ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಇಹಲೋಕ ಯಾತ್ರೆ ಮುಗಿಸಿದ ಅಜಾತಶತ್ರು, ಅಟಲ್​ ಬಿಹಾರಿ ವಾಜಪೇಯಿ

ದೇಶ ಕಂಡ ಅಪರೂಪದ ರಾಜಕಾರಣಿ, ಅಜಾತ ಶತೃ, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದ  ಇಂದು (ಆ.16) ಮೃತಪಟ್ಟಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​ ಅವರು ವಾಜಪೇಯಿ ನಿಧನದ ಬಗ್ಗೆ ಏಮ್ಸ್‌ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
93 ವರ್ಷದ ವಾಜಪೇಯಿ ಅವರು 2009ರಲ್ಲಿ ಪಾರ್ಶ್ವವಾಯುಗೆ ತುತ್ತಾದ ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿರ್ವಹಿಸುತ್ತಿತ್ತು. ಇದರಿಂದಾಗಿ ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು ಕಳೆದ ಎರಡು ತಿಂಗಳಿನಿಂದ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೇ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದರು. ಇಂದು ಹಿರಿಯ ಮುಖಂಡ ಎಲ್​.ಕೆ.ಅಡ್ವಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿರಿಯ ನಾಯಕರಾಗಿದ್ದ ವಾಜಪೇಯಿ, ಬದುಕಿದ್ದಷ್ಟೂ ದಿನ ತಮ್ಮ ಸಿದ್ಧಾಂತಗಳಿಗೆ ಬದ್ಧವಾಗಿದ್ದರು. ಅಧಿಕಾರ, ಹಣಕ್ಕಾಗಿ ಆಸೆ ಪಡಲಿಲ್ಲ. ಭ್ರಷ್ಟಾಚಾರವೆಂಬುದನ್ನು ಹತ್ತಿರವೂ ಬಿಟ್ಟುಕೊಳ್ಳಲಿಲ್ಲ. ಅನಾರೋಗ್ಯದಿಂದ ಹೈರಾಣಿಗದ್ದ ಅವರು, ಈಗ ಅಸುನೀಗಿದ್ದರೂ ಜನಮಾನಸದಲ್ಲಿ ಭದ್ರ ಸ್ಥಾನ ಪಡೆದಿದ್ದಾರೆ.
ಮಾದರಿ ಸಂಸತ್​ ಪಟುವಾಗಿದ್ದ ಅವರು ಉತ್ತಮ ವಾಗ್ಮಿಯೂ ಕೂಡ. ಇಡೀ ದೇಶದುದ್ದಗಲಕ್ಕೂ ಸಂಚರಿಸಿ ಹಿಂದು ಸಿದ್ಧಾಂತದಡಿ ಬಿಜೆಪಿಯನ್ನು ಸಂಘಟಿಸಿ ಕೇಂದ್ರ ಹಾಗೂ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ನೆರವಾಗಿದ್ದರು.
ಜನನ, ಬಾಲ್ಯ, ವಿದ್ಯಾಭ್ಯಾಸ
ಅಟಲ್ ಜೀ ಅವರು 1924ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಎನ್ನುವ ಗ್ರಾಮದಲ್ಲಿ ಜನಿಸಿದರು. ತಂದೆ ಒಬ್ಬ ಕವಿ ಮತ್ತು ಸಾಮಾನ್ಯ ಶಾಲೆಯ ಉಪಾಧ್ಯಾಯರಾಗಿದ್ದರು.
ಪ್ರಾಥಮಿಕ ಶಿಕ್ಷಣವನ್ನು ಗ್ವಾಲಿಯರ್​ನ ಸರಸ್ವತಿ ಶಿಶು ಮಂದಿರದಲ್ಲಿ ಪಡೆದ ಅಟಲ್​ ಜೀ ಅವರು ಪದವಿಯನ್ನು ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ.ಎ.ವಿ ಕಾಲೇಜಿನಿಂದ ಪಡೆದರು.
ಸ್ವಾತಂತ್ರ್ಯ ಸೇನಾನಿ
ವಾಜಪೇಯಿ ಬ್ರಿಟಿಷರ ವಿರುದ್ಧ ಭಾರತೀಯರು ನಡೆಸುತ್ತಿದ್ದ ಹೋರಾಟ ಸಂದರ್ಭದಲ್ಲಿ ಅಟಲ್ ಕೂಡ ಸಂಗ್ರಾಮಕ್ಕೆ ಧುಮುಕಿದರು. 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಪಾಲ್ಗೊಂಡರು. ಅಲ್ಲಿಂದ ಆರಂಭವಾಯಿತು ಅಟಲ್ ರಾಜಕೀಯ ಜೀವನ. 1951ರಲ್ಲಿ ಭಾರತೀಯ ಜನಸಂಘ ಸ್ಥಾಪನೆಯಾದ ನಂತರ ಅಟಲ್ ಬಿಹಾರಿ ವಾಜಪೇಯಿ ಅದರೊಂದಿಗೆ ಗುರುತಿಸಿಕೊಂಡರು. ಹಿಂದುತ್ವ ಜಾಗೃತಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಟನೆಯಾದ ಜನಸಂಘದಲ್ಲಿ ವಾಜಪೇಯಿ ಅತ್ಯುನ್ನತ ಜವಾಬ್ದಾರಿಯನ್ನು ವಹಿಸಿಕೊಂಡರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...