ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಏಕಪ್ರಕಾರ ಇಂಟರ್ನೆಟ್ ವೇಗ ದೊರೆಯುವಂತೆ ಮಾಡಲು ನಾಲ್ಕು ಉಪಗ್ರಹಗಳ (ಹೈ- ಥ್ರೂಪುಟ್) ಮೇಲೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಭಾರಿ ನಿರೀಕ್ಷೆ ಇರಿಸಿದೆ. ಈಗಾಗಲೇ ಒಂದು ಉಪಗ್ರಹ ಉಡಾವಣೆ ಯಶಸ್ವಿಯಾಗಿದ್ದ ಡಿಸೆಂಬರ್ನಲ್ಲಿ ಬಾಕಿ ಮೂರು ಉಪಗ್ರಹಗಳನ್ನು ನಿಗದಿತ ಕಕ್ಷೆ ಸೇರಲಿದೆ. ಈ ಉಪಗ್ರಹಗಳ ಸಹಾಯದಿಂದ 2019ರ ಅಂತ್ಯದೊಳಗೆ ಭಾರತದಲ್ಲಿ ಇಂಟರ್ನೆಟ್ ಬಳಕೆದಾರರಿಗೆ ಪ್ರತಿ ಸೆಕೆಂಡ್ಗೆ 100 ಗಿಗಾಬಿಟ್ಸ್ ವೇಗವನ್ನು ನೀಡಬಹುದಾಗಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಹೇಳಿದ್ದಾರೆ. ಕಳೆದ ಜೂನ್ನಲ್ಲಿ ಜಿಸ್ಯಾಟ್-19 ಉಡಾವಣೆ ಯಶಸ್ವಿಯಾಗಿದೆ. ನವೆಂಬರ್ನಲ್ಲಿ ಜಿಸ್ಯಾಟ್ -29, ಡಿಸೆಂಬರ್ನಲ್ಲಿ ಜಿಸ್ಯಾಟ್-11, ಜಿಸ್ಯಾಟ್ -20 ಉಡಾವಣೆಗೆ ಇಸ್ರೋ ಸಿದ್ಧತೆ ನಡೆಸಿದೆ. ಇದುವರೆಗೂ ಇಸ್ರೋದಿಂದ ನಿರ್ವಣವಾಗಿರುವ ಉಪಗ್ರಹಗಳ ಪೈಕಿ ಅತೀ ತೂಕದ ಉಪಗ್ರಹ ಎಂಬ ಹೆಗ್ಗಳಿಕೆಯ ಜಿಸ್ಯಾಟ್-11, 14 ಗಿಗಾಬೈಟ್ಸ್ ಡಾಟಾ ರೇಟ್ ಒದಗಿಸಲಿದೆ. 5.7 ಟನ್ ತೂಕದ ಉಪಗ್ರಹವಿದು.
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ