ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: #ಇತಿಹಾಸದಲ್ಲಿ_ಬರುವ_ಪ್ರಮುಖ_ಶಾಸನಗಳು_ಮತ್ತು_ಅದರ_ರಚನಕಾರರು

1.ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ – ಹರಿಷೇಣ
2. ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ – ಅಲಹಾ ಬಾದ್ ಸ್ತಂಭ ಶಾಸನ
3. ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ – ಕೌಸಂಬಿ
4. ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ – ಫೀರೋಜ್ ಷಾ ತುಘಲಕ್
5. ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ –ಮೆಹ್ರೋಲಿ ಕಬ್ಬಿಣದ ಸ್ತಂಭ ಶಾಸನ
6. ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು – ಮಿರತ್ ಶಾಸನ ಹಾಗೂ ತೋಪ್ರ ಶಾಸನ
7. ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ – ಕಂದಾಹಾರ್
8. ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ – ರುದ್ರದಾಮನ್
9. ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು – ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು
10. ತೆಲುಗಿನ ಪ್ರಥಮ ಶಾಸನ –ಕಲಿಮಲ್ಲ ಶಾಸನ
11. ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸನ
12. ಶಾಸನಗಳ ಪಿತಾಮಹಾ ಶಾಸನಗಳ ರಾಜ. ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ – ಅಶೋಕ
13. ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ – ಬ್ರಾಹ್ಮಿ ಹಾಗೂ ಖರೋಷ್ಠಿ
14. ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ –
ಕಳಿಂಗ ಶಾಸನ
15. ಅಶೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು –1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್
16. ಅಶೋಕನನ್ನು ದೇವನಾಂಪ್ರಿಯ ಅಥವಾ ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ –
ಮಸ್ಕಿ ಶಾಸನ
17. ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ –ರಾಯಚೂರು
18. ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ – ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ
19. ನಿಟ್ಟೂರಿನ ಶಾಸನದ ರಚನಾಕಾರ – ಉಪಗುಪ್ತ
20. ನಿಟ್ಟೂರಿನ ಶಾಸನದ ಲಿಪಿಕಾರ –ಚಡಪ
21. ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ – 1950ರಲ್ಲಿ
22. ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ – ದೇವನಾಗರಿ
23. ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ – ಭಾಬ್ರುಶಾಸನ
24. ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ – ಶಕರ ಪ್ರಸಿದ್ದ ಅರಸ ರುದ್ರಧಮನ
25. ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ – ಸಂಜಾನ್ ದತ್ತಿ ಶಾಸನ
26. ದಂತಿದುರ್ಗ – ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
27. ಒಂದನೇ ಕೃಷ್ಣ – ಭಾಂಡ್ಕ ಮತ್ತು ತಾಳೇಗಾಂ ಶಾಸನ
28. ಅಮೋಘವರ್ಷ – ಸಂಜಾನ್ ತಾಮ್ರ ಶಾಸನ
29. ಬಾದಾಮಿ ಶಾಸನದ ಕರ್ತೃ –
1 ನೇ ಪುಲಿಕೇಶಿ
30.. ಮಹಾಕೂಟ ಸ್ತಂಭ ಶಾಸನದ ಕರ್ತೃ – ಮಂಗಳೇಶ
31. ಮಹಾಕೂಟ ಸ್ತಂಭ ಶಾಸನ – ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
32. ರವೀ ಕೀರ್ತಿ ಬರೆದಿರುವ ಶಾಸನ – ಐಹೊಳೆ ಶಾಸನ
33. ಐಹೊಳೆ ಶಾಸನ – ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ
( ಇಮ್ಮಡಿ ಪುಲಿಕೇಶಿ ಕಾಲದ್ದು)
34. ಚಂದ್ರವಳ್ಳಿ ಶಾಸನದ ಕರ್ತೃ – ಮಯೂರವರ್ಮ (ಚಿತ್ರದುರ್ಗ)
35. ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ –
ಚಂದ್ರವಳ್ಳಿ ಶಾಸನ.
36. ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ – ಚಂದ್ರವಳ್ಳಿ ಶಾಸನ
37.. ಕನ್ನಡದ ಮೊಟ್ಟ ಮೊದಲ ಶಾಸನ – ಹಲ್ಮಿಡಿ ಶಾಸನ.
38. ಹಲ್ಮಿಡಿ ಶಾಸನ ಇಲ್ಲಿ ಇರುವುದು – ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ
39. ಹಲ್ಮಿಡಿ ಶಾಸನದ ಕರ್ತೃ – ಕಾಕುಸ್ಥವರ್ಮ
40. ತಾಳಗುಂದ ಶಾಸನದ ಕರ್ತೃ –
ಕವಿ ಕುಬ್ಜ
41. ತಾಳಗುಂದ ಶಾಸನವನ್ನು ಬರೆಯಿಸಿದವರು – ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)
42. . ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ – 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ .”

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...