ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸುಧಾರಾಣಿ

‘ಸುಧಾರಾಣಿ’ ಕನ್ನಡ ಚಿತ್ರರಂಗದ ಉತ್ತಮ ಅಭಿನೇತ್ರಿಯರ ಸಾಲಿನಲ್ಲಿ ಕಂಗೊಳಿಸುವವರು.  ಆಗಸ್ಟ್ 14, ಸುಧಾರಾಣಿ ಅವರ ಜನ್ಮದಿನ.  ಸಣ್ಣ ವಯಸ್ಸಿನಲ್ಲೇ ನೃತ್ಯ ಕಲಿಯತೊಡಗಿ ಯಾವಾಗಲೂ ಕುಣಿಕುಣಿದು ಓಡಿಯಾಡುತ್ತಿದ್ದ ಸುಧಾರಾಣಿ ‘ಕಿಲಾಡಿ ಕಿಟ್ಟು’, ‘ಕುಳ್ಳ ಕುಳ್ಳಿ’, ‘ರಂಗನಾಯಕಿ’, ‘ಅನುಪಮಾ’, ‘ಭಾಗ್ಯವಂತ’ ಮುಂತಾದ ಚಿತ್ರಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದರು.  ಮುಂದೆ ಕೇವಲ ಹನ್ನೆರಡು ಹದಿಮೂರರ ಹುಡುಗಿ ಸುಧಾರಾಣಿ,  ರಾಜ್ ನಿರ್ಮಾಣ ಸಂಸ್ಥೆಯ ಮೂಲಕವಾಗಿ ಶಿವರಾಜಕುಮಾರ್ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ  ‘ಆನಂದ್’ ಚಿತ್ರಕ್ಕೆ ನಾಯಕಿಯಾದರು.
ಮನ ಮೆಚ್ಚಿದ ಹುಡುಗಿ, ಆಸೆಗೊಬ್ಬ ಮೀಸೆಗೊಬ್ಬ, ಸಿರಿಗಂಧ, ಪಂಚಮವೇದ, ಮನೆದೇವ್ರು, ಅರಗಿಣಿ, ಸ್ವಾತಿ, ಅವನೇ ನನ್ನ ಗಂಡ, ಮೈಸೂರು ಮಲ್ಲಿಗೆ, ಮಿಡಿದ ಶೃತಿ, ಮಹಾಕ್ಷತ್ರಿಯ, ಅನುರಾಗ ಸಂಗಮ, ದೇವತಾ ಮನುಷ್ಯ, ಜೀವನ ಚೈತ್ರ ಮುಂತಾದ ಹಲವಾರು ಯಶಸ್ವಿ ಚಿತ್ರಗಳಲ್ಲಿ ನಟಿಸಿದ ಸುಧಾರಾಣಿ, ತಮ್ಮ ಸಹಜ ನಗೆಮೊಗ, ಸುಂದರ ಅಭಿವ್ಯಕ್ತಿ ಮತ್ತು ಭಾವಾಭಿನಯಗಳಿಂದ ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆದ ಪ್ರತಿಭಾವಂತೆ. ಹಲವಾರು  ತಮಿಳು, ಮಲಯಾಳಂ  ಚಿತ್ರಗಳಲ್ಲೂ  ಅವರು  ನಟಿಸಿದ್ದಾರೆ.   ಇತ್ತೀಚಿನ  ವರ್ಷದಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಪಿ. ಶೇಷಾದ್ರಿಯವರ ‘ಭಾರತ್ ಸ್ಟೋರ್ಸ್’ ಚಿತ್ರ, ಸುಧಾರಾಣಿ ಅವರ ವರ್ಣರಂಜಿತ ಚಿತ್ರರಂಗದಲ್ಲಿ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ.
ಕನ್ನಡ ಚಿತ್ರರಂಗದ ಸಮಕಾಲೀನ ಯುವನಟರಾಗಿದ್ದ ಶಿವರಾಜ್ ಕುಮಾರ್, ರಮೇಶ್, ರವಿಚಂದ್ರನ್, ಕುಮಾರ್ ಬಂಗಾರಪ್ಪ, ಕುಮಾರ್ ಗೋವಿಂದು, ರಾಮ್ ಕುಮಾರ್, ಬಾಲರಾಜ್  ಅಲ್ಲದೆ ಹಿರಿಯನಟರಾದ ರಾಜ್ ಕುಮಾರ್, ವಿಷ್ಣುವರ್ಧನ, ಅಂಬರೀಶ್, ಅನಂತನಾಗ್  ಅವರೊಂದಿಗೆ ಕೂಡಾ ಅಭಿನಯಿಸಿ ಜನಮೆಚ್ಚುಗೆ ಪಡೆದ ಕೀರ್ತಿ ಸುಧಾರಾಣಿ ಅವರದ್ದು.  ‘ಅನುರಾಗ ಸಂಗಮ’ದಲ್ಲಿ ಕಣ್ಣಿಲ್ಲದ ಹುಡುಗಿಯಾಗಿ, ಕೆ. ಎಸ್. ನರಸಿಂಹ ಸ್ವಾಮಿಗಳ ಪ್ರಖ್ಯಾತ ‘ಮೈಸೂರು ಮಲ್ಲಿಗೆ’ಯ ನಗೆ ಮಲ್ಲಿಗೆಯನ್ನು  ಚೆಲ್ಲಿದ ಪ್ರೇಮದ ಹುಡುಗಿಯಾಗಿ, ಪಂಚಮ ವೇದ, ಅವನೇ ನನ್ನ ಗಂಡ, ಶ್ರೀಗಂಧ ಅಂತಹ ವಿಭಿನ್ನ ಕಥೆಗಳ ನಾಯಕಿಯಾಗಿ, 'ನಿನ್ನಂಥ ಅಪ್ಪ ಇಲ್ಲ' ಎನ್ನುತ್ತಾ ರಾಜ್ ಅಂತಹ ಹಿರಿಯ ನಟರಿಗೆ ಸರಿಸಮಾನವಾಗಿ  ಸುಧಾರಾಣಿ ಹಾಕಿದ ಹೆಜ್ಜೆ ಮುದ ನೀಡುವಂತದ್ದು. 
‘ಪಂಚಮ ವೇದ’ ಮತ್ತು  ‘ಮೈಸೂರು  ಮಲ್ಲಿಗೆ’ ಚಿತ್ರಗಳ  ಅಭಿನಯಕ್ಕೆ  ಕರ್ನಾಟಕ  ರಾಜ್ಯ  ಪ್ರಶಸ್ತಿ ಮತ್ತು  ಫಿಲಂ ಫೇರ್ ಪ್ರಶಸ್ತಿ ಹಾಗೂ  ಇತ್ತೀಚೆಗೆ  ‘ವಾಸ್ತು ಪ್ರಕಾರ’  ಚಿತ್ರದಲ್ಲಿನ  ಪೋಷಕ  ಪಾತ್ರಕ್ಕೆ  ಸಂದ  ಫಿಲಂ ಫೇರ್  ಪ್ರಶಸ್ತಿಗಳು  ಸುಧಾರಾಣಿ ಅವರ  ವೈವಿಧ್ಯಮಯ  ಸಾಧನೆಗಳಲ್ಲಿ  ಸೇರಿವೆ. 
ಸುಧಾರಾಣಿ ಅವರ ಸುಂದರವಾದ  ನಗೆ ಅವರೊಂದಿಗೆ ನಿರಂತರವಾಗಿರಲಿ, ಇತ್ತೀಚಿನ ದಿನಗಳಲ್ಲಿ ಸೀಮಿತ  ಚಿತ್ರಗಳಲ್ಲಿ  ಕಾಣಿಸಿಕೊಳ್ಳುತ್ತಿರುವ ಅವರಿಂದ ವಿಭಿನ್ನ ರೀತಿಯ ಕಲಾವಂತಿಕೆ ಹೊರಸೂಸುವ ಪಾತ್ರಗಳು ಹೊರಹೊಮ್ಮಲಿ ಎಂದು ಆಶಿಸುತ್ತಾ ಅವರಿಗ ಹುಟ್ಟು ಹಬ್ಬದ ಶುಭ ಹಾರೈಸೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....