ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮೋದಿ @ 69,

ನರೇಂದ್ರ ಮೋದಿ ಎಂದರೆ ಭಾರತ ಎನ್ನುವ ಮಟ್ಟಿಗೆ ವಿಶ್ವಭೂಪಟದಲ್ಲಿ ಹಿಂದುಸ್ಥಾನಕ್ಕೆ ವಿಶೇಷ ಗುರುತು ನೀಡಿದ ಸಾಧನೆಗೈದಿರುವ ಭಾರತದ ಪ್ರಧಾನಿ ಸೋಮವಾರ (ಸೆ.17) 69ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಗುಜರಾತಿನ ವಡ್​ನಗರ್​ನಿಂದ ದೆಹಲಿಯ ಒಡ್ಡೋಲಗದವರೆಗೆ ಅವರು ಸಾಗಿ ಬಂದಿರುವ ಹಾದಿ ಹಲವರಿಗೆ ಅನುಕರಣೀಯವಾದರೆ ಇನ್ನೂ ಕೆಲವರಿಗೆ ಅಚ್ಚರಿಯ ಪಥ. ಸಂಘದಿಂದ ಬೆಸೆದುಕೊಂಡ ರಾಜಕೀಯ ಹಾದಿಯಲ್ಲಿ ಬಿಜೆಪಿಯ ಸಂಘಟನೆ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ಪಕ್ಷವನ್ನು ಸಂಸತ್​ನ ಗದ್ದುಗೆಗೇರಿಸುವಲ್ಲಿ ಯಶಸ್ವಿಯಾಗಿರುವ ಮೋದಿ ಮತ್ತೊಂದು ಅವಧಿಗೂ ಮೋಡಿ ಮಾಡಲು ಅಣಿಯಾಗಿದ್ದಾರೆ. ಜನ್ಮದಿನದ ಹಿನ್ನೆಲೆಯಲ್ಲಿ ಅವರ ಜೀವನಪಥದ ಇಣುಕುನೋಟ ಇಲ್ಲಿದೆ.
ಜೀವನ ಪಥ
# 1950- ಸೆ.17ರಂದು ಗುಜರಾತಿನ ವಡ್​ನಗರದಲ್ಲಿ ಜನನ
ಅಚ್ಚರಿಗಳು…
# ಸಂನ್ಯಾಸ ಸ್ವೀಕಾರಕ್ಕಾಗಿ ಬಾಲ್ಯದಲ್ಲೇ ಹಿಮಾಲಯಕ್ಕೆ ಹೋಗಿದ್ದರು
# ಸಮಾಜ ಜೀವನದಲ್ಲೇ ಸಾಧಿಸುವ ಇಚ್ಛೆಯಿಂದ 2 ವರ್ಷದ ಬಳಿಕ ಮರಳಿದ್ದರು
# ತಾರುಣ್ಯದಲ್ಲಿ ಉತ್ತಮ ಕಬಡ್ಡಿ ಪಟು
# ಭಾಷಣದಲ್ಲಿ ಪರಿಣತ
ಪೋಷಾಕಲ್ಲೂ ಮೋಡಿ
ಉಡುಪು, ಸ್ಟೈಲ್​ನಲ್ಲೂ ಮೋಡಿ ಮಾಡಿರುವ ಮೋದಿ
ಯುವಕರಲ್ಲಿ ಕುರ್ತಾ ಕ್ರೇಜ್ ಹೆಚ್ಚಿದ್ದೇ ಇವರಿಂದ
ವಿದೇಶದಲ್ಲಿ ಸೂಟು, ಬೂಟಿನ ಮಿಂಚು
ಕುರ್ತಾ, ವಾಚ್, ಜಾಕೆಟ್ ಸೇರಿ ಹಲವು ವಸ್ತುಗಳಿಗೆ ನಮೋ ಬ್ರಾ್ಯಂಡ್
ಶಿಸ್ತಿನ ಸಿಪಾಯಿ
@ 3 ಬಾರಿ ಗುಜರಾತ್ ಸಿಎಂ, ಸದ್ಯ ಪ್ರಧಾನಿಯಾದಾಗಲೂ ಕುಟುಂಬದವರನ್ನು ಸನಿಹಕ್ಕೆ ಬಿಟ್ಟುಕೊಂಡಿಲ್ಲ.
@ ಬೆಳಗ್ಗೆಯಿಂದ ತಡರಾತ್ರಿಯವರೆಗೆ ಆಡಳಿತಾತ್ಮಕ ಹೊಣೆಗಾರಿಕೆ ನಿರ್ವಹಣೆ
@ ವಿಶ್ರಾಂತಿಗೆಂದು ಒಮ್ಮೆಯೂ ರಜೆ ತೆಗೆದುಕೊಂಡ ನಿದರ್ಶನವಿಲ್ಲ
@  ಭ್ರಷ್ಟಾಚಾರದ ಕಳಂಕವಿಲ್ಲ, ಅಭಿವೃದ್ಧಿ ರಾಜಕಾರಣದ ಹರಿಕಾರ
ಹೆಗ್ಗಳಿಕೆ: ಸ್ಪಷ್ಟ ಬಹುಮತದಿಂದ ಪ್ರಧಾನಿಯಾದ ಮೊಟ್ಟಮೊದಲ ಕಾಂಗ್ರೆಸ್ಸೇತರ ನಾಯಕ
 ವಿಶಾಲ ದೇಶವಾದ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಯಶಸ್ವಿಯಾಗಿ ಆಡಳಿತ ನಡೆಸುತ್ತಿದ್ದಾರೆ. ದೇಶದ ಆರ್ಥಿಕತೆ ಅದ್ಭುತ ರೀತಿಯಲ್ಲಿ ಪ್ರಗತಿ ಕಾಣುತ್ತಿದೆ. ಹೊಸ ಅವಕಾಶಗಳನ್ನು ತೆರೆದಿಡುತ್ತಿದೆ. ಎಲ್ಲ ನಾಗರಿಕರನ್ನು ಒಗ್ಗೂಡಿಸಿ, ದೇಶ ಮುನ್ನಡೆಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ. ಅವರು ನನ್ನ ನೆಚ್ಚಿನ ಸ್ನೇಹಿತ.
| ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...