ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**:::ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ನಂತರ ಜೀವನ ಮತ್ತು ಇತರೆ.

• ವಾಜಪೇಯಿಯವರು ರಾಜಕಾರಣಿಯಲ್ಲದೆ ಕವಿಯೂ ಆಗಿದ್ದರು. ಹಿಂದಿ ಭಾಷೆಯಲ್ಲಿ ಅನೇಕ ಕವಿತೆಗಳನ್ನು ರಚಿಸಿದ್ದಾರೆ. ಇವರ ಇಪ್ಪತ್ತೊಂದು ಕವಿತೆಗಳ ಸಂಕಲನ Twenty-One Poems ಎಂಬ ಹೆಸರಿನಲ್ಲಿ ಆಂಗ್ಲಭಾಷೆಗೆ ಅನುವಾದಗೊಂಡಿದೆ. 2005 ರಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿ ಕೊಂಡವರು ಅಟಲ್, ರಾಜಕೀಯವನ್ನ ಬಿಟ್ಟರೆ ಅಟಲ್ ಒಬ್ಬ ಒಳ್ಳೆಯ ಕವಿ ಹಾಗೂ ಸಾಹಿತಿಯೂ ಹೌದು. ಅವರು ಬರೆದ ಪುಸ್ತಕಗಳು ಅನೇಕ.
• ತಮ್ಮ ಆಡಳಿತದ ಸಮಯದಲ್ಲಿ ಇಡೀ ವಿಶ್ವವೇ ತಬ್ಬಿಬ್ಬಾಗುವಂತೆ ಮಾಡಿದ ಪೋಖ್ರಾನ್ ಅಣು ಪರೀಕ್ಷೆ, ಭಾರತ ಪಾಕ್ ಬಾಂಧವ್ಯಕ್ಕೆ ಕೊಂಡಿಯಾಗಿ ಲಾಹೋರ್ ಬಸ್ ಪ್ರಯಾಣ ಆರಂಭ ತನ್ನ ಕನಸಿನ ಕೂಸಾದ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ಚಾಲನೆ ನೀಡಿದರು.
• ದೇಶದ ನಾಲ್ಕೂ ಮೂಲೆಗಳಿಗೂ ಸಂಪರ್ಕ ಕಲ್ಪಿಸುವ 15 ಸಾವಿರ ಕಿ.ಮೀ. ಉದ್ದದ "ಸುವರ್ಣ ಚತುಷ್ಪಥ" ಹೆದ್ದಾರಿಯನ್ನು ದಾಖಲೆಯ ಸಮಯದಲ್ಲಿ ಪೂರ್ಣಗೊಳಿಸಿದ ವಾಜಪೇಯಿಯವರ ಸಾಧನೆ ಅಸಾಮಾನ್ಯವಾದುದು. ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಹಳ್ಳಿಹಳ್ಳಿಗಳಿಗೂ ರಸ್ತೆಯನ್ನು ಒದಗಿಸಿದ್ದು, "ಸರ್ವ ಶಿಕ್ಷಾ ಅಭಿಯಾನ" ಮೂಲಕ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡಲು ಮುಂದಾಗಿದ್ದ ವಾಜಪೇಯಿಯವರು ನಿಜಕ್ಕೂ ಒಬ್ಬ ದೂರದೃಷ್ಟಿ ಹೊಂದಿದ್ದ ನಾಯಕ.
• ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೆ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ಧಿ ಎಂದು ತಮ್ಮ ರಾಜಕೀಯ ವಿರೋದಿಗಳಿಂದಲೇ ಕರೆಸಿಕೊಂಡವರು ಅಟಲ್ ಬಿಹಾರಿ ವಾಜಪೇಯಿ.ಯು ಪಿ ಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನ್ ಮೋಹನ್ ಸಿಂಗ್ ವಾಜಪೇಯಿಯವರನ್ನು 'ಭಾರತೀಯ ರಾಜಕೀಯ ರಂಗದ ಭೀಷ್ಮ ಪಿತಾಮಹ' ಎಂದು ವರ್ಣಿಸಿದ್ದಾರೆ. ವಾಜಪೇಯಿ ಯವರಲ್ಲಿ ಅತ್ಯಂತ ಗೌರವವಿರಿಸಿಕೊಂಡಿರುವ ಮನ್ ಮೋಹನ್ ಸಿಂಗ್ ವಾಜಪೇಯಿಯವರ ಪ್ರತೀ ಜನ್ಮ ದಿನದಂದು ವಯಕ್ತಿಕವಾಗಿ ಶುಬಾಶಯಗಳನ್ನೂ ತಿಳಿಸುತ್ತಾರೆ.
• 1977 ರಲ್ಲಿ ಜನತಾ ಸಂಘದ ಮೊದಲ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಆಯ್ಕೆ ಆದಾಗ ಅವರು ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡುವ ಅವಕಾಶ ಸಿಕ್ಕಿತ್ತು. ಆ ಸಂದರ್ಭ ದಲ್ಲಿ ಹಿಂದಿಯಲ್ಲಿ ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡಿದ ಏಕೈಕ ಭಾರತೀಯರು ಅಟಲ್. ವಿಶೇಷವೆಂದರೆ ಅವರು ಭಾರತದ ಅವಿವಾಹಿತ ಪ್ರಧಾನ ಮಂತ್ರಿಯಾಗಿದ್ದರು.[೫]
ಡಿಸೆಂಬರ್ 2005 ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ ವಾಜಪೇಯಿ ಮುಂದಿನ ಯಾವ ಚುನಾವನೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು. ಬಿ ಜೆ ಪಿ ಪಕ್ಷದ ಬೆಳ್ಳಿ ಹಬ್ಬದ ಅಂಗವಾಗಿ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಾಜಪೇಯಿ "ನನ್ನ ನಂತರ ಲಾಲ್‍ಕೃಷ್ಣ ಅಡ್ವಾಣಿ ಹಾಗೂ ಪ್ರಮೋದ್ ಮಹಾಜನ್ ಬಿ.ಜೆ.ಪಿ ಗೆ ರಾಮ ಲಕ್ಷ್ಮಣರಂತೆ ಇರಲಿದ್ದಾರೆ" ಎಂದು ಹೇಳುವ ಮೂಲಕ ತಮ್ಮ ನಂತರ ಪಕ್ಷವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಸೂಚಿಸಿದ್ದರು. ಮುಂದೆ ಆರೋಗ್ಯ ಸಮಸ್ಯೆಯಿಂದ ಬಳಲಿದ ವಾಜಪೇಯಿ ದೆಹಲಿಯ ಉನ್ನತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದ ಪರಿಣಾಮ 2009 ರ ಲೋಕಸಭಾ ಚುನಾವಣೆಯ ಯಾವ ಪ್ರಚಾರ ಕಾರ್ಯಗಳಲ್ಲಿಯೂ ಅವರು ಭಾಗಿಯಾಗಲಿಲ್ಲ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...