ವಿಷಯಕ್ಕೆ ಹೋಗಿ

ಬೆಲ್ಟ್ ರೋಡ್ ಯೋಜನೆ ಚೀನಾಕ್ಕೆ ಮುಖಭಂಗ

ಚೀನಾದ ಮಹತ್ವಾಕಾಂಕ್ಷೆಯ ಬೆಲ್ಟ್ ರೋಡ್
ಇನಿಷಿಯೇಟಿವ್ (ಬಿಆರ್​ಐ) ಯೋಜನೆಯಿಂದ ಆಗ್ನೇಯ ಏಷ್ಯಾದ ರಾಷ್ಟ್ರ ಮಲೇಷ್ಯಾ
ದೂರಸರಿದಿದ್ದು, ಚೀನಾಕ್ಕೆ ಮುಖಭಂಗ ಉಂಟಾಗಿದೆ. ಮಲೇಷ್ಯಾದ ಈ ನಡೆ ಬಿಆರ್​ಐಯನ್ನು
ವಿರೋಧಿಸುತ್ತಿರುವ ದಕ್ಷಿಣ ಏಷ್ಯಾದ ದೊಡ್ಡ ರಾಷ್ಟ್ರ ಭಾರತ ಮತ್ತು ಹಿಮಾಲಯದ ತಪ್ಪಲಿನ
ಪುಟ್ಟ ದೇಶ ಭೂತಾನ್​ಗೆ ಬೆಂಬಲ ನೀಡಿದೆ. ದಕ್ಷಿಣ ಚೀನಾ ಸಮುದ್ರ ವಲಯದಲ್ಲಿ ಪ್ರಬಲವಾಗಿರುವ
ಚೀನಾವನ್ನು ಎದುರು ಹಾಕಿಕೊಂಡರೆ ಕಷ್ಟ ಎಂಬುದನ್ನು ಅರಿತಿರುವ ಮಲೇಷ್ಯಾ, ಚೀನಾದ
ಕಪಿಮುಷ್ಟಿಯಿಂದ ಅತ್ಯಂತ ಉಪಾಯವಾಗಿ ಹೊರಬರುವ ರಾಜತಾಂತ್ರಿಕ ನಡೆ ಅನುಸರಿಸಿದೆ. ಚೀನಾದ
ಜತೆಗಿನ ದ್ವೀಪಕ್ಷೀಯ ಒಪ್ಪಂದವನ್ನು ಉತ್ತಮ ರೀತಿಯಲ್ಲಿ ಮುಂದುವರಿಸಲಾಗುವುದು. ಆದರೆ,
ಬಿಆರ್​ಐಗೆ ಒಳಪಡುವುದಿಲ್ಲ ಎಂದು ಮಲೇಷ್ಯಾ ಸರ್ಕಾರ ಹೇಳಿದೆ. ಈ ಮೂಲಕ ಸಾಲದ ಸುಳಿಯಿಂದ
ಮಲೇಷ್ಯಾ ತಪ್ಪಿಸಿಕೊಂಡಂತಾಗಿದೆ.

ಸಾಲದಿಂದ ತಪ್ಪಿಸಿಕೊಳ್ಳಲು ಮಲೇಷ್ಯಾ ಜಾಣ ನಡೆ

ಬಿಆರ್​ಐ ಯೋಜನೆಗೆ ಚೀನಾ ಅಪಾರ ಪ್ರಮಾಣದಲ್ಲಿ ಸಾಲ ನೀಡುತ್ತದೆ. ಇದನ್ನು ತೀರಿಸುವ ಬಗೆ
ಹೇಗೆ ಎಂಬುದನ್ನು ಚಿಂತಿಸಿ.

|ಡಾ.ಮಹತಿರ್ ಮೊಹಮದ್, ಮಲೇಷ್ಯಾ ಅಧ್ಯಕ್ಷ



ಐರೋಪ್ಯ ರಾಷ್ಟ್ರಗಳ ವಿರೋಧ

ಜಾಗತಿಕವಾಗಿ ಆರ್ಥಿಕ ಆಧಿಪತ್ಯ ಸ್ಥಾಪಿಸಬೇಕು ಎಂಬ ಹವಣಿಕೆಯಿಂದ ರೂಪಿಸಲಾಗಿರುವ ಚೀನಾದ ಈ
ಯೋಜನೆಯನ್ನು ಏಷ್ಯಾ- ಪೆಸಿಫಿಕ್ ವಲಯದ ಹಲವು ರಾಷ್ಟ್ರಗಳು ಮಾತ್ರವಲ್ಲದೆ, ಯುರೋಪ್​ನ
ಅನೇಕ ದೇಶಗಳೂ ವಿರೋಧಿಸಿವೆ. ಇದು ಇಡಿ ಯುರೋಪನ್ನೆ ಕಬಳಿಸುವ ಹುನ್ನಾರ. ಇದರಿಂದ
ಚೀನಾಕ್ಕೆ ಲಾಭ ಹೆಚ್ಚು. ಯೋಜನೆಯಿಂದ ಐರೋಪ್ಯ ಒಕ್ಕೂಟದಲ್ಲಿ ಒಡಕು ಮೂಡುವುದು ನಿಶ್ಚಿತ
ಎಂದು ಜರ್ಮನಿ, ಇಟಲಿ, ಫ್ರಾನ್ಸ್​ಗಳು ಅಭಿಪ್ರಾಯ ವ್ಯಕ್ತಪಡಿಸಿವೆ. ಚೀನಾ ಈ ಯೋಜನೆಯ ಮೂಲಕ
ಯುರೋಪ್ ಪೂರ್ವ ವಲಯದ ದೇಶಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಬಯಸಿತ್ತು.
ಆದರೆ, ವಿರೋಧ ವ್ಯಕ್ತವಾದ ಕಾರಣ ಮೂಲತಃ ಒಂದು ವಲಯ ಒಂದು ರಸ್ತೆ (ಒಬಿಒಆರ್) ಎಂದಿದ್ದ
ಯೋಜನೆಯನ್ನು ಬೆಲ್ಟ್ ರೋಡ್ ಇನಿಷಿಯೇಟಿವ್ ಎಂದು ಬದಲಾಯಿಸಿತು. ಚೀನಾದ ಹಂಗು ಬೇಡ

ಬಿಆರ್​ಐ ಯೋಜನೆಗೆ ಸೈ ಎಂದಿರುವ ಪಾಕಿಸ್ತಾನ, ಲಾವೋಸ್, ಶ್ರೀಲಂಕಾ, ಬಾಂಗ್ಲಾದೇಶ,
ಕಾಂಬೋಡಿಯಾ, ಫಿಲಿಪ್ಪೀನ್ಸ್ ಮತ್ತು ಇಂಡೋನೇಷ್ಯಾಗಳಲ್ಲಿ ಚೀನಾ ದೊಡ್ಡ ಮಟ್ಟದಲ್ಲಿ
ಹೂಡಿಕೆ ಮಾಡುತ್ತಿದೆ. ಇದರಿಂದ ಈ ರಾಷ್ಟ್ರಗಳು ಸಾಲದ ಹಂಗಿಗೆ ಸಿಲುಕಿ ಭವಿಷ್ಯದಲ್ಲಿ ಚೀನಾದ
ಮುಂದೆ ನಡುಬಗ್ಗಿಸಬೇಕಾದ ದೈನೇಸಿ ಸ್ಥಿತಿಗೆ ಬರುವ ಸಾಧ್ಯತೆ ಹೆಚ್ಚಿದೆ. ದೇಶದ ಘನತೆಯನ್ನು
ಒತ್ತೆಯಿರಿಸುವ ಇಂತಹ ಪಾಡು ತನಗೆ ಬರಬಾರದು ಎಂದು ಮಲೇಷ್ಯಾ ಈ ನಿರ್ಧಾರ ಕೈಗೊಂಡಿದೆ.
‘ಕೆಲವು ದೇಶಗಳು ಯೋಜನೆಯ ಉದ್ದೇಶವನ್ನು ಮತ್ತು ಚೀನಾದ ನಯವಾದ ಮಾತನ್ನು ನಂಬಿ
ಬಿಆರ್​ಐಯನ್ನು ಒಪ್ಪಿಕೊಂಡಿವೆ. ಆದರೆ, ಯೋಜನೆಗೆ ಚೀನಾ ಹೂಡುತ್ತಿರುವ ಹಣವನ್ನು ಬಡ್ಡಿ
ಸಹಿತ ಹಿಂದಿರುಗಿಸಬೇಕು ಎಂಬುದನ್ನು ಈ ರಾಷ್ಟ್ರಗಳು ಗಂಭೀರವಾಗಿ ಪರಿಗಣಿಸಿಲ್ಲ. ಈ
ನಿರ್ಲಕ್ಷ್ಯ ಎಂತಹ ವಿಷವರ್ತಲದಲ್ಲಿ ಸಿಲುಕಿಸುತ್ತದೆ ಎಂಬುದು ಈ ದೇಶಗಳ ಆಡಳಿತಗಾರರಿಗೆ
ಮನವರಿಕೆ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾವು ಮಾತ್ರ ದೇಶದ ಗೌರವ- ಘನತೆಗೆ
ಮಾರಕವಾಗುವ ಹೆಜ್ಜೆಯನ್ನು ಇರಿಸುವುದಿಲ್ಲ ಎಂದು ಮಲೇಷ್ಯಾದ ಅಧ್ಯಕ್ಷ, 92 ವರ್ಷದ
ಡಾ.ಮಹತಿರ್ ಮೊಹಮದ್ ಹೇಳಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...