ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕ್ಯಾನ್ಸರ್ ಗಡ್ಡೆಗಳ ಪತ್ತೆಗೆ ಕೃತಕ ಬುದ್ಧಿಮತ್ತೆ

ಸಂಶೋಧನೆಯಲ್ಲಿ ಶ್ವಾಸಕೋಶ ಕ್ಯಾನ್ಸರ್​ಗೆ ತುತ್ತಾದ ವ್ಯಕ್ತಿಗಳನ್ನು ಸಿಟಿ ಸ್ಕಾ್ಯನ್​ಗೆ ಒಳಪಡಿಸಲಾಗಿದೆ. ಆ ವೇಳೆ ಎಐ ವ್ಯವಸ್ಥೆ ಅತ್ಯಂತ ನಿಖರವಾಗಿ ಕ್ಯಾನ್ಸರ್ ಗಡ್ಡೆಗಳನ್ನು ಪತ್ತೆ ಮಾಡಿ ವರದಿ ನೀಡಿದೆ. ಸಂಶೋಧನೆ ವೇಳೆ ಭಾಗವಹಿಸಿದ್ದ ವಿಕಿರಣಶಾಸ್ತ್ರಜ್ಞರಿಗೆ ಕೂಡ ಈ ಗಡ್ಡೆಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ಅನುಭವಿ ವೈದ್ಯರು ಸ್ಕಾ್ಯನ್ ವೇಳೆ ಕೆಲವೇ ಗಡ್ಡೆಗಳನ್ನು ಗುರುತಿಸಿದರು ಎಂದು ವಿವಿಯ ಸಂಶೋಧನಾ ವಿದ್ಯಾರ್ಥಿ ರಾಡ್ನಿ ಲಲೊಂಡೆ ಹೇಳಿದ್ದಾರೆ.
ತಜ್ಞ ವೈದ್ಯರನ್ನೂ ಮೀರಿಸುವ ನಿಖರತೆ!
ತಜ್ಞ ವೈದ್ಯರೂ ಪತ್ತೆ ಹಚ್ಚಲು ಅಸಾಧ್ಯವಾದ ಮಾರಣಾಂತಿಕ ಕ್ಯಾನ್ಸರ್ ಗಡ್ಡೆಗಳನ್ನು ನಿಖರವಾಗಿ ಪತ್ತೆಮಾಡಬಲ್ಲ ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಮನುಷ್ಯನ ಮಿದುಳಿನ ಸಂವಹನ ಮಾದರಿಯನ್ನು ಆಧರಿಸಿ ಅಮೆರಿಕದ ಸೆಂಟ್ರಲ್ ಫ್ಲಾರಿಡಾ ವಿಶ್ವವಿದ್ಯಾಲಯದಲ್ಲಿ ಈ ವ್ಯವಸ್ಥೆ ಸಿದ್ಧಗೊಳಿಸಲಾಗಿದೆ.
# 95% ಗಡ್ಡೆಗಳನ್ನು ಪತ್ತೆಹಚ್ಚುವಲ್ಲಿ ಎಐ ವ್ಯವಸ್ಥೆಯ ನಿಖರತೆ
# 65% ಗಡ್ಡೆಗಳನ್ನು ಪತ್ತೆಮಾಡುವಲ್ಲಿ ತಜ್ಞ ವೈದ್ಯರ ನಿಖರತೆ
# ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನದ ಸಾಫ್ಟ್​ವೇರ್​ಗಳನ್ನೇ ಎಐ ವ್ಯವಸ್ಥೆಗೆ ಬಳಸಲಾಗಿದೆ
# 1,000 ಸಿಟಿ ಸ್ಕಾ್ಯನ್​ಗಳು ಗಡ್ಡೆಗಳನ್ನು ಗುರುತಿಸುವ ನಿಪುಣತೆಗಾಗಿ ಸಾಫ್ಟ್​ವೇರ್​ಗೆ ತುಂಬಲಾದ ಮಾಹಿತಿ ಪ್ರಮಾಣ

ಕಂಪ್ಯೂಟರ್​ಗೆ ಮಾನವ ದೇಹದ ಪಾಠ!
ಸಿಟಿ (ಕಂಪ್ಯೂಟರೈಸ್ಡ್ ಟೊಮೊಗ್ರಾಫಿ ) ಸ್ಕಾ್ಯನ್​ನಲ್ಲಿ ಕಂಡುಬರುವ ನರಗಳು, ಅಂಗಾಂಶ ಮತ್ತು ಮಾನವ ದೇಹದ ಇತರ ಭಾಗಗಳನ್ನು ಕಡೆಗಣಿಸಿ ಕೇವಲ ಗಡ್ಡೆಗಳನ್ನು ಮಾತ್ರ ಕೇಂದ್ರೀಕರಿಸುವಂತೆ ಎಐ ವ್ಯವಸ್ಥೆಯ ಸಾಫ್ಟ್​ವೇರ್ ಹೊಂದಿಸುವುದು ಅತಿ ಕಷ್ಟದ ಕೆಲಸ. ಕೇವಲ ಶ್ವಾಸಕೋಶದ ಅಂಗಾಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಗಡ್ಡೆಗಳು ಕಂಡುಬಂದಲ್ಲಿ ವರದಿ ನೀಡುವಂತೆ ಸಂಶೋಧಕರು ಸೂಕ್ಷ್ಮವಾಗಿ ವ್ಯವಸ್ಥೆಯ ಅಲ್ಗಾರಿದಮ್ನ್ನು ರಚಿಸಿದ್ದಾರೆ. ಸಾಧಾರಣ ಗಡ್ಡೆಗಳು ಹಾಗೂ ಕ್ಯಾನ್ಸರ್ ಗಡ್ಡೆಗಳನ್ನು ಪ್ರತ್ಯೇಕಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....