ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಚಂದ್ರನತ್ತ ಇಸ್ರೋ

ಬೆಂಗಳೂರು: ಬಹು ನಿರೀಕ್ಷೆಯ ಚಂದ್ರಯಾನ 2ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, 2019ರ ಜ.3ಕ್ಕೆ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿರ್ಧರಿಸಿದೆ.
ಚಂದ್ರನ ಅಂಗಳದಲ್ಲಿ ಇಳಿಯುವ ಲ್ಯಾಂಡರ್​ನಲ್ಲಿದ್ದ ತಾಂತ್ರಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳು ವಲ್ಲಿ ಯಶಸ್ವಿಯಾಗಿದ್ದೇವೆ. ಕೆಲ ದಿನಗಳಿಂದ ಲ್ಯಾಂಡರನ್ನು ಸಂಪೂರ್ಣ ಮರುಪರಿಶೀಲಿಸಿ, ನೂತನವಾಗಿ ವಿನ್ಯಾಸ ಮಾಡಲಾಗಿದೆ. ಉಡಾವಣೆ ಮಾಡಿದ 35 ದಿನಗಳಲ್ಲಿ ಚಂದ್ರನ ಅಂಗಳಕ್ಕೆ ನೌಕೆ ಇಳಿಯಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ. ವಿಕ್ರಂ ಸಾರಾಭಾಯ್ ಜನ್ಮ ಶತಮಾನೋತ್ಸವದ ಅಂಗವಾಗಿ ಇಸ್ರೋ ಕೇಂದ್ರ ಕಚೇರಿಯಲ್ಲಿ ವಿಕ್ರಂ ಸಾರಾಭಾಯ್ ಅವರ ಪುತ್ಥಳಿ ಅನಾವರಣ ಮಾಡಿದ ನಂತರ ಶಿವನ್ ಈ ಮಾಹಿತಿ ನೀಡಿದರು. ಇಸ್ರೋ 2020ರ ವೇಳೆಗೆ ಹೊಸದಾಗಿ 50 ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ. ಇದರಲ್ಲಿ ಆದಿತ್ಯ -1ಎಲ್ ಸಹ ಸೇರಿದೆ ಎಂದು ಶಿವನ್ ತಿಳಿಸಿದರು.
ವರ್ಷಾಂತ್ಯದಲ್ಲಿ ಇಸ್ರೋ ಟಿವಿ
ಗ್ರಾಮೀಣ ಭಾಗದ ಜನತೆಗೆ ಇಸ್ರೋ ನಡೆಸುತ್ತಿರುವ ಸಂಶೋಧನೆ ಹಾಗೂ ಚಟುವಟಿಕೆ ಬಗ್ಗೆ ಮಾಹಿತಿ ದೊರೆಯುತ್ತಿಲ್ಲ. ಸ್ವತಃ ನಾನುಹಳ್ಳಿ ಜನರನ್ನು ಈ ಬಗ್ಗೆ ಸಂರ್ಪಸಿದಾಗ ವಾಸ್ತವಿಕತೆ ಅರಿವಿಗೆ ಬಂದಿದೆ. ಈ ಕೊರತೆ ನೀಗಿಸುವ ಉದ್ದೇಶದಿಂದ ವರ್ಷಾಂತ್ಯ ದಲ್ಲಿ ಇಸ್ರೋ ಟಿವಿ ಚಾನಲ್ ಆರಂಭಿಸಲು ನಿರ್ಧರಿಸಿದ್ದೇವೆ. ಇಸ್ರೋದಲ್ಲಿ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಳ್ಳುವ ನಿರ್ಧಾರ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಂದ ಒಪ್ಪಿಗೆ ಸಿಕ್ಕಿದೆ. ಹಾಗಾಗಿ ದೇಶಾದ್ಯಂತ ವಿದ್ಯಾರ್ಥಿ ಗಳಿಗೆ 25-30 ದಿನ ಲ್ಯಾಬ್, ಬಾಹ್ಯಾಕಾಶದ ಬಗ್ಗೆ ತರಬೇತಿ ನೀಡಲಾಗುವುದು ಎಂದು ಕೆ. ಶಿವನ್ ತಿಳಿಸಿದರು. ಇಸ್ರೋದ ಮಾಜಿ ಅಧ್ಯಕ್ಷರಾದ ಕಸ್ತೂರಿ ರಂಗನ್, ಕಿರಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಾಯೋಗಿಕ ಉಪಗ್ರಹ ಉಡಾವಣೆಗೆ ಸಿದ್ಧತೆ ನಡೆದಿದ್ದು, ಪಿಎಸ್​ಎಲ್​ವಿ ಉಪಗ್ರಹಕ್ಕೆ ಖರ್ಚಾಗುವ ಒಂದು ಭಾಗ ಮಾತ್ರ ಚಂದ್ರಯಾನ 2ಕ್ಕೆ ವೆಚ್ಚವಾಗಲಿದೆ. 72ಗಂಟೆಗಳಲ್ಲಿ ಈ ಉಪಗ್ರಹ ತಯಾರಾಗಿದ್ದು, 500-700ಕೆ.ಜಿ. ತೂಕ ಹೊಂದಿದೆ.
| ಕೆ.ಶಿವನ್ ಇಸ್ರೋ ಅಧ್ಯಕ್ಷ
ಯೋಜನೆ ಉದ್ದೇಶ
ಚಂದ್ರನಲ್ಲಿ ಲಭ್ಯವಿದೆ ಎನ್ನಲಾದ ಹೀಲಿಯಂ-3 ಪರಮಾಣು ಮತ್ತು ನೀರನ್ನು ಅನ್ವೇಷಿಸಲು ಚಂದ್ರಯಾನ-2 ಮಿಷನ್ ಸಿದ್ಧತೆ ನಡೆಸಿದೆ. ಈ ಮಿಷನ್​ನಲ್ಲಿ ವಿಶೇಷ ರೋವರ್ ಅನ್ನು ಚಂದ್ರನ ಅಂಗಳಕ್ಕೆ ಇಳಿಸಲಿದ್ದು, ಇದು ಚಂದ್ರನಲ್ಲಿ ನೀರು ಮತ್ತು ಹೀಲಿಯಂ-3ರ ಸೆಲೆ ಹುಡುಕುತ್ತ ನೂರಾರು ಸ್ಯಾಂಪಲ್​ಗಳನ್ನು ಪರೀಕ್ಷಿಸಲಿದೆ. ಇಸ್ರೋ ರೋವರ್ ಇಳಿಸಲು ಉದ್ದೇಶಿಸಿರುವ ಚಂದ್ರನ ಪ್ರದೇಶಕ್ಕೆ ಈ ಹಿಂದೆ ಬೇರಾವ ದೇಶಗಳೂ ಹೆಜ್ಜೆ ಹಾಕಿಲ್ಲ ಹೀಗಾಗಿ ಈ ಪ್ರದೇಶವನ್ನು ವರ್ಜಿನ್ ಪ್ರದೇಶ ಎಂದೇ ಕರೆಯಲಾಗಿದೆ. ಚಂದ್ರನ ದಕ್ಷಿಣ ಭಾಗದಲ್ಲಿರುವ ಈ ಪ್ರದೇಶದಲ್ಲಿ ಅಣು ಇಂಧನ (ಹೀಲಿಯಂ-3) ಹೇರಳವಾಗಿರುವ ಸುಳಿವಿದೆ. ಈ ಯೋಜನೆಗೆ ಭಾರತ ಸರ್ಕಾರ -ಠಿ; 830 ಕೋಟಿ ವಿನಿಯೋಗಿಸುತ್ತಿದೆ.
ಹಿನ್ನೆಲೆ-ಮುನ್ನೆಲೆ
ಚಂದ್ರನ ಕುರಿತು ಭಾರತದ ಮೊದಲ ಮಿಷನ್ ‘ಚಂದ್ರಯಾನ-1ನ್ನು’ 2008ರ ಅಕ್ಟೋಬರ್​ನಲ್ಲಿ ಕಕ್ಷೆಗೆ ಸೇರಿಸಲಾಗಿತ್ತು. ಇದು ಚಂದ್ರನನ್ನು 3400ಕ್ಕೂ ಹೆಚ್ಚು ಸುತ್ತು ಪ್ರದಕ್ಷಿಣೆ ಹಾಕಿ ನಾಶಗೊಂಡಿತ್ತು. ಚಂದ್ರಯಾನ-2 ಮಿಷನ್​ನಲ್ಲಿ ಆರ್ಬಿಟರ್, ಲ್ಯಾಂಡರ್ ಹಾಗೂ ಆಯತಾಕಾರದ ರೋವರ್ ಗಳನ್ನು ಒಳಗೊಂಡಿದೆ.ಸೌರಶಕ್ತಿಯನ್ನು ಬಳಸಿ ಕಾರ್ಯನಿರ್ವಹಿಸುವ 6 ಚಕ್ರದ ವಾಹನ ಇದಾಗಿದ್ದು, ತನ್ನ ಸುತ್ತಲಿನ 400 ಮೀಟರ್ ಪ್ರದೇಶವನ್ನು 14 ದಿನದಲ್ಲಿ ಪರೀಕ್ಷಿಸಬಲ್ಲದು. ಈ ರೋವರ್ ಫೋಟೋ ತೆಗೆದು ಲ್ಯಾಂಡರ್​ಗೆ ರವಾನಿಸುತ್ತದೆ. ಲ್ಯಾಂಡರ್ ಇಸ್ರೋಗೆ ರವಾನಿಸುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...