ವಿಷಯಕ್ಕೆ ಹೋಗಿ

**ಜ್ಾನ ಕಾರಂಜಿ**::: ರಕ್ತಹೀನತೆ ಅರಿವು ಮೂಡಿಸಲು ಆರೋಗ್ಯ ಕಾರ್ಯಕರ್ತರಿಗೆ ಮೋದಿ ಕರೆ,

ನವದೆಹಲಿ: ಉತ್ತಮ ಆರೋಗ್ಯ ಮತ್ತು ಪೋಷಣೆಗೆ ಸಂಬಂಧಪಟ್ಟ ಅಂಶಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ರಾಷ್ಟ್ರೀಯ ಪೋಷಣ್​ ಅಭಿಯಾನದ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದರು.
ದೇಶದಲ್ಲಿ ರಕ್ತಹೀನತೆ ಬಹುದೊಡ್ಡ ಸಮಸ್ಯೆಯಾಗಿದೆ. ತುಂಬ ಜನ ಅನೀಮಿಯಾದಿಂದ ಬಳಲುತ್ತಿದ್ದಾರೆ. ಅಂಥವರು ಅಯೋಡಿನ್​ಯುಕ್ತ ಉಪ್ಪು ಹಾಗೂ ಕಬ್ಬಿಣಾಂಶ ಜಾಸ್ತಿ ಇರುವ ಆಹಾರಗಳನ್ನು ಸೇವಿಸಲು ಆರೋಗ್ಯ ಕಾರ್ಯಕರ್ತರು ಅರಿವು ಮೂಡಿಸಬೇಕು. ರಕ್ತಹೀನತೆಯನ್ನು ನಿಯಂತ್ರಿಸುವ ಕೆಲಸವಾಗಬೇಕು. ರಕ್ತಹೀನತೆ ಪ್ರಮಾಣ ಪ್ರತಿ ವರ್ಷ ಒಂದು ಪರ್ಸೆಂಟ್​ನಷ್ಟು ಮಾತ್ರ ಕಡಿಮೆಯಾಗುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಪೋಷಣ್​ ಅಭಿಯಾನದಡಿ ಮೂರು ಹಂತದಲ್ಲಿ ಇದನ್ನು ನಿಯಂತ್ರಿಸಲು ನಿರ್ಧರಿಸಿದೆ ಎಂದು ಹೇಳಿದ ಮೋದಿ, ಆರೋಗ್ಯ ಕಾರ್ಯಕರ್ತರು ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ ಗರ್ಭಿಣಿಯರ ಆರೋಗ್ಯ, ಅವರಲ್ಲಿ ಕಾಡುವ ರಕ್ತಹೀನತೆ ನಿವಾರಿಸಲು, ಅದರ ಬಗ್ಗೆ ತಿಳಿವಳಿಕೆ ಮೂಡಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಮಕ್ಕಳು ಆರೋಗ್ಯವಂತರಾಗಿರಬೇಕು. ಐದು ವರ್ಷದವರೆಗೆ ತುಂಬ ಸೂಕ್ಷ್ಮವಾಗಿ ಇರುತ್ತಾರೆ. ಅವರ ಆಹಾರ ಕ್ರಮದ ಕುರಿತು ಎಚ್ಚರಿಕೆ ವಹಿಸಬೇಕು. ದೇಶ ಅಭಿವೃದ್ಧಿಯಾಗಬೇಕಾದರೆ ಮಕ್ಕಳು ಸದೃಢವಾಗಿ ಬೆಳೆಯಬೇಕು ಎಂದು ಹೇಳಿದರು.
ಜಾರ್ಖಂಡದಲ್ಲಿ ಕುಟುಂಬದವರು ಸತ್ತುಹೋಗಿದೆ ಎಂದುಕೊಂಡಿದ್ದ ಮಗುವನ್ನು ಬದುಕಿಸಿದ ಆರೋಗ್ಯ ಕಾರ್ಯಕರ್ತೆ ಮನಿತಾ ದೇವಿಯನ್ನು ಪ್ರಧಾನಿ ಮೋದಿ ಸ್ಮರಿಸಿದರು. ಆಕೆ ನವಜಾತ ಶಿಶುಗಳ ಆರೋಗ್ಯ ಕಾಳಜಿ ಬಗ್ಗೆ ತರಬೇತಿ ಪಡೆದವರಾಗಿದ್ದು ಮಗುವನ್ನು ಉಳಿಸಿದ್ದರು. ಹಾಗೇ ಅನೇಕ ವೈದ್ಯರು ಹಣ ತೆಗೆದುಕೊಳ್ಳದೆ ಬಡ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿದ್ದು ಅವರನ್ನೂ ಕೂಡ ಶ್ಲಾಘಿಸಿದರು.
ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಂಗನವಾಡಿ ಕಾರ್ಯಕರ್ತೆಯರ ತಿಂಗಳ ಸಹಾಯಧನವನ್ನು 3,000 ರೂ.ದಿಂದ 4,500 ರೂ. ಹಾಗೂ 2,250 ರೂ.ದಿಂದ 3,500 ರೂ. ಗೆ ಹಾಗೂ ಸಹಾಯಕಿಯರ ಸಹಾಯಧನವನ್ನು 1,500 ರೂ.ದಿಂದ 2,200 ರೂ.ಗೆ ಹೆಚ್ಚಿಸುವುದಾಗಿ ತಿಳಿಸಿದರು.
ಕನ್ನಡದಲ್ಲೇ ನಮಸ್ಕಾರ
ರಾಷ್ಟ್ರೀಯ ಪೋಷಣ ಅಭಿಯಾನದ ಮಾಸಾಚರಣೆ ನಿಮಿತ್ತ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಅ​ನ್ನು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎನ್​ಐಸಿ ಸೆಂಟರ್​ನಲ್ಲಿ ಏರ್ಪಡಿಸಲಾಗಿತ್ತು. ಯಾದಗಿರಿಯ ವನಜಾಕ್ಷಿ ಹಾಗೂ ಮಲ್ಲಮ್ಮ ಜತೆ ಮೋದಿಯವರು ಸಂವಾದ ನಡೆಸಿದರು. ಮಾತಿಗೂ ಮೊದಲು ಕನ್ನಡದಲ್ಲೇ ನಮಸ್ಕಾರ ಹೇಳಿದ್ದು ವಿಶೇಷವಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...