ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕಸ್ತೂರಿ ರಂಗನ್ ವರದಿಗೂ ವಿರೋಧ ಮುಂದೇನು?

ಕೆ. ರಾಘವ ಶರ್ಮಾ ನವದೆಹಲಿ
 ಕೇರಳ ಮತ್ತು ಕರ್ನಾಟಕದ ಕೊಡಗಿನ ಭೀಕರ ಪ್ರವಾಹ, ಭೂಕುಸಿತಗಳಿಗೆ ಕಾರಣಗಳೇನಿರಬಹುದು ಎಂಬ ಬಗ್ಗೆ ಚರ್ಚೆಯಾಗುತ್ತಿರುವ ಮಧ್ಯೆಯೇ 2011ರಲ್ಲಿ ಡಾ. ಮಾಧವ ಗಾಡ್ಗೀಳ್ ಸಮಿತಿ ಪಶ್ಚಿಮ ಘಟ್ಟಗಳ ರಕ್ಷಣೆಗೆಂದು ಸಲ್ಲಿಸಿದ್ದ ವರದಿಯ ಅನುಷ್ಠಾನಕ್ಕೆ ಒತ್ತಾಯ ಕೇಳಿಬರುತ್ತಿದೆ. ಆದರೆ, ಗಾಡ್ಗೀಳ್ ವರದಿ ಬದಲು, ಕೇಂದ್ರ ಸರ್ಕಾರ ವಿಜ್ಞಾನಿ, ಪರಿಸರ ತಜ್ಞ ಡಾ. ಕಸ್ತೂರಿ ರಂಗನ್ ಸಮಿತಿ ರಚಿಸಿ ಹೊಸ, ಪ್ರತ್ಯೇಕ ವರದಿ ತರಿಸಿಕೊಂಡಿದ್ದರಿಂದ ಗಾಡ್ಗೀಳ್ ವರದಿ ಇತಿಹಾಸದ ಪುಟ ಸೇರಿದೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಪಶ್ಚಿಮಘಟ್ಟ ವ್ಯಾಪ್ತಿಗೆ ಒಳಪಡುವ ರಾಜ್ಯಗಳು ಆಕ್ಷೇಪಣೆ ಸಲ್ಲಿಸಲು ಈ ತಿಂಗಳ 25 ಕೊನೆಯ ದಿನವಾಗಿತ್ತು. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿರುವ ರಾಜ್ಯಗಳು ಡಾ. ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಕೂಡ ಈಗ ತಿರಸ್ಕರಿಸಿರುವುದರಿಂದ ಇಲ್ಲಿನ ವೈವಿಧ್ಯಮಯ ಪರಿಸರದ ಸಂರಕ್ಷಣೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯ ಮತ್ತಷ್ಟು ಕರಾಳವಾದೀತು.
# ಪಶ್ಚಿಮ ಘಟ್ಟಗಳ ರಕ್ಷಣೆ ಕುರಿತ ಡಾ. ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಕರ್ನಾಟಕ ವಿರೋಧಿಸಿದೆ. ಮುಂದೇನು?
– ಕಸ್ತೂರಿ ರಂಗನ್ ವರದಿಯ ಪೂರ್ಣ ಪ್ರಮಾಣದ ಅನುಷ್ಠಾನವನ್ನು ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳು ವಿರೋಧಿಸಿವೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ವರದಿಯ ಪರಿಷ್ಕೃತ ಅಧಿಸೂಚನೆ ಸಾಧ್ಯವಾಗಿಲ್ಲ. 3 ದಿನಗಳ ಹಿಂದೆ ಕರ್ನಾಟಕ ಕೂಡ ತನ್ನ ಆಕ್ಷೇಪಣೆ ಸಲ್ಲಿಸಿದ್ದು, ಕೇಂದ್ರ ಇಕ್ಕಟ್ಟಿನಲ್ಲಿ ಸಿಲುಕಿದೆ. ಇದರಿಂದ ಸೂಕ್ಷ್ಮ ಪರಿಸರ, ಸಾವಿರಾರು ಜೀವ ವೈವಿಧ್ಯ, ಪ್ರಬೇಧಗಳನ್ನು ಹೊಂದಿರುವ ಪಶ್ಚಿಮ ಘಟ್ಟಗಳ ರಕ್ಷಣೆ ಹೇಗೆ ಎಂಬ ಗೊಂದಲ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರಗಳು ಸಲ್ಲಿಸಿರುವ ಆಕ್ಷೇಪಣೆಗಳಿಂದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಕದ ಬಡಿಯುವುದೆ ಅಥವಾ ರಾಜ್ಯಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದೇ ಎಂಬುದು ಸ್ಪಷ್ಟವಾಗಿಲ್ಲ.
# 2011ರಲ್ಲಿ ಗಾಡ್ಗೀಳ್ ವರದಿಯಲ್ಲಿ ಹೇಳಿದ್ದೇನು?
– ಡಾ. ಗಾಡ್ಗೀಳ್ ಸಮಿತಿ ರಚನೆಗೆ 2010ರಲ್ಲಿ ಆದೇಶಿಸಿದ್ದು ಅಂದಿನ ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್. ಒಂದೂವರೆ ವರ್ಷದಲ್ಲಿ ವರದಿ ಸಿದ್ಧಪಡಿಸಿದ ಸಮಿತಿ, 1,29,037 ಚ.ಕಿ.ಮೀ ಭೂಪ್ರದೇಶ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿದೆ. ಇದನ್ನು ‘ಪರಿಸರ ಸೂಕ್ಷ್ಮ ವಲಯ’ ಎಂದು ಗುರುತಿಸಬೇಕು ಮತ್ತು ಅವುಗಳನ್ನು 3 ವಿಭಾಗಗಳನ್ನಾಗಿ ವಿಂಗಡಿಸಬೇಕೆಂದು ಶಿಫಾರಸು ಮಾಡಿತ್ತು. ಸಮಿತಿಯ ಕೆಲ ಪ್ರಮುಖ ಶಿಫಾರಸುಗಳು ಹೀಗಿವೆ:
ತಳಿ ಮಾರ್ಪಾಡು ಮಾಡಿದ (genetically modified)) ಕೃಷಿಗೆ ಇಲ್ಲಿ ಅವಕಾಶ ನೀಡಕೂಡದು.
ಮೂರು ವರ್ಷದೊಳಗೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು.
ಗಿರಿಧಾಮಗಳಲ್ಲಿ ವಿಶೇಷ ಆರ್ಥಿಕ ವಲಯ ನಿರ್ಮಾಣ ಬೇಡ.
ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯಾಗಿ ಪರಿವರ್ತಿಸುವುದಕ್ಕೆ ನಿಷೇಧ.
ಪರಿಸರ ಸೂಕ್ಷ್ಮ ವಲಯ-1 ಮತ್ತು 2ರಲ್ಲಿ ಅರಣ್ಯ ಪ್ರದೇಶವನ್ನು ಅರಣ್ಯೇತರ ಕೆಲಸಗಳಿಗೆ ಬಳಸುವಂತಿಲ್ಲ, ಗಣಿಗಾರಿಕೆಗೂ ಅವಕಾಶವಿಲ್ಲ, ಪರಿಸರ ಮಲಿನಗೊಳಿಸುವ ಕೈಗಾರಿಕೆ, ಹೊಸ ರೈಲ್ವೆ ಲೈನ್​ಗಳು ಹಾಗೂ ದೊಡ್ಡ ಪ್ರಮಾಣದ ರಸ್ತೆ ನಿರ್ವಣಕ್ಕೂ ಸಮ್ಮತಿ ನೀಡಬಾರದು.
ಪರಿಸರ ಸೂಕ್ಷ್ಮ ವಲಯ-1ರಲ್ಲಿ ಜಲಾಶಯ ನಿರ್ವಣವೂ ಬೇಡ.
ಪರಿಸರ ಸೂಕ್ಷ್ಮ ವಲಯ-1ರಲ್ಲಿ ಥರ್ಮಲ್ ವಿದ್ಯುತ್ ಸ್ಥಾವರಗಳಿಗೆ ಅನುಮತಿ ಬೇಡ.
ಮುಂದಿನ 5-8 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ವಲಯ-1 ಮತ್ತು 2ರಲ್ಲಿ ಎಲ್ಲ ಮಾದರಿಯ ರಾಸಾಯನಿಕ ಕೀಟನಾಶಕಗಳಿಂದ ಪರಿಸರವನ್ನು ಕಾಪಾಡಬೇಕು.
# ರಾಜ್ಯದ ವಿರೋಧವೇಕೆ?
ಕಸ್ತೂರಿ ರಂಗನ್ ವರದಿ ಪ್ರಕಾರ ರಾಜ್ಯದ 10 ಜಿಲ್ಲೆಗಳ 1573 ಗ್ರಾಮಗಳು ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಬರುವುದರಿಂದ ಇಲ್ಲಿ ಅಭಿವೃದ್ಧಿ ಚಟುವಟಿಕೆ (ಮರಳು ಗಣಿಗಾರಿಕೆ, ಕಟ್ಟಡ ನಿರ್ವಣ, ರಸ್ತೆ-ರೈಲ್ವೆ ಸಂಪರ್ಕ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆ) ಕೈಗೊಳ್ಳಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ರಾಜ್ಯ ವರದಿಯ ಅನುಷ್ಠಾನಕ್ಕೆ ಸಮ್ಮತಿಸಿಲ್ಲ.
# ಗಾಡ್ಗೀಳ್ ವರದಿ ಏನಾಯ್ತು?
ಗಾಡ್ಗೀಳ್ ವರದಿಯಲ್ಲಿನ ಅಂಶಗಳು ಬೆಳಕಿಗೆ ಬರುತ್ತಿದ್ದಂತೆ ಸಂಬಂಧಪಟ್ಟ ರಾಜ್ಯಗಳಿಂದ ವಿರೋಧ ವ್ಯಕ್ತವಾದವು. ಹೀಗಾಗಿ, ಅಂದಿನ ಯುಪಿಎ ಸರ್ಕಾರ ವರದಿಯ ಅಧಿಕೃತ ಬಿಡುಗಡೆಯನ್ನೇ ರದ್ದುಪಡಿಸಿತ್ತು! 2012ರಲ್ಲಿ ಅಂದಿನ ಯುಪಿಎ ಸರ್ಕಾರ ಡಾ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿ, ಗಾಡ್ಗೀಳ್ ಸಮಿತಿ ವರದಿಯನ್ನು ಸಮಗ್ರವಾಗಿ ಅವಲೋಕಿಸಿ, ರಾಜ್ಯಗಳ ಪ್ರತಿಕ್ರಿಯೆಗಳನ್ನೂ ಗಣನೆಗೆ ತೆಗೆದುಕೊಂಡು ವರದಿ ನೀಡಬೇಕೆಂದು ನಿರ್ದೇಶಿಸಿದರು. 2013ರಲ್ಲಿ ಡಾ. ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಕೇಂದ್ರಕ್ಕೆ ಹಸ್ತಾಂತರಿಸಿತು. ಒಟ್ಟು 1750 ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದ ಸಮಿತಿ, ಶೇ.81ರಷ್ಟು ಮಂದಿ ಗಾಡ್ಗೀಳ್ ವರದಿಯನ್ನು ವಿರೋಧಿಸಿದ್ದಾರೆ ಎಂದು ದಾಖಲಿಸಿತು.
# ಸರ್ಕಾರ ನೀಡಿರುವ ಸಲಹೆಯೇನು?
ರಾಜ್ಯದ ಪಶ್ಚಿಮ ಘಟ್ಟ ವ್ಯಾಪ್ತಿಯ ಸಾರ್ವಜನಿಕರು, ಜನಪ್ರತಿನಿಧಿಗಳು ಸೇರಿದಂತೆ ಅನೇಕರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇವೆ. ಕಸ್ತೂರಿ ರಂಗನ್ ವರದಿಯ ಅಧಿಸೂಚನೆಗೆ ನಮಗೆ ಆಕ್ಷೇಪಣೆಗಳಿದ್ದು, ಕೇಂದ್ರ ಪರಿಸರ ಇಲಾಖೆ ರಾಜ್ಯದ ಬೇಡಿಕೆಗಳನ್ನು ಪರಿಶೀಲಿಸಲು ಅಧ್ಯಯನ ಸಮಿತಿ ರಚನೆ ಮಾಡಿದರೆ ಪೂರಕ ಸಹಕಾರ ನೀಡಲು ಸಿದ್ಧ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
# ವರದಿಯಲ್ಲಿ ಏನಿದೆ?
– ಕಸ್ತೂರಿ ರಂಗನ್ ಸಮಿತಿಯ ಕೆಲ ಶಿಫಾರಸುಗಳು ಹೀಗಿವೆ
ಗಣಿಗಾರಿಕೆ, ಕಲ್ಲು ಕ್ವಾರಿ ಮತ್ತು ಮರಳು ಗಣಿಗಾರಿಕೆಗೆ ನಿಷೇಧ.
 ಥರ್ಮಲ್ ವಿದ್ಯುತ್ ಯೋಜನೆಗಳಿಗೆ ಅನುಮತಿ ಬೇಡ. ಆದರೆ ಜಲ ವಿದ್ಯುತ್ ಯೋಜನೆಗಳಿಗೆ ಷರತ್ತುಬದ್ಧ ಅನುಮತಿ ನೀಡಬಹುದು.
ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗೆ ಅವಕಾಶ ಬೇಡ.
ಟೌನ್​ಶಿಪ್ ನಿರ್ಮಾಣ ಮಾಡಕೂಡದು. ಆದರೆ 20000 ಚ.ಕಿ.ಮೀ  ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಯೋಜನೆಗಳನ್ನು ನಡೆಸಬಹುದು.
ಎಚ್ಚರಿಕೆಯ ಮತ್ತು ಷರತ್ತುಬದ್ಧ ಕ್ರಮಗಳೊಂದಿಗೆ ಅರಣ್ಯ ಭೂಮಿಯನ್ನು ಅರಣ್ಯೇತರ ಕೆಲಸಗಳಿಗೆ ಬಳಸಬಹುದು.
# ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿತು?
ಕಸ್ತೂರಿ ರಂಗನ್ ವರದಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಳೆದ ವರ್ಷದ ಫೆಬ್ರವರಿಯಲ್ಲಿ 56,285 ಚ.ಕಿ.ಮೀ ಭೂಪ್ರದೇಶವನ್ನು ‘ಪರಿಸರ ಸೂಕ್ಷ್ಮ ವಲಯ’ ಎಂದು ಗುರುತಿಸಿ ಅಧಿಸೂಚನೆ ಜಾರಿ ಮಾಡಿತು. ಕೇರಳದಲ್ಲಿ 13,108 ಚ.ಕಿ.ಮೀ ಭೂಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಕಸ್ತೂರಿ ರಂಗನ್ ಸಮಿತಿ ಹೇಳಿದ್ದಕ್ಕೆ ಕೇರಳ ಆಕ್ಷೇಪ ವ್ಯಕ್ತಪಡಿಸಿತು. ಆದ್ದರಿಂದ ಈ ಪ್ರಮಾಣವನ್ನು 9993 ಚ.ಕಿ.ಮೀ.ಗೆ ಇಳಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....