಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಇಂಡೋ-ಪೆಸಿಫಿಕ್ ಆರ್ಥಿಕ ಮುನ್ನೋಟವನ್ನು ಇಂಡೋ-ಪೆಸಿಫಿಕ್ ಬಿಜಿನೆಸ್ ವೇದಿಕೆಯಲ್ಲಿ ಬಿಡುಗಡೆ ಮಾಡಿದೆ. ಇದರಲ್ಲಿ ಹಿಂದುಮಹಾಸಾಗರ ಮತ್ತು ಶಾಂತ ಸಾಗರದ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಇಂಧನ, ಡಿಜಿಟಲ್ ಆರ್ಥಿಕತೆಗೆ ಉತ್ತೇಜನ ನೀಡುವ ಅನೇಕ ಉಪಕ್ರಮಗಳಿವೆ.
ವಿಶೇಷ ಒಪ್ಪಂದಕ್ಕೆ ಸೋಪಾನ
ಸಂಹವನ, ಸ್ಪರ್ಧಾತ್ಮಕತೆ ಮತ್ತು ಭದ್ರತಾ ಒಪ್ಪಂದ (ಸಿಒಎಂಸಿಎಎಸ್​ಎ)ಕ್ಕೆ ಭಾರತ ಮುಂದಡಿ ಇರಿಸಲು ಎಸ್​ಟಿಎ-1 ಸ್ಥಾನಮಾನ ಸೋಪಾನ ಆಗಲಿದೆ. ಅಮೆರಿಕ ಸಿಒಎಂಸಿಎಎಸ್​ಎ ಒಪ್ಪಂದವನ್ನು ರಕ್ಷಣಾ ವಿಷಯದಲ್ಲಿ ಪರಮಾಪ್ತವಾಗಿರುವ ರಾಷ್ಟ್ರಗಳ ಜತೆ ಮಾತ್ರ ಮಾಡಿಕೊಳ್ಳುತ್ತದೆ. ಈ ಒಪ್ಪಂದ ಏರ್ಪಟ್ಟರೆ ಭಾರತಕ್ಕೆ ಅತ್ಯಂತ ಹೆಚ್ಚಿನ ಸುರಕ್ಷಾ ಕ್ರಮಗಳಿರುವ ರಕ್ಷಣಾ ಸಂವಹನ ಸಾಧನಗಳು ದೊರೆಯಲಿವೆೆ. ಆದರೆ, ಈ ಒಪ್ಪಂದಕ್ಕೆ ಸಹಿ ಹಾಕಿದರೆ ಅತಿ ಸೂಕ್ಷ್ಮವಾದ ರಕ್ಷಣಾ ಮಾಹಿತಿ ಅಮೆರಿಕಕ್ಕೆ ದೊರೆಯುತ್ತದೆ ಎಂಬ ಆತಂಕ ಭಾರತಕ್ಕೆ ಇದೆ.
ಭಾರತಕ್ಕೆ ಎಸ್​ಟಿಎ-1 ಸ್ಥಾನಮಾನ ದೊರಕಿರುವುದರಿಂದ ಉಭಯ ದೇಶಗಳ ಭದ್ರತಾ ಮತ್ತು ಆರ್ಥಿಕ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಲಿದೆ. ಭಾರತಕ್ಕೆ ಇನ್ಮುಂದೆ ರಕ್ಷಣಾ ಮತ್ತು ರಕ್ಷಣೇತರ ಸಾಮಗ್ರಿಗಳ ಸರಬರಾಜು ನಿರಂತರವಾಗಿ ನಡೆಯಲಿದೆ.
| ವಿಲ್ಬರ್ ರಾಸ್ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...