ಬೆಂಗಳೂರು: ಹೃದಯ, ಕಿಡ್ನಿ ಹಾಗೂ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಪ್ರಸಿದ್ಧ ಕವಿ, ಲೇಖಕ ಸುಮತೀಂದ್ರ ನಾಡಿಗ ಅವರು ಇಂದು ಬೆಳಗ್ಗೆ 6.30ಕ್ಕೆ ನಿಧನರಾಗಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ನಾಡಿಗ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಕನಕಪುರ ರಸ್ತೆಯ ಸಾರಕ್ಕಿ ಮಾಯಾ ಸಭಾಂಗಣ ಸಮೀಪ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷರಾಗಿದ್ದ ಇವರಿಗೆ ಪತ್ನಿ ಮಾಲತಿ, ಪುತ್ರಿಯರಾದ ಸ್ವಪ್ನ ಮತ್ತು ರಶ್ಮಿ ಹಾಗೂ ಮಗ ಅಪೂರ್ವ ಇದ್ದರು.
ಡಾ.ಸುಮತೀಂದ್ರ ನಾಡಿಗರು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 1935ರ ಮೇ 4ರಂದು ಜನಿಸಿದ್ದರು. ಇವರ ದಾಂಪತ್ಯ ಗೀತ, ಪಂಚಭೂತಗಳು, ಜಡ ಮತ್ತು ಚೇತನ, ಕಪ್ಪು ದೇವತೆ ಮುಂತಾದ ಕವನ ಸಂಕಲನಗಳು ಪ್ರಶಸ್ತಿ ಪಡೆದಿವೆ. (ದಿಗ್ವಿಜಯ ನ್ಯೂಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ