ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮಣ್ಣು, ನೀರಿಂದ ಹರಡುವ ಮೆಲಿಯೊಯಿಡೋಸಿಸ್ ಜ್ವರ

ವಿಜಯವಾಣಿ ಸುದ್ದಿಜಾಲ ಉಡುಪಿ
ಉದ್ಯಾವರ ಗ್ರಾಮ ಪಂಚಾಯಿತಿಯ ಪಿತ್ರೋಡಿಯಲ್ಲಿ ಅಪರೂಪದ ಜ್ವರಕ್ಕೆ ಕಾರಣವಾದ ಬರ್ಕೊಲ್ಡೇರಿಯ ಎಂಬ ಬ್ಯಾಕ್ಟೀರಿಯಾ ಪತ್ತೆ ಹಿನ್ನೆಲೆಯಲ್ಲಿ ನವದೆಹಲಿಯ ರಾಷ್ಟ್ರೀಯ ರೋಗ ನಿಯಂತ್ರಣ ಮಂಡಳಿ (ಎನ್‌ಸಿಡಿಸಿ) ವೈದ್ಯರ ತಂಡ ಉಡುಪಿಗೆ ಆಗಮಿಸಿದ್ದು, ಬುಧವಾರ ಈ ಕುರಿತ ವರದಿ ಸಿದ್ಧವಾಗಲಿದೆ.
ಗೋವಿಂದ ನಗರ ನಿವಾಸಿ ದೀಕ್ಷಿತ್(18) ಇತ್ತೀಚೆಗೆ ಮೆಲಿಯೊಯಿಡೋಸಿಸ್ ಜ್ವರದಿಂದ ಮೃತಪಟ್ಟಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಎನ್‌ಸಿಡಿಸಿ ವೈದ್ಯರ ತಂಡ ಪರಿಶೀಲನೆ ನಡೆಸುತ್ತಿದೆ. ಇಬ್ಬರು ಮೈಕ್ರೊ ಬಯಾಲಜಿಸ್ಟ್, ಇಬ್ಬರು ವೈದ್ಯರು, ಎನ್‌ಸಿಡಿಎಸಿಯ ಇಬ್ಬರು ತಜ್ಞ ವೈದ್ಯರು ಸೇರಿದಂತೆ ಒಟ್ಟು ಐದು ಮಂದಿಯ ತಂಡ ಪರಿಸರ ಅವಲೋಕನ, ಬ್ಯಾಕ್ಟಿರೀಯ ಮತ್ತು ಜ್ವರದ ಲಕ್ಷಣಗಳ ಬಗ್ಗೆ ಆಳ ಅಧ್ಯಯನ ನಡೆಸುತ್ತಿದೆ. ಮೃತಪಟ್ಟ ಯುವಕನಿದ್ದ ಪರಿಸರದ ನೀರು, ಮಣ್ಣಿನ ಮಾದರಿ ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸುತ್ತಿದ್ದಾರೆ.
ಪ್ರಕರಣ ಕುರಿತಂತೆ ಎಲ್ಲ ಆಯಾಮಗಳಿಂದ ಅಧ್ಯಯನ ನಡೆಯುತ್ತಿದೆ. ಮಣಿಪಾಲ ಮುಂತಾದೆಡೆ ಈಗಾಗಲೆ ಈ ಜ್ವರ ಬಾಧಿಸಿ ಗುಣಮುಖರಾದ ಪ್ರಕರಣಗಳು ಇದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ. ಅವರ ಜ್ವರದ ಗುಣಲಕ್ಷಣಗಳು, ಜ್ವರ ಬಂದ ಎಷ್ಟು ದಿನದಲ್ಲಿ ವೈದ್ಯರನ್ನು ಸಂಪರ್ಕಿಸಿದ್ದರು, ಚಿಕಿತ್ಸೆ ನೀಡಿದ ರೀತಿಯನ್ನು ಅಧ್ಯಯನ ನಡೆಸಲಾಗುತ್ತಿದೆ.
ರೋಗ ಬರುವುದು ಹೇಗೆ?: ಬರ್ಕೊಲ್ಡೇರಿಯ ಬ್ಯಾಕ್ಟೀರಿಯಾದಿಂದ ಬರುವ ಮೆಲಿಯೊಯಿಡೋಸಿಸ್ ಜ್ವರ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಅಲ್ಲ. ಬ್ಯಾಕ್ಟೀರಿಯಾಗಳಿಂದ ದೇಹಕ್ಕೆ ಹರಡುತ್ತದೆ. ಕೈ, ಮೈ ತಾಗಿಸುವುದು, ಕೆಮ್ಮುವುದು, ಸೀನುವ ಮೂಲಕ ಬ್ಯಾಕ್ಟೀರಿಯ ಹರಡುವುದಿಲ್ಲ. ಈ ಜ್ವರ ಮಾರಣಾಂತಿಕವೂ ಅಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದರೆ ಜ್ವರ ನಿಯಂತ್ರಣಕ್ಕೆ ಬರುತ್ತದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದೊಂದು ನೈಸರ್ಗಿಕ ಬ್ಯಾಕ್ಟೀರಿಯಾ ಆಗಿದ್ದು, ಕೃಷಿ ಗದ್ದೆ ಪ್ರದೇಶಗಳಂಥ ಮಣ್ಣಿನ ಪರಿಸರದಲ್ಲಿ ಮಳೆ ಬಂದ ನಂತರ ಬ್ಯಾಕ್ಟೀರಿಯಾ ಮಣ್ಣಿನ ಒಳಭಾಗದಿಂದ ನೆಲದ ಮೇಲೆ ಬರುತ್ತದೆ. ಕಲುಷಿತ ಮಣ್ಣು ಮತ್ತು ನೀರಿನ ಸಂಪರ್ಕದಿಂದ ಅಥವಾ ಸೇವನೆಯಿಂದ ಅಥವಾ ದೇಹದಲ್ಲಿ ಗಾಯವಿದ್ದರೆ ಬ್ಯಾಕ್ಟೀರಿಯಾ ದೇಹ ಪ್ರವೇಶಿಸುವ ಸಾಧ್ಯತೆ ಹೆಚ್ಚು. ಮಧುಮೇಹವಿದ್ದ ವ್ಯಕ್ತಗಳಿಗೆ ಬೇಗನೆ ಆವರಿಸುತ್ತದೆ. ಬಹುಅಂಗಾಗಗಳ ಮೇಲೆ ಇದು ಪರಿಣಾಮ ಬೀರುತ್ತದೆ.
ಮೆದುಳು ಹಾನಿ ಮಾಡಿದ್ದ ಬ್ಯಾಕ್ಯೀರಿಯಾ: ಜುಲೈ 7ರಂದು ಯುವಕನಿಗೆ ಜ್ವರ ಬಾಧಿಸಿದ್ದು, ಮರುದಿನ ಉಲ್ಬಣಗೊಂಡಾಗ ಮನೆಮದ್ದು ಮಾಡಲಾಗಿತ್ತು. ಜ್ವರ ಹೆಚ್ಚಾದಾಗ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಯುವಕನ ದೇಹಕ್ಕೆ ಸೇರ್ಪಡೆಯಾದ ಬ್ಯಾಕ್ಟೀರಿಯಾ ಮೆದುಳನ್ನು ಆವರಿಸಿ, ಅಲ್ಲಿನ ವ್ಯವಸ್ಥೆಯನ್ನು ಸಂಪೂರ್ಣ ಹಾನಿಗೊಳಿಸಿತ್ತು. ಪರಿಣಾಮ ಆತ ಕೋಮಾ ಸ್ಥಿತಿಗೆ ತಲುಪಿದ್ದ. ಮೆದುಳು ಜ್ವರದ ಲಕ್ಷಣಗಳನ್ನು ಗಮನಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಜ್ವರ ಮೆದುಳು ಮಾತ್ರವಲ್ಲದೆ ಇತರ ಅಂಗಗಳಿಗೂ ಹಾನಿ ಮಾಡುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ವೈದ್ಯರು.
ಮೆಲಿಯೊಯಿಡೋಸಿಸ್ ಜ್ವರ ಪ್ರಕರಣ ಅಪರೂಪ. ಈ ಹಿಂದೆಯೂ ಕಂಡು ಬಂದಿದ್ದು ರೋಗಿಗಳು ಗುಣಮುಖವಾಗಿದ್ದಾರೆ. ಸದ್ಯ ಪ್ರಕರಣವನ್ನು ಆರೋಗ್ಯ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು, ಎನ್‌ಸಿಡಿಸಿ ವೈದ್ಯರು ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ, ಇದು ಸಾಂಕ್ರಾಮಿಕ ರೋಗವಲ್ಲ.
– ಡಾ.ರೋಹಿಣಿ, ಜಿಲ್ಲಾ ಆರೋಗ್ಯ ಅಧಿಕಾರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...