ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಟಲ್ ಬಿಹಾರಿ ವಾಜಪೇಯಿ (ಕಾರ್ಗಿಲ್ ಯುದ್ಧ)



(ಕಾರ್ಗಿಲ್ ಯುದ್ಧ)
ಜಮ್ಮು ಕಾಶ್ಮೀರ ರಾಜ್ಯದ ಕಾರ್ಗಿಲ್ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಅಂತರಾಷ್ಟ್ರೀಯ ಗಡಿಯನ್ನು ಮೀರಿ ಕಾಶ್ಮೀರ ಕಣಿವೆಗಳ ಮುಖಾಂತರ ಒಳನುಸುಳುತ್ತಿರುವುದು 1999 ನೇ ಇಸವಿಯ ಆರಂಭದಲ್ಲಿ ಜನಸಾಮಾನ್ಯರಿಗೆ ಹಾಗೂ ಗಡಿ ಭದ್ರತಾ ಪಡೆಯ ಸಿಬ್ಬಂದಿಗಳಿಗೆ ಖಾತ್ರಿಯಾಗಿ ಅದೇ ಸುದ್ದಿ ಭಾರತೀಯರ ಕಣ್ಣು ಕೆಂಪಗಾಗಿಸಲು ಒಂದು ಕಾರಣವಾಯಿತು.
ಬರಿಯ ಕಾರ್ಗಿಲ್ ಪ್ರದೇಶ ಮಾತ್ರವಲ್ಲದೆ ಮಾನವ ರಹಿತ ಚೆಕ್ ಪೋಸ್ಟ್ ಗಳ ಮುಖಾಂತರ ಸಿಯಾಚಿನ ಗಡಿವರೆವಿಗೂ ಒಳನುಸುಳುವಿಕೆ ಅವ್ಯಾಹತವಾಗಿ ನಡೆಯುತ್ತಿದ್ದುದು ಭಾರತಕ್ಕೆ ಸಹಿಸಲಸಾಧ್ಯವಾಯಿತು. ಅದೇ ಸಮಯಕ್ಕೆ ಪಾಕಿಸ್ತಾನಿ ನಾಯಕರ ಹೇಳಿಕೆಗಳು ಪಾಕಿಸ್ತಾನ ಯುದ್ಧಕ್ಕೆ ತಯಾರಾಗಿದೆ ಎಂಬ ಸ್ಪಷ್ಟ ಸಂದೇಶವನ್ನು ಅದಾಗಲೇ ರವಾನಿಸಿಯಾಗಿತ್ತು.
ಕೇಂದ್ರ ಸರ್ಕಾರ ಜೂನ್ 1999 ರಲ್ಲಿ ಭಾರತೀಯ ಸೇನೆಗೆ ಒಳನುಸುಳುಕೋರರನ್ನು ಪ್ರತಿರೋಧಿಸಲು ಆಪರೇಷನ್ ವಿಜಯ್ ಹೆಸರಿನ ಯುದ್ಧ ಆರಂಭಿಸುವಂತೆ ಅಪ್ಪಣೆ ಕೊಟ್ಟಿತು. ಕಾಶ್ಮೀರ ಗಡಿಯಲ್ಲಿನ ತೀವ್ರ ಕಡಿಮೆ ತಾಪಮಾನ, ವಿರೋಧಿ ಬಣದಿಂದ ಮಳೆಯಂತೆ ಬಂದು ಸುರಿಯುತ್ತಿದ್ದ ಗ್ರೆನೇಡುಗಳು, ಸಮುದ್ರ ಮಟ್ಟದಿಂದ ಅತೀ ಎತ್ತರದಲ್ಲಿದ್ದು ಆಗಾಗ ಉಸಿರಾಡಲೂ ಕಷ್ಟವಾಗುವಂತಹ ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಭಾರತೀಯ ಯೋಧರು ಪಾಕಿಸ್ತಾನಕ್ಕೆ ಎದಿರೇಟು ಕೊಡುವಲ್ಲಿ ಸಫಲರಾಗುತ್ತಿದ್ದರು. * ಮೂರು ತಿಂಗಳ ಪರ್ಯಂತ ನಡೆದ ಕಾರ್ಗಿಲ್ ಯುದ್ಧದಲ್ಲಿ ಸುಮಾರು 500 ಜನ ಭಾರತೀಯ ಯೋಧರು ಹುತಾತ್ಮರಾದರು ಹಾಗೂ ಪಾಕಿಸ್ತಾನ ಬಣದಲ್ಲಿ ಸುಮಾರು 600 - 4000 ಸೈನಿಕರು ಹತರಾಗಿರುವ ಬಗ್ಗೆ ಅಂದಾಜಿಸಲಾಗಿದೆ.
ಒಳನುಸುಳುಕೋರರನ್ನು ಹಿಮ್ಮೆಟ್ಟಿಸುವಲ್ಲಿ ಭಾರತ ಸಫಲವಾಗಿದ್ದರಿಂದ ಪಾಕಿಸ್ತಾನಕ್ಕೆ ತೀವ್ರ ಮುಖಭಂಗವಾಯಿತು.
ಇದರಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನ ಆಗಷ್ಟೇ ತಾನೇ ಸಿದ್ಧಪದಿಸಿಕೊಂಡಿದ್ದ ಅಣು ಬಾಂಬ್ ಅನ್ನು ಭಾರತದ ಮೇಲೆ ಪ್ರಯೋಗಿಸುವ ಬಗ್ಗೆ ಮಾತುಗಳು ಕೇಳಿ ಬರಲಾರಂಭಿಸಿದವು. ವಿಷಯ ತಿಳಿದ ಆಗಿನ ಅಮೇರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್ ಅಣು ಬಾಂಬ್ ಬಳಸಿ ಜಾಗತೀಕವಾಗಿ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡದಂತೆ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.
ಯುದ್ಧ ಸಂಬಂಧಿ ಪರಿಕರಗಳನ್ನೆಲ್ಲ ಪರದೇಶದಿಂದ ಅಮದು ಮಾಡಿಕೊಂಡಿದ್ದ ಪಾಕಿಸ್ತಾನಕ್ಕೆ ಯುದ್ಧದಲ್ಲಿ ಸೋತಿದ್ದು ಅಪಾರ ನಷ್ಟವಾಯಿತು. ಅಮೇರಿಕಾ ಹಾಗು ಚೀನಾ ತಾವು ಮಧ್ಯ ಪ್ರವೇಶಿಸುವುದಕ್ಕೆ ಹಿಂದೇಟು ಹಾಕಿದವು. ಇಷ್ಟೆಲ್ಲಾ ನಡೆಯುತ್ತಿದ್ದರೂ ಭಾರತದ ಕಡೆಯಿಂದ ಆಗುತ್ತಿದ್ದ ದಾಳಿ ಇನ್ನು ನಿಂತಿರಲಿಲ್ಲ, ಪಾಕಿಸ್ತಾನಿ ಸೈನಿಕರು ಬಂದ ದಾರಿಗೆ ಸುಂಕವಿಲ್ಲದಂತೆ ಅಂತರಾಷ್ಟ್ರೀಯ ಗಡಿ ದಾಟಿ ಹಿಂದೆ ಸರಿಯುವ ವರೆವಿಗೂ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಗೋಚರಿಸಲಿಲ್ಲ.
ಕೂಡಲೇ ಪಾಕಿಸ್ತಾನದ ಸೇನಾ ಅಧ್ಯಕ್ಷ ಜನರಲ್ ಮುಷರಫ್ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ರಲ್ಲಿ ಪಾಕಿಸ್ತಾನಿ ಸೈನಿಕರನ್ನು ಹಿಂದಕ್ಕೆ ಕರೆಸಿ ಮೊದಲಿನಂತೆ ನಿಯಂತ್ರಣ ರೇಖೆಯಲ್ಲಿ ನಿಲ್ಲಿಸಲು ಮನವಿ ಮಾಡಿದರು. ಪಾಕಿಸ್ತಾನದಲ್ಲಿ ಸರ್ಕಾರಕ್ಕೂ ಹಾಗು ಸೇನೆಗೂ ತಮ್ಮ ರಾಷ್ಟ್ರೀಯ ಕಾರ್ಯ ನಿರ್ವಹಣೆಯ ವಿಚಾರದಲ್ಲಿ ವಿಧಿತ ಕಟ್ಟುಪಾಡುಗಳು ಇಲ್ಲದ ಕಾರಣ ಎರಡೂ ಬೇರೆ ಬೇರೆ ಯಾಗಿ ಕಾರ್ಯ ನಿರ್ವಹಿಸುವುದೇ ಹೆಚ್ಚು.
ಇಲ್ಲೂ ಹಾಗೆ ನಡೆದು ನವಾಜ್ ಶರೀಫರು ಮಾಡಿದ ಆಜ್ಞೆಯನ್ನು ಒಪ್ಪಲು ಯಾರೂ ತಯಾರಿರಲಿಲ್ಲ. ಆದರೆ ಅಷ್ಟರಲ್ಲಾಗಲೇ ತಮ್ಮ ಶಕ್ತಿ ಸಾಮರ್ಥ್ಯಗಳನ್ನು ಅರಿತುಕೊಂಡಿದ್ದ ಪಾಕಿಸ್ತಾನದ ಒಂದು ಸೇನಾ ತುಕಡಿ(ಏನ್ ಎಲ್ ) ತಾನು ಯುದ್ಧ ಭೂಮಿಯಿಂದ ಹಿಂದೆ ಸರಿಯಿತು. ಕೊನೆಗೆ ಸೇನೆ ಹಿಂದೆ ಸರಿಯುವ ವಿಚಾರದಲ್ಲಿ ಪಾಕಿಸ್ತಾನಿ ಸೇನೆಯೊಳಗೆ ಭಿನ್ನಾಭಿಪ್ರಾಯ ಸ್ಫೋಟವಾಯಿತು.
ಭಿನ್ನಾಭಿಪ್ರಾಯ ಎಷ್ಟರ ಮಟ್ಟಿಗೆ ಮುಂದುವರಿಯಿತೆಂದರೆ ಪಾಕಿಸ್ತಾನ ಸೇನೆ ಒಳಜಗಳಗಳಿಗೆ ಸಾಕ್ಷಿಯಾಯಿತು ಹಾಗು ಹಲವಾರು ಸಾವು ನೋವುಗಳನ್ನು ಕಂಡಿತು. ಎಲ್ಲದರ ಫಲವಾಗಿ ಪಾಕಿಸ್ತಾನದ ಸೈನಿಕರು ಯುದ್ಧದಲ್ಲಿ ಸಫಲರಾಗದೆ ಹಿಂದಿರುಗಿದರು, ಭಾರತ ವಿಜಯೋತ್ಸವ ಆಚರಿಸಿತು.
ಯುದ್ಧ ಆಗಿನ ಪ್ರಧಾನ ಮಂತ್ರಿ ವಾಜಪೇಯಿ ಯವರ ವ್ಯಕ್ತಿತ್ವವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಹಕಾರಿಯಾಯಿತು. ದೇಶದಲ್ಲಿ ಅಸಂಖ್ಯಾತ ಜನಗಳು ವಾಜಪೇಯಿಯವರ ಧೈರ್ಯವಾಗಿ ತೀರ್ಮಾನ ತೆಗೆದುಕೊಳ್ಳುವ ಹಾಗು ಎಷ್ಟೇ ಕಷ್ಟವಾದರೂ ಅದಕ್ಕೆ ಬದ್ಧರಾಗಿ ಗೆಲ್ಲುವ ಛಾತಿಯನ್ನು ಮೆಚ್ಚಿಕೊಂಡರು ಹಾಗು ಅವರ ಅಭಿಮಾನಿಗಳು ಆದರು.
ಕಾರ್ಗಿಲ್ ಯುದ್ಧ ಅಷ್ಟೊಂದು ಪ್ರಚಾರ ಪಡೆಯಲು ಇದ್ದ ಒಂದೇ ಒಂದುಕಾರಣವೆಂದರೆ ಅದು ಎರಡು ಅಣ್ವಸ್ತ್ರ ರಾಷ್ಟ್ರಗಳು ಮುಖಾ ಮುಖಿಯಾಗಿ ಯುದ್ಧ ಮಾಡುತ್ತಿರುವುದು. ದಕ್ಷಿಣ ಏಷಿಯಾದ ಎರಡೂ ಸಹೋದರ ರಾಷ್ಟ್ರಗಳೇ ಅಣ್ವಸ್ತ್ರಗಳಿಂದ ಬಡಿದಾಡಿ ಕೊಂಡರೆ ಜಗತ್ತಿಗೆ ಕೆಟ್ಟ ಅರ್ಥ ರವಾನೆಯಾಗುವುದಾಗಿ ಎಲ್ಲ ರಾಷ್ಟ್ರಗಳಿಗೂ ಆತಂಕ ಮನೆ ಮಾಡಿತ್ತು. ಆದರೆ ಅಂದಿನ ಭಾರತದ ಪ್ರಧಾನಿ ವಾಜಪೇಯಿ ಅಷ್ಟೇ ಸಮಾಧಾನದಿಂದ ಪರಿಸ್ಥಿತಿ ತಿಳಿಯಾಗಿಸಲು ಯತ್ನಿಸಿದರು .
ಯುದ್ಧಕ್ಕಿಂತಲೂ ಮುಂಚೆ ಪಾಕಿಸ್ತಾನದೊಂದಿಗೆ ಶಾಂತಿ ಮಾತು ಕತೆ ನಡೆಸಿದ್ದರು. ಎರಡೂ ರಾಷ್ಟ್ರಗಳ ಶಾಂತಿಯ ಹಾಗೂ ಸ್ನೇಹದ ಧ್ಯೋತಕವಾಗಿ ಭಾರತದಿಂದ ಪಾಕಿಸ್ತಾನದ ಲಾಹೋರ್ ಗೆ ಬಸ್ ಸೇವೆಯನ್ನು ಆರಂಭಿಸಿದ್ದರು. ಯುದ್ಧ ಕಾಲದಲ್ಲಿ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಸೃಷ್ಟಿಯಾದರೂ ತುರ್ತು ಪರಿಸ್ತಿತಿ ಘೋಷಿಸದೆ ಸೇನೆಯನ್ನು ಹುರಿದುಂಬಿಸಿದರು. ಯುದ್ಧ ಸಮಯದಲ್ಲಿ ಸೈನಿಕರಿಗೆ ಹಿಂದೆಂದಿಗಿಂತಲೂ ಹೆಚ್ಚು ಅಧಿಕಾರ ಕೊಟ್ಟರು.
ಸಣ್ಣ ಪುಟ್ಟ ವಿಚಾರಗಳಿಗೂ ಮೇಲಧಿಕಾರಿಗಳ ಅಪ್ಪಣೆಗಾಗಿ ಅಲೆಯುತ್ತಿದ್ದ ಸೇನೆಯ ವಕ್ತಾರರಿಗೆ ಕೊಂಚ ಸಮಾಧಾನವೆನಿಸಿದ್ದೆ ಆಗ. ಇವೆಲ್ಲವುಗಳ ಮುಖಾಂತರ ವಾಜಪೇಯಿ ಶತ್ರು ಯಾರೇ ಆಗಿದ್ದರು ನಮ್ಮವರಲ್ಲಿ ಹುರುಪು ಮೂಡಿಸಿದರೆ ಯುದ್ಧವನ್ನು ಅರ್ಧ ಗೆದ್ದಂತೆ ಎಂಬ ಸ್ಪಷ್ಟ ಸಂದೇಶವನ್ನು ಸಾರಿದರು. ಎಲ್ಲ ಕಾರಣಗಳಿಂದಲೇ ವಾಜಪೇಯಿ ಜನ ಮಾನಸಗಳಲ್ಲಿ ನಿಂತರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...