ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತಕ್ಕಿಲ್ಲ ನಿರ್ಬಂಧ

ವಾಷಿಂಗ್ಟನ್: ರಷ್ಯಾದಿಂದ ಬಹುಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆ ಖರೀದಿಸುವ ಭಾರತದ ಹಾದಿ ಈಗ ಸುಗಮಗೊಂಡಿದೆ. ರಷ್ಯಾ ಜತೆ ದೊಡ್ಡ ಪ್ರಮಾಣದ ರಕ್ಷಣಾ ಒಪ್ಪಂದ ಮಾಡಿಕೊಂಡರೂ ಭಾರತದ ಮೇಲೆ ಯಾವುದೇ ನಿರ್ಬಂಧ ವಿಧಿಸಲಾಗುವುದಿಲ್ಲ ಎಂದು ಅಮೆರಿಕ ನಿಲುವು ಸ್ಪಷ್ಟಪಡಿಸಿದೆ.
ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಮಹತ್ವದ ಮಸೂದೆಯೊಂದು ಅಮೆರಿಕದ ಸಂಸತ್​ನಲ್ಲಿ ಭಾರಿ ಮತಗಳ ಅಂತರದಲ್ಲಿ ಅಂಗೀಕಾರವಾಗಿದೆ. ರಷ್ಯಾ ಜತೆ ಬಹುಕೋಟಿ ರಕ್ಷಣಾ ಒಪ್ಪಂದ ನಡೆಸುವ ಭಾರತದಂಥ ಮಿತ್ರರಾಷ್ಟ್ರಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡುವ ಅಂಶ ಇದರಲ್ಲಿದೆ. ಈವರೆಗೆ ರಷ್ಯಾ ಜತೆ ವಹಿವಾಟು ನಡೆಸುವ ರಾಷ್ಟ್ರಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಅಮೆರಿಕ ಸರ್ಕಾರಕ್ಕೆ ಇತ್ತು. ಭಾರತ ಅತ್ಯಾಧುನಿಕ ಎಸ್-500 ಟ್ರಯಂಫ್ ಕ್ಷಿಪಣಿಯನ್ನು ಖರೀದಿಸಲು ಮುಂದಾದಾಗ ನಿರ್ಬಂಧ ಹೇರುವುದಾಗಿ ಅಮೆರಿಕದ ಕೆಲ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಈ ಆತಂಕ ದೂರವಾಗಿದೆ.
ಭಾರತಕ್ಕೆ ಲಾಭ ಹೇಗೆ?
ನಿಗದಿತ ದೇಶ ಅಮೆರಿಕಕ್ಕೆ ಎಲ್ಲ ರೀತಿಯಲ್ಲಿ ಸಹಕಾರ ನೀಡುತ್ತಿದೆ. ವ್ಯೂಹಾತ್ಮಕ ದೃಷ್ಟಿಯಲ್ಲಿ ಮಹತ್ವದ ರಾಷ್ಟ್ರ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢೀಕರಿಸಿದರೆ, ಅಂಥ ರಾಷ್ಟ್ರಕ್ಕೆ ನಿರ್ಬಂಧ ಭೀತಿ ಇರುವುದಿಲ್ಲ. ಭಾರತ ಹಾಗೂ ಅಮೆರಿಕ ಸಂಬಂಧ ಉತ್ತಮವಾಗಿದೆ. ಭಾರತ ಮಹತ್ವದ ಪಾಲುದಾರ ರಾಷ್ಟ್ರ ಎಂದು ಅಮೆರಿಕ ಇತ್ತೀಚೆಗೆ ಹೇಳಿದೆ. ಹೀಗಾಗಿ ಅಮೆರಿಕದ ಹೊಸ ನೀತಿಯಿಂದಾಗಿ ಭಾರತಕ್ಕೆ ಹೆಚ್ಚು ಲಾಭವಾಗಲಿದೆ. ರಷ್ಯಾದಿಂದ ಎಸ್-500 ಟ್ರಯಂಫ್ ಕ್ಷಿಪಣಿ ಸಹಿತ ಅತ್ಯಾಧುನಿಕ ಮಿಲಿಟರಿ ಸಾಮಗ್ರಿ ಖರೀದಿಗೆ ಯಾವುದೇ ಅಡ್ಡಿ ಇರುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಏನಿದು ಮಸೂದೆ?
ನ್ಯಾಷನಲ್ ಡಿಫೆನ್ಸ್ ಅಥರೈಸೇಷನ್ ಆಕ್ಟ್ – 2019ರ ಅಂತಿಮ ಕರಡನ್ನು (ಎನ್​ಡಿಎಎ) ಗುರುವಾರ ಅಮೆರಿಕ ಸಂಸತ್​ನಲ್ಲಿ ಮಂಡಿಸಲಾಗಿತ್ತು. ಅಮೆರಿಕದ ಹಿತಾಸಕ್ತಿಗೆ ಧಕ್ಕೆ ತರುವ ರಾಷ್ಟ್ರಗಳ ಮೇಲೆ ನಿರ್ಬಂಧ ವಿಧಿಸುವ ಸಿಎಎಟಿಎಸ್​ಎ (ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ ಆಕ್ಟ್) ಕಾಯ್ದೆಯಿಂದ ಭಾರತಕ್ಕೆ ವಿನಾಯಿತಿ ನೀಡುವ ಪ್ರಸ್ತಾವನೆ ಇದರಲ್ಲಿದೆ. ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ರಕ್ಷಣಾ ಸಾಮಗ್ರಿಗಳನ್ನು ಖರೀದಿಸುವ ರಾಷ್ಟ್ರಗಳ ಮೇಲೆ ಈ ಕಾಯ್ದೆಯ ಅನ್ವಯ ಅಮೆರಿಕ ಕೆಲ ನಿರ್ಬಂಧ ಹೇರಬಹುದಾಗಿದೆ. ಅಮೆರಿಕ ಸಂಸತ್ತಾದ ಕಾಂಗ್ರೆಸ್​ನಲ್ಲಿ ಇದನ್ನು 87 – 10 ಮತಗಳಿಂದ ಅಂಗೀಕರಿಸಲಾಯಿತು. ಅಧ್ಯಕ್ಷ ಡೊನಾಲ್ಡ್ ಇದಕ್ಕೆ ಸಹಿ ಹಾಕಿದ ಬಳಿಕ ಕಾಯ್ದೆಯಾಗಿ ಜಾರಿಗೆ ಬರಲಿದೆ. ಅಮೆರಿಕದ ರಕ್ಷಣಾ ಕ್ಷೇತ್ರಕ್ಕೆ -ಠಿ; 49 ಲಕ್ಷ ಕೋಟಿ ಮೀಸಲಿಡುವ ಪ್ರಸ್ತಾವನೆಯೂ ಈ ಮಸೂದೆಯಲ್ಲಿದೆ.
ಹೊಸ ತಂತ್ರಗಾರಿಕೆ?
ಇರಾನ್ ವಿಚಾರದಲ್ಲಿ ಭಾರತದ ಮನವೊಲಿಕೆಗೆ ಅಮೆರಿಕ ಈ ನಿರ್ಧಾರ ಕೈಗೊಂಡಿದೆ ಎಂದೂ ಹೇಳಲಾಗುತ್ತಿದೆ. ಅಣು ಒಪ್ಪಂದದಿಂದ ಹೊರ ಬಂದ ಬಳಿಕ ಇರಾನ್ ಮೇಲೆ ಅಮೆರಿಕ ನಿರ್ಬಂಧ ಹೇರಿದೆ. ಇರಾನ್ ಜತೆ ಯಾವುದೇ ವಹಿವಾಟು ನಡೆಸದಂತೆ ಭಾರತದಂಥ ಮಿತ್ರ ರಾಷ್ಟ್ರಗಳ ಮೇಲೂ ಒತ್ತಡ ಹೇರುತ್ತಿದೆ. ಕಚ್ಚಾತೈಲ ಆಮದು ವಿಚಾರದಲ್ಲಿ ಭಾರತ ಹೆಚ್ಚು ಇರಾನ್​ನ್ನು ಅವಲಂಬಿಸಿದೆ. ರಿಯಾಯಿತಿ ನೀಡಿದ ಬಳಿಕ ಇರಾನ್ ಜತೆಗಿನ ಸಂಬಂಧ ಸಂಪೂರ್ಣವಾಗಿ ಕಡಿದುಕೊಳ್ಳುವಂತೆ ಭಾರತದ ಮೇಲೆ ಅಮೆರಿಕ ಒತ್ತಡ ಹೇರುವ ಸಾಧ್ಯತೆ ಅಧಿಕವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಗಣರಾಜ್ಯೋತ್ಸವಕ್ಕೆ ಟ್ರಂಪ್?
ಭಾರತ ಸರ್ಕಾರ ದಿಂದ ಕಳೆದ ಏಪ್ರಿಲ್​ನಲ್ಲಿ ಗಣರಾಜ್ಯೋತ್ಸವದ ಆಹ್ವಾನ ಬಂದಿರುವುದು ನಿಜ. ಆದರೆ ಈ ಬಗ್ಗೆ ಅಧ್ಯಕ್ಷರು ಯಾವುದೇ ನಿರ್ಧಾರ ಮಾಡಿಲ್ಲ ಎಂದು ವೈಟ್​ಹೌಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವೈಟ್​ಹೌಸ್ ಮೂಲಗಳ ಪ್ರಕಾರ ಇನ್ನೊಂದು ತಿಂಗಳೊಳಗೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರುವ ಸಾಧ್ಯತೆಯಿದೆ.
ಏನಿದು ಎಸ್-500 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ?
ವಿಶ್ವದ ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆ ಇದಾಗಿದೆ. ಅಮೆರಿಕ, ಚೀನಾ, ರಷ್ಯಾ ಸಹಿತ ಬೆರಳೆಣಿಕೆಯ ರಾಷ್ಟ್ರಗಳ ಬಳಿ ಮಾತ್ರ ಇಂಥ ಕ್ಷಿಪಣಿ ವ್ಯವಸ್ಥೆ ಇದೆ. ರಷ್ಯಾದಿಂದ ಇದನ್ನು ಖರೀದಿಸಲು ಭಾರತ ಮಾತುಕತೆ ನಡೆಸುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...