ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಟೀ ಪ್ರಿಯರೇ ಸ್ವಲ್ಪ ಗಮನಿಸಿ, ಅತಿಯಾದರೆ ಅನಾರೋಗ್ಯ ಗ್ಯಾರಂಟಿ

ಹೊರಗೆ ಧೋ ಎಂದು ಮಳೆ ಸುರಿಯುತ್ತಿದೆ. ಸಂಜೆ ಸಮಯ ಬೇರೆ. ಒಂದು ಟೀ ಬೇಕೇಬೇಕು ಎನ್ನಿಸುತಿದೆ. ಆದರೆ, ಈಗಾಗಲೇ ಮೂರು ಕಪ್​ ಕುಡಿದಾಗಿದೆ. ಆದರೂ ಬಿಸಿಬಿಸಿ ಚಹಾ ಬಯಕೆಯನ್ನು ನಿಯಂತ್ರಿಸಲಾಗುತ್ತಿಲ್ಲ. ಟೀ ಪ್ರಿಯರಿಗೇ ಗೊತ್ತು ಅದರ ಸ್ವಾದ. ಬೇಕು ಎನ್ನಿಸಿದಾಗಲೆಲ್ಲ ಕುಡಿದುಬಿಡುತ್ತಾರೆ. ಹಾಗೆ ಕುಡಿಯುವ ಮುನ್ನ ಸ್ವಲ್ಪ ಎಚ್ಚರಿಕೆ ಇರಲಿ ಅದರಿಂದ ದೇಹ, ಮನಸಿಗೆ ದುಷ್ಪರಿಣಾಮವೂ ಆಗಲಿದೆ.
ಟೀ ಪುರಾತನ ಕಾಲದ ಪೇಯ. ಇದರಿಂದ ಆರೋಗ್ಯಕ್ಕೆ ಹಲವು ಅನುಕೂಲಗಳಿವೆ. ಕೆಫೀನ್, ಫ್ಲೋರೈಡ್ ಮತ್ತು ಫ್ಲೇವನಾಯಿಡ್ಗಳನ್ನು ಒಳಗೊಂಡ ಟೀ ದಿನಕ್ಕೆ ಮೂರು ಕಪ್​ ಕುಡಿದರೆ ಹೃದಯಕ್ಕೆ ಒಳ್ಳೆಯದು. ಹೃದ್ರೋಗಳನ್ನು ಶೇ.11ರಷ್ಟು ಕಡಿಮೆ ಮಾಡುತ್ತದೆ ಎಂದು ಈ ಹಿಂದೆ ನಡೆಸಲಾದ ಅಧ್ಯಯನವೇ ಹೇಳಿದೆ. ಆದರೆ, ಮಿತಿಮೀರಿದ ಟೀ ಸೇವನೆ ಕೆಲವು ದುಷ್ಪರಿಣಾಮಗಳನ್ನು ಉಂಟುಮಾಡುವುದು ಸುಳ್ಳಲ್ಲ.
ಏಕಾಗ್ರತೆ ಕುಂಠಿತ
ಗ್ರೀನ್​ ಟೀ ಇರಲಿ, ಬ್ರೌನ್​ ಟೀ ಇರಲಿ ಒಂದು ಕಪ್​ನಲ್ಲಿ 40 ಎಂಜಿಯಷ್ಟು ಕೆಫೀನ್​ ಇರುತ್ತದೆ. ಕೆಫೀನ್​ ಪ್ರಮಾಣ ನಮ್ಮ ದೇಹದೊಳಗೆ ಹೆಚ್ಚಾಗಿ ಹೋದರೆ ಏಕಾಗ್ರತೆ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ಅಲ್ಲದೆ, ನಿದ್ದೆಗೆ ಅಡ್ಡಿಯಾಗಿ, ವಿಶ್ರಾಂತಿಯಿಲ್ಲದಂತೆ ಮಾಡುತ್ತದೆ.ಆತಂಕಕ್ಕೂ ಕಾರಣವಾಗುತ್ತದೆ. ಇಂಥ ಬದಲಾವಣೆಗಳು ಕ್ರಮೇಣ ದೈಹಿಕ ಅನಾರೋಗ್ಯಕ್ಕೆ ಕಾರಣವಾಗುತ್ತವೆ ಎಂದು ಬ್ರೌನ್​ ಯೂನಿವರ್ಸಿಟಿ ಅಧ್ಯಯನ ಹೇಳಿದೆ.
ಕಬ್ಬಿಣಾಂಶ ಹೀರುವ ಸಾಮರ್ಥ್ಯ ಕಡಿಮೆಯಾಗುವುದು
ಚಹಾದಲ್ಲಿ ಇರುವ ರಾಸಾಯಿನಕ ಪದಾರ್ಥ ಟ್ಯಾನಿನ್ಸ್​ ಅಗತ್ಯಕ್ಕಿಂತ ಜಾಸ್ತಿ ದೇಹದೊಳಗೆ ಹೋದರೆ ನಮ್ಮಲ್ಲಿನ ಕಬ್ಬಿಣಾಂಶ ಹೀರುವ ಸಾಮರ್ಥ್ಯವನ್ನು ಹದಗೆಡಿಸುತ್ತದೆ. ಯಾವುದೇ ಆಹಾರ ಸೇವಿಸಿದರೂ ನಮಗೆ ಬೇಕಾದಷ್ಟು ಐರನ್​ ಪ್ರಮಾಣ ಸಿಗದಂತಾಗುತ್ತದೆ. ಅತಿಯಾದ ಚಹಾ ಸೇವನೆ ವ್ಯಕ್ತಿಯ ಕಬ್ಬಿಣಾಂಶ ಹೀರಿಕೊಳ್ಳುವ ಶಕ್ತಿಯನ್ನು ಶೇ.60ರಷ್ಟು ಕಡಿಮೆ ಮಾಡುತ್ತದೆ ಎಂದು ಕೊಲೊರಾಡೋ ರಾಜ್ಯ ವಿಶ್ವ ವಿದ್ಯಾಲಯ ತಿಳಿಸಿದೆ. ದೇಹದಲ್ಲಿ ಕಬ್ಬಿಣಾಂಶ ಕೊರತೆಯಾದರೆ ಹಲವು ರೋಗಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದೆ.
ಎಷ್ಟು ಟೀ ಕುಡಿಯಬಹುದು?
ಟೀಯಿಂದ ಒಳಿತೂ ಆಗುತ್ತದೆ, ಕೆಡುಕೂ ಇದ್ದೇ ಇದೆ. ಹಾಗಾದರೆ ದಿನಕ್ಕೆ ಎಷ್ಟು ಟೀ ಕುಡಿಯಬಹುದು ಎಂಬುದರ ಬಗ್ಗೆ ಹಲವು ಅಧ್ಯಯನಗಳು ನಡೆದಿವೆ. ಕೆಲವರು ದಿನಕ್ಕೆ ಎರಡರಿಂದ ನಾಲ್ಕು ಕಪ್​ ಚಹಾ ಒಳಿತು ಎಂದು ಹೇಳಿದರೆ ಮತ್ತೆ ಕೆಲವರು ಗರಿಷ್ಠ 10 ಕಪ್​ವರೆಗೂ ಕುಡಿಯಬಹುದು ಎಂದಿದ್ದಾರೆ. ಹಾಗೇ ಮೂರರಿಂದ ಐದು ಕಪ್​ ಕೂಡ ಕುಡಿಯಬಹುದೂ ಎಂಬ ವರದಿಗಳೂ ಇವೆ. ಆದರೆ, ಮುಖ್ಯವಾಗಿ ನಮ್ಮ ದೇಹಕ್ಕೆ ಎಷ್ಟು ಹೊಂದಿಕೊಳ್ಳುತ್ತದೆ ಎಂಬುದನ್ನು ನಾವೇ ನೋಡಿಕೊಳ್ಳಬೇಕು. ಹಾಗೇ ಕಪ್​ ಎಷ್ಟು ದೊಡ್ಡದಾಗಿದೆ ಎಂಬುದೂ ಅನ್ವಯವಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...