ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ತಾರತಮ್ಯವಿಲ್ಲದ ಎಚ್​1ಬಿ ವೀಸಾ ನೀತಿ ನಿರೀಕ್ಷೆ

ಸುಷ್ಮಾ ಸ್ವರಾಜ್​, ನವದೆಹಲಿ: ಗುರುವಾರ ಭಾರತ ಮತ್ತು ಅಮೆರಿಕ ನಡುವೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ 2+2 ಮಾತುಕತೆಯಲ್ಲಿ ಉಭಯ ರಾಷ್ಟ್ರಗಳು ದ್ವಿಪಕ್ಷಿಯ ಸಂಬಂಧವನ್ನು ವೃದ್ಧಿಸುವಲ್ಲಿ ಉತ್ತಮ ಹೆಜ್ಜೆಗಳನ್ನು ಇಟ್ಟಿವೆ.
ವಿವಿಧ ವಲಯಗಳಲ್ಲಿ ಉಭಯ ರಾಷ್ಟ್ರಗಳು ಜಂಟಿಯಾಗಿ ಕಾರ್ಯನಿರ್ವಹಿಸಲು ಒಪ್ಪಿಗೆ ನೀಡಿವೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರು ತಿಳಿಸಿದ್ದಾರೆ. ಅಲ್ಲದೆ, ಭಾರತವು H1B ವೀಸಾ ನೀತಿಯಲ್ಲಿ ಅಮೆರಿಕಾದಿಂದ ತಾರತಮ್ಯವಿಲ್ಲದ ಮತ್ತು ಊಹಿಸಬಹುದಾದ ನಿಲುವನ್ನು ನಿರೀಕ್ಷಿಸುತ್ತದೆ ಎಂದು ಹೇಳಿದರು.
ಜನರು ನಡುವಿನ ಕೊಂಡಿಯನ್ನು ಪೋಷಿಸುವ ಸಲುವಾಗಿ ಸುಷ್ಮಾ ಅವರು ಅಮೆರಿಕ ವಿದೇಶಾಂಗ ವ್ಯವಹಾರಗಳ ಮುಖ್ಯ ಸಲಹೆಗಾರ ಮೈಕ್ ಪೊಂಪಿಯೊ ಅವರ ಬೆಂಬಲವನ್ನು ಕೋರಿದ್ದು, ವೀಸಾ ನೀತಿಯಲ್ಲಿ ತಾರತಮ್ಯವಲ್ಲದ ವಿಧಾನವನ್ನು ನಿರೀಕ್ಷಿಸುತ್ತಿದ್ದೇವೆ. ಇದು ಆವಿಷ್ಕಾರ, ಸ್ಪರ್ಧಾತ್ಮಕತೆ ಮತ್ತು ಜನರ ನಡುವಿನ ಪಾಲುದಾರಿಕೆ ಮೇಲೆ ಪ್ರಭಾವ ಬೀರಲಿದೆ. ಈ ಎಲ್ಲ ಮೂಲಗಳು ನಮ್ಮ ಸಂಬಂಧದ ಶಕ್ತಿ ಕೇಂದ್ರಗಳಾಗಿವೆ ಎಂದು ಸುಷ್ಮಾ ಅವರು ಅಭಿಪ್ರಾಯಪಟ್ಟರು.
ಹೊಸ ಹಾಟ್​ಲೈನ್​ ಮೂಲಕ ನಿರಂತರ ಸಂಪರ್ಕದಲ್ಲಿರಲು ಉಭಯ ದೇಶಗಳ ನಾಯಕರು ನಿರ್ಧರಿಸಿರುವುದಾಗಿ ತಿಳಿಸಿದ ಅವರು, ಶೀಘ್ರದಲ್ಲೇ ಹಾಟ್​ಲೈನ್​ ಸ್ಥಾಪಿಸುವ ಬಗ್ಗೆ ಹೇಳಿದರು.
ಆದ್ಯತೆಗಳಿಗೆ ಅನುಗುಣವಾಗಿ ಸರ್ಕಾರದ ವಿಧಾನವನ್ನು ಉತ್ತೇಜಿಸಲು ಉಭಯ ರಾಷ್ಟ್ರಗಳ ಶ್ರಮವನ್ನು ಹಂಚಿಕೊಳ್ಳಲು ಈ ಸಭೆ ಸಹಕಾರಿಯಾಯಿತು. ಸ್ಟ್ರಾಟೆಜಿಕ್ ಟ್ರೇಡ್ ಅಥಾರಿಟೈಜೇಶನ್ ಟೈರ್ -1 (SAT -1) ಪರವಾನಗಿ ವಿನಾಯಿತಿಗಾಗಿ ಅರ್ಹ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವನ್ನು ಸೇರಿಸಲು ಅಮೆರಿಕ ಇತ್ತೀಚೆಗೆ ನಿರ್ಧರಿಸಿದ್ದು, ಇದು ಭಾರತದ ದೃಢ ಮತ್ತು ಜವಾಬ್ದಾರಿಯುತ ರಫ್ತು ನಿಯಂತ್ರಣ ನೀತಿಗಳನ್ನು ಪ್ರತಿಬಿಂಬಿಸುತ್ತದೆ. ನಾವು ಪರಮಾಣು ಸರಬರಾಜುದಾರರ ಸಮೂಹದಲ್ಲಿ ಸದಸ್ಯತ್ವವನ್ನು ಶೀಘ್ರವಾಗಿ ಪಡೆದುಕೊಳ್ಳಲು ಒಟ್ಟಿಗೆ ಕೆಲಸ ಮಾಡಲು ಇಂದಿನ ಸಭೆಯಲ್ಲಿ ಒಪ್ಪಿಕೊಂಡೆವು ಎಂದರು.
ವೇಗವಾಗಿ ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧವೂ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶವಾಗಿದೆ. ಈ ಕ್ಷೇತ್ರದ ವೇಗದ ಬೆಳವಣಿಗೆ ಹಾಗೂ ಜನರ ನಡುವಿನ ಸಂಬಂಧ ಕಾರ್ಯತಂತ್ರದ ಪಾಲುದಾರಿಕೆಯ ಶಕ್ತಿಯಾಗಿದೆ ಎಂದು ಹೇಳಿದರು.
ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಸ ಅವಕಾಶಗಳನ್ನು ಹುಟ್ಟುಹಾಕುತ್ತಿದ್ದು, ಹೆಚ್ಚು ಆರ್ಥಿಕ ಒಪ್ಪಂದಗಳಿಗೆ ಆಧಾರವಾಗಿದೆ. ಇದು ಉತ್ಪಾದನೆಯ ಅಭಿವೃದ್ಧಿ, ಜ್ಞಾನ ಉತ್ತೇಜನ ಮತ್ತು ಆವಿಷ್ಕಾರ, ಉದ್ಯೋಗ ಸೃಷ್ಟಿ ಮತ್ತು ಬೆಳವಣಿಗೆಗೆ ನಿರ್ಣಾಯಕ ಸಂಪನ್ಮೂಲಗಳನ್ನು ಒದಗಿಸುವಿಕೆಗೆ ಬೆಂಬಲ ನೀಡುತ್ತದೆ. ಭಾರತದ ಶಕ್ತಿಯ ಪೂರೈಕೆದಾರನಾಗಿ ಅಮೆರಿಕ ಹೊರಹೊಮ್ಮುತ್ತಿದೆ ಎಂದು ಹೇಳಿದರು. (ಏಜೆನ್ಸೀಸ್​)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...