ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸರ್ಜಿಕಲ್ ದಾಳಿಗೆ 2 ವರ್ಷ,

*ಜ*ಮ್ಮು- ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016 ಸೆ.
18ರಂದು ಪಾಕಿಸ್ತಾನ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಪಾಕ್
ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ್ದ ಐತಿಹಾಸಿಕ ಸರ್ಜಿಕಲ್ ದಾಳಿಗೆ ಈಗ
ಎರಡು ವರ್ಷ. ಭಾರತೀಯ ಸೇನೆಯ ಶಕ್ತಿ, ಸಾಮರ್ಥ್ಯವನ್ನು ಇಡೀ ವಿಶ್ವಕ್ಕೆ ತಿಳಿಸಿದ
ಕಾರ್ಯಾಚರಣೆ ಇದು. ಪಾಕಿಸ್ತಾನ ಸೇನೆಯ ಆಶ್ರಯದಲ್ಲಿ, ನಿರ್ಭಯವಾಗಿ ಉಗ್ರ ಚಟುವಟಿಕೆ
ನಡೆಸುತ್ತಿದ್ದ ಭಯೋತ್ಪಾದಕರಿಗೆ ಇದು ಮರ್ವಘಾತ ನೀಡಿತ್ತು. ಅತ್ಯಂತ ಅಪಾಯಕಾರಿ
ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ನಡೆಸಿ, ಉಗ್ರರಿಗೆ ಸಿಂಹಸ್ವಪ್ನವಾಗಿ ಕಾಡಿತ್ತು.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅಂದಿನ ರಕ್ಷಣಾ ಸಚಿವರಾಗಿದ್ದರು.

*ದಾಳಿ ನಡೆದಿದ್ದು ಹೀಗೆ….*

2016 ಸೆ. 28ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೈನಿಕರ ತಂಡ ದಾಳಿಗೆ ಸನ್ನದ್ಧವಾಗಿ ಗಡಿ
ಪ್ರದೇಶದತ್ತ ಹೊರಟಿತು. ಕಮಾಂಡೋಗಳು 10 ಗಂಟೆ ನಡೆದು ಗಡಿ ತಲುಪಿದರು. ಪಾಕ್ ಆಕ್ರಮಿತ
ಕಾಶ್ಮೀರದಲ್ಲಿ 3 ಕಿಮೀ ಗಡಿಯೊಳಗೆ ಕ್ರಮಿಸಿದ್ದರು. ಉತ್ತರ ಕಾಶ್ಮೀರದ ನೌಗಾಮ್ ಸೆಕ್ಟರ್
ಮತ್ತು ಪೂಂಛ್ ಜಿಲ್ಲೆಯ ಗಡಿಯ ಮೂಲಕ ತೆರಳಿದ್ದ ಕಮಾಂಡೋಗಳು ತಡರಾತ್ರಿ 1.45ರ ಸುಮಾರಿಗೆ
ನಿಗದಿತ ಪ್ರದೇಶ ತಲುಪಿದ್ದರು. ಒಂದೇ ಸಮಯದಲ್ಲಿ 7 ಉಗ್ರ ನೆಲೆಗಳ ಮೇಲೆ ದಾಳಿ
ನಡೆಸಿದ್ದರು. ಸ್ವೀಡನ್​ನಲ್ಲಿ ವಿನ್ಯಾಸಗೊಳಿಸಿರುವ ಕಾರ್ಲ್ ಗುಸ್ತಾವ್ ರಾಕೆಟ್ ಲಾಂಚರ್
ಬಳಸಿತ್ತು. ಸೆ. 29ರ ಸೂರ್ಯೋದಯಕ್ಕೂ ಮೊದಲು ಕಮಾಂಡೋಗಳು ಶಿಬಿರಕ್ಕೆ ಮರಳಿದ್ದರು.
ಬೆಳಗ್ಗೆ 5 ಗಂಟೆಯ ಹೊತ್ತಿಗೆ ಸೇನೆಯ ಮೂರೂ ವಿಭಾಗದ ಮುಖ್ಯಸ್ಥರು ರಕ್ಷಣಾ ಸಚಿವ ಮನೋಹರ
ಪರಿಕ್ಕರ್​ರನ್ನು ಭೇಟಿ ಮಾಡಿದರು.

*ಪರಾಕ್ರಮ ಪರ್ವ*

ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಕಾರ್ಯಾಚರಣೆಗೆ ಎರಡು ವರ್ಷ ಪೂರ್ಣಗೊಂಡ
ಹಿನ್ನೆಲೆಯಲ್ಲಿ ಸೇನೆ ಆಯೋಜಿಸಿರುವ ‘ ಪರಾಕ್ರಮ ಪರ್ವ’ ಪ್ರದರ್ಶನಕ್ಕೆ ಜೋಧಪುರದಲ್ಲಿ
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಸೇನಾ ನೆಲೆಯಲ್ಲಿನ ಬ್ಯಾಟಲ್ ಆಕ್ಸ್
ಮೈದಾನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕೋರುವ ಸಂದೇಶಕ್ಕೆ ಪ್ರಧಾನಿ ಸಹಿ
ಹಾಕಿದರು. ಕೊನಾರ್ಕ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಭಾರತೀಯ ರಕ್ಷಣಾ
ಪಡೆಯ ಮೂರೂ ವಿಭಾಗದ ಮುಖ್ಯಸ್ಥರು, ರಕ್ಷಣಾ ಸಚಿವರು ಪ್ರಧಾನಿ ನೇತೃತ್ವದಲ್ಲಿ ಕಂಬೈನ್ಡ್
ಕಮಾಂಡರ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

*ಮತ್ತೊಂದು ದಾಳಿಗೂ ಸಿದ್ಧ*

2016 ಅ.5ರಂದು ರಕ್ಷಣಾ ವಿಚಾರಗಳ ಸಂಸದೀಯ ಸ್ಥಾಯಿ ಸಮಿತಿಗೆ ಸೇನಾ ಮುಖ್ಯಸ್ಥ ಬಿಪಿನ್
ರಾವತ್ ಸರ್ಜಿಕಲ್ ದಾಳಿ ನಡೆದ ಬಗ್ಗೆ ಮಾಹಿತಿ ನೀಡಿದರು. ಗಡಿ ನಿಯಂತ್ರಣ ರೇಖೆಯಲ್ಲಿ
ಜಮಾವಣೆಗೊಂಡಿದ್ದ ಉಗ್ರರು, ಗುಪ್ತಚರ ವರದಿ, ಕಾರ್ಯಾಚರಣೆ ರೂಪುರೇಷೆ ಮತ್ತು ದಾಳಿಯಿಂದ
ಪಾಕ್​ಗೆ ಸಂಭವಿಸಿದ ನಷ್ಟದ ಬಗ್ಗೆ ವಿವರಿಸಿದರು. ಅಗತ್ಯಬಿದ್ದರೆ ಮತ್ತೆ ಸರ್ಜಿಕಲ್ ದಾಳಿಗೆ
ಸೇನೆ ಸಿದ್ಧ ಎಂದು ರಾವತ್ ಹೇಳಿದ್ದರು.

*ದಾಳಿ ನಡೆದಿದ್ದ ಪ್ರದೇಶ*

ಪಾಕ್​ನ ಗಡಿ ನಿಯಂತ್ರಣ ರೇಖೆ ಬಳಿಯ ಗ್ರಾಮಗಳಾದ ಭಿಂಬೆರ್, ಕೆಲ್, ಲಿಪಾ ಸೆಕ್ಟರ್

*ದಾಳಿ ಪರಿಣಾಮ*

38 ಉಗ್ರರು, ಇಬ್ಬರು ಪಾಕಿಸ್ತಾನ ಯೋಧರು ಹತ

*ರಾಜಕೀಯ ಕೆಸರೆರಚಾಟ*

ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಜಿಕಲ್
ದಾಳಿ ನಡೆಸಿದ್ದಕ್ಕೆ ಸಾಕ್ಷ್ಯ ನೀಡಿ ಎಂದು ಕಾಂಗ್ರೆಸ್ ಸಹಿತ ಪ್ರತಿಪಕ್ಷಗಳು ಆರೋಪ
ಮಾಡಿದ್ದವು. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಕೆಲ ತಿಂಗಳ ಬಳಿಕ ಕೇಂದ್ರ
ಸರ್ಕಾರ ದಾಳಿಯ ವಿಡಿಯೋ ಬಿಡುಗಡೆ ಮಾಡಿ, ಗೊಂದಲ ನಿವಾರಣೆ ಮಾಡಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...