ನವದೆಹಲಿ: ಸುಪ್ರೀಂಕೋರ್ಟ್ನ 46ನೇ ಮುಖ್ಯನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ನೇಮಿಸಿದ್ದಾರೆ.
ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿರುವ ಗೊಗೊಯ್ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಿಜೆಐ ದೀಪಕ್ ಮಿಶ್ರಾ ಅವರ ಶಿಫಾರಸು ಮಾಡಿದ್ದರು.
ಅಕ್ಟೋಬರ್ 2 ರಂದು ಹಾಲಿ ಸಿಜೆಐ ದೀಪಕ್ ಮಿಶ್ರಾ ಅವರು ನಿವೃತ್ತಿಯಾಗಲಿದ್ದು, ಅಕ್ಟೋಬರ್ 3 ರಂದು ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗೊಗೊಯ್ ಅವರು 2019ರ ನವೆಂಬರ್ 17ರವರೆಗೆ ಸೇವಾವಧಿ ಹೊಂದಿದ್ದಾರೆ.
ಗುವಾಹಟಿ ಹೈಕೋರ್ಟ್ಗೆ 2011ರಲ್ಲಿ ನ್ಯಾಯಮೂರ್ತಿಯಾಗಿ ನೇಮಕವಾದ ನ್ಯಾ.ಗೊಗೊಯ್, 2012ರಲ್ಲಿ ಸುಪ್ರೀಂ ಕೋರ್ಟ್ಗೆ ಬಡ್ತಿ ಪಡೆದಿದ್ದರು. ನಿವೃತ್ತರಾಗಿರುವ ನ್ಯಾ. ಚೆಲಮೇಶ್ವರ್ ಜತೆ ಸುದ್ದಿಗೋಷ್ಠಿ ನಡೆಸಿದ ಇತರ ನಾಲ್ವರು ಹಿರಿಯ ನ್ಯಾಯಮೂರ್ತಿಗಳಲ್ಲಿ ನ್ಯಾ. ಗೊಗೊಯ್ ಕೂಡ ಒಬ್ಬರು ಎನ್ನುವುದು ವಿಶೇಷ. (ಏಜೆನ್ಸೀಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ