ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಟಲ್ ಬಿಹಾರಿ ವಾಜಪೇಯಿ (ಅಣ್ವಸ್ತ್ರ ಪರೀಕ್ಷೆ (ಫೋಖ್ರಾನ್ -II)



ಮೇ 1998 ರಲ್ಲಿ ಭಾರತ ತನ್ನ ಸೇನಾ ಬಲವನ್ನು ಎಲ್ಲ ವಿಧದಿಂದಲೂ ಹೆಚ್ಚಿಸಿಕೊಳ್ಳಲು ತೀರ್ಮಾನಿಸಿ ಆಪರೇಷನ್ ಶಕ್ತಿ ಹೆಸರಿನ ಅಣು ಬಾಂಬ್ ಪರೀಕ್ಷೆ ನಡೆಸಿತು. 1974 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಭಾರತವು ಮೊದಲ ಬಾರಿಗೆ ಅಣು ಸ್ಫೋಟವನ್ನು ಪರೀಕ್ಷಾರ್ಥವಾಗಿ ನಡೆಸಿ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿತ್ತು.
• 1999 ರಲ್ಲಿ ವಾಜಪೇಯಿ ಪ್ರಧಾನಿ ಯಾದ ಕೇವಲ ಎರಡೇ ತಿಂಗಳಲ್ಲಿ ರಾಜಸ್ತಾನದ ಫೋಖ್ರಾನ್ ಎಂಬಲ್ಲಿ ಸುಧಾರಿತ ಅಣ್ವಸ್ತ್ರಗಳನ್ನು ಪರೀಕ್ಷಿಸಲು ಉತ್ಸುಕರಾಗಿದ್ದ ವಿಜ್ಞಾನಿಗಳಿಗೆ ವಾಜಪೇಯಿಯವರಿಂದ ಹಸಿರು ನಿಶಾನೆ ದೊರೆಯಿತು. ಆದರೆ ನಿಜವಾಗಿ ಸಾಧಿಸಿ ತೋರಿಸುವುದು ಬಹಳ ಕಷ್ಟಕರವಾಗಿತ್ತು. ದೇಶದ ತುಂಬಾ ಹರಡಿಕೊಂಡಿದ್ದ ಪಾಕಿಸ್ತಾನಿ ಬೇಹುಗಾರಿಕೆ ವ್ಯಕ್ತಿಗಳು ಹಾಗೂ ಅಮೇರಿಕಾ ಗುಪ್ತಚರ ಇಲಾಖೆಯ (ಸಿ ) ಏಜೆಂಟ್ ಗಳು ವಿಷಯ ಸೋರಿಕೆ ಮಾಡುವ ಆತಂಕವಿದ್ದೇ ಇತ್ತು. 1974 ನಂತರದ ದಿನಗಳಲ್ಲಿ ಕೆಲವಾರು ಬಾರಿ ಭಾರತದ ಅಣ್ವಸ್ತ್ರ ಪರೀಕ್ಷೆಗೆ ಅಮೇರಿಕಾ ಗುಪ್ತಚರ ಇಲಾಖೆಯ ಏಜೆಂಟ್ ಗಳು ಸುದ್ದಿ ಸೋರಿಕೆ ಮಾಡಿ ತಣ್ಣೀರೆರಚಿದ್ದರು.
ಬಾರಿ ಪರೀಕ್ಷೆಯನ್ನು ಇವರಾರಿಗೂ ತಿಳಿಯದಂತೆ ನಡೆಸಬೇಕಾಗಿತ್ತು. ಗುಪ್ತಚರ ಇಲಾಖೆಯ ಏಜೆಂಟ್ ಗಳಷ್ಟೇ ಅಲ್ಲದೆ ಅಮೇರಿಕಾ ದೇಶದ ಉಪಗ್ರಹವೊಂದು ಭಾರತದ ಅಂತರಾಷ್ಟ್ರೀಯ ಗಡಿಗಳ ಮೇಲೆ ಹಾಗೂ ಸೂಕ್ಷ್ಮ ಪ್ರದೇಶಗಳ ಮೇಲೆ ಸದಾ ಕಣ್ಗಾವಲಿಟ್ಟಿತ್ತು. ಉಪಗ್ರಹ ಎಷ್ಟು ಕರಾರುವಕ್ಕಾಗಿತ್ತು ಎಂದರೆ ಭಾರತದ ಗಡಿಯಲ್ಲಿ ನಿಂತಿರುವ ಯೋಧನೊಬ್ಬನ ಕೈಗೆ ಕಟ್ಟಿದ ಗಡಿಯಾರದ ಫೋಟೋ ತೆಗೆದು ಅದರಲ್ಲಿ ಸಮಯವೆಷ್ಟು ಎಂದು ಹೇಳಬಹುದಿತ್ತಂತೆ.
ಇಂತಹ ಬಿಗಿಯಾದ ಹದ್ದಿನ ಕಣ್ಣು ಇರಿಸಿರುವ ಸಮಯದಲ್ಲಿ ಅಣು ಬಾಂಬ್ ಪರೀಕ್ಷೆ ನಡೆಸುವುದು ದೊಡ್ಡ ಸಾಹಸವೇ ಆಯಿತು. ಅಣು ಪರೀಕ್ಷೆ ನಡೆಸಬೇಕಾಗಿದ್ದ ಜಾಗದಲ್ಲಿ "ನೀರಾವರಿ ಕಾಮಗಾರಿ ನಡೆಯುತ್ತಿದೆ" ಎಂದು ಬೋರ್ಡು ಹಾಕಲಾಗಿತ್ತಂತೆ. ವಿಜ್ಞಾನಿಗಳಿಗೆ ಹಾಗೂ ಭೂಮಿಯನ್ನು ಅಗೆಯುತ್ತಿದ್ದ ಭಾರತೀಯ ಸೈನಿಕರಿಗೆ ಸಾರ್ವಜನಿಕ ಇಲಾಖೆಯ ಕಾಮಗಾರಿ ಕಾರ್ಮಿಕರಿಗೆ ಕೊಡಲಾಗುವಂತಹ ಮಾದರಿಯ ಬಟ್ಟೆ ಕೊಡಲಾಗಿತ್ತಂತೆ.
ಇನ್ನು ಯಾವ ಕಾರಣಕ್ಕೂ ಯಾರಿಗೂ ಅನುಮಾನ ಬರದಿರುವಂತೆ ನೋಡಿಕೊಳ್ಳಲು ಸ್ಫೋಟಕ್ಕೆ ಸಂಬಂಧಿಸಿದ ಕಾರ್ಯವೆಲ್ಲವೂ ಬರೀ ರಾತ್ರಿ ವೇಳೆ ನಡೆಯುತ್ತಿತ್ತಂತೆ. ಅಣು ಬಾಂಬ್ ಸ್ಫೋಟವಾದ ವಿಷಯ ತಿಳಿದಿದ್ದು ಖುದ್ದು ವಾಜಪೇಯಿಯವರು ಪ್ರಧಾನಮಂತ್ರಿ ಗೃಹದಲ್ಲಿ ಪತ್ರಕರ್ತರ ಸಭೆ ಕರೆದು ಫೋಖ್ರಾನ್ ಬಾಂಬ್ ಸ್ಫೋಟದ ಬಗ್ಗೆ ಅಧೀಕೃತವಾಗಿ ಧೃಡಪಡಿಸಿದಾಗಲೇ.
ಫೋಖ್ರಾನ್ ಸಮೀಪದಲ್ಲಿದ್ದ ಹಳ್ಳಿಯೊಂದರ ಜನಗಳನ್ನು ಬಾಂಬ್ ಸ್ಫೋಟಕ್ಕೂ ಕೆಲವು ಗಂಟೆಗಳ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿತ್ತಂತೆ. ಆದರೆ ಸ್ಥಳಾಂತರಗೊಂಡ ಜನರಿಗೂ ಕಾರಣವೇನು ಎನ್ನುವುದು ತಿಳಿದಿರಲಿಲ್ಲವಂತೆ. ಸ್ಫೋಟಾನಂತರ ರಷ್ಯಾ ಹಾಗೂ ಫ್ರಾನ್ಸ್ ದೇಶಗಳು ಭಾರತದ ಸೇನೆಯು ಸೇನಾ ಬಲ ಹೆಚ್ಚಿಸಿಕೊಳ್ಳುವ ಸಲುವಾಗಿ ಅಣ್ವಸ್ತ್ರ ಹೊಂದುವ ಹಾಗೂ ಅದರ ಶಕ್ತಿಯನ್ನು ಖಾತ್ರಿ ಪಡಿಸಿಕೊಂಡ ನಿಲುವನ್ನು ಸಮರ್ಥಿಸಿಕೊಂಡರೆ, ಅಮೇರಿಕಾ, ಕೆನಡಾ, ಜಪಾನ್, ಬ್ರಿಟನ್ ಹಾಗೂ ಯೂರೋಪ್ ಒಕ್ಕೂಟದ ದೇಶಗಳು ಭಾರತದ ನಿಲುವಿಗೆ ಹರಿಹಾಯ್ದವು.
ಭಾರತದೊಂದಿಗೆ ಇನ್ನು ಮುಂದೆ ನವೀನ ತಂತ್ರಜ್ಞಾನದ ಮಾಹಿತಿಗಳನ್ನು ಹಾಗೂ ಯಾವುದೇ ರೀತಿಯ ಸಂಪನ್ಮೂಲಗಳನ್ನು ಹಂಚಿ ಕೊಳ್ಳದಂತೆ ತಮ್ಮ ತಮ್ಮಲ್ಲೇ ಒಪ್ಪಂದ ಮಾಡಿಕೊಂಡವು. ಭಾರತದ ಅಣ್ವಸ್ತ್ರ ಪರೀಕ್ಷೆಯ ವಿಷಯ ಅಂತರಾಷ್ಟ್ರೀಯ ವೇದಿಕೆಯಲ್ಲಿ ಬಾರೀ ಚರ್ಚೆಗೆ ಗ್ರಾಸವಾಯಿತು. ಹಲವಾರು ದೇಶಗಳು ಭಾರತದಲ್ಲಿ ಹೂಡಿದ ಬಂಡವಾಳವನ್ನು ಹಿಂತೆಗೆದುಕೊಳ್ಳುವ ನಿರ್ಧಾರ ಮಾಡಿದವು.
ಮತ್ತೆ ಕೆಲವು ರಾಷ್ಟ್ರಗಳು ಭಾರತಕ್ಕೆ ಯಾವ ಸಹಾಯಧನವನ್ನು ಕೊಡದಂತೆ ವಿಶ್ವಸಂಸ್ಥೆಯಲ್ಲಿ ದೂರಿ ಭಾರತದ ಮೇಲೆ ಆರ್ಥಿಕ ನಿರ್ಬಂಧ ಹೇರಿಸಿದರು. ವಾಜಪೇಯಿ ನೇತೃತ್ವದಲ್ಲಿ ಇಂತಹ ಕ್ಲಿಷ್ಟ ಪರಿಸ್ತಿತಿಯನ್ನು ಬಗೆಹರಿಸಿಕೊಳ್ಳಲಾಯಿತು. ವಾಜಪೇಯಿ ಮೇಲೆ ಜನರಿಗಿದ್ದ ನಂಬಿಕೆ ಇಮ್ಮಡಿಯಾಗಲು ಇದೂ ಒಂದು ಕಾರಣವಾಯಿತು.
ಆರ್ಥಿಕ ಸಂಕಷ್ಟಗಳಲ್ಲಿಯೂ ಯಶಸ್ವಿಯಾಗಿ ದೇಶ ಮುನ್ನಡೆಸಿದ್ದನ್ನು ಅಂತರಾಷ್ಟ್ರೀಯ ನಾಯಕರೂ ಕೊಂಡಾಡಿದರು, ಒಟ್ಟಿನಲ್ಲಿ ವಾಜಪೇಯಿಯವರ ರಾಜಕೀಯ ಚತುರತೆಯನ್ನು, ಇಚ್ಚಾ ಶಕ್ತಿಯನ್ನು, ಆಡಳಿತ ವೈಖರಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲು ಫೋಖ್ರಾನ್ ಸ್ಫೋಟವೂ ಮುಖ್ಯ ಪಾತ್ರ ವಹಿಸಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...