ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಹೆಚ್ಚುತ್ತಿದೆ ಪಾಕ್ ಅಣ್ವಸ್ತ್ರ ಸಂಗ್ರಹ, ಭಾರತಕ್ಕೆ ಭದ್ರತಾ ಆತಂಕ

ಭಾರತಕ್ಕೆ ಭದ್ರತಾ ಆತಂಕ ಉಂಟು ಮಾಡುತ್ತಿರುವ ಪಾಕಿಸ್ತಾನ ತ್ವರಿತಗತಿಯಲ್ಲಿ ಅಣ್ವಸ್ತ್ರಗಳನ್ನು ಉತ್ಪಾದಿಸುತ್ತಿದ್ದು, ಇದು ಹೀಗೆಯೇ ಮುಂದುವರಿದರೆ ವಿಶ್ವದ 5ನೇ ಅಣ್ವಸ್ತ್ರ ರಾಷ್ಟ್ರವಾಗಿ ಪಾಕಿಸ್ತಾನ ಹೊರಹೊಮ್ಮಬಹುದು ಎಂದು ಅಮೆರಿಕದ ಭದ್ರತಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಪಾಕಿಸ್ತಾನ ಬಳಿಯಿರುವ ಅಣ್ವಸ್ತ್ರಗಳ ಸಂಖ್ಯೆ – 140ರಿಂದ 150
2025ರ ಸುಮಾರಿಗೆ ಪಾಕ್ ಹೊಂದಲಿರುವ ಅಂದಾಜು ಅಣ್ವಸ್ತ್ರ – 220ರಿಂದ 250
ಮುಂದಿನ ಒಂದು ದಶಕದಲ್ಲಿ ಪಾಕ್ ಅಣ್ವಸ್ತ್ರ ಅಂದಾಜು – 350
ದಶಕದಲ್ಲಿ 3ನೇ ಸ್ಥಾನಕ್ಕೆ?
ಅತಿ ಹೆಚ್ಚು ಅಣ್ವಸ್ತ್ರಗಳನ್ನು ಹೊಂದಿರುವ ರಾಷ್ಟ್ರಗಳಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಏರಿದರೂ ಅಚ್ಚರಿಯಿಲ್ಲ ಎಂದು ಅಮೆರಿಕದ ಭದ್ರತಾ ತಜ್ಞರು ಹೇಳಿದ್ದಾರೆ. ಇದೇ ವೇಗದಲ್ಲಿ ಅಣ್ವಸ್ತ್ರ ಉತ್ಪಾದನೆ ಮುಂದುವರಿದರೆ ಒಂದು ದಶಕಗಳಲ್ಲಿ ಪಾಕಿಸ್ತಾನ 350 ಅಣ್ವಸ್ತ್ರಗಳನ್ನು ಹೊಂದುವ ಸಾಧ್ಯತೆಯಿದೆ. ಆಗ ಅಣ್ವಸ್ತ್ರ ಶಕ್ತಿಯಲ್ಲಿ ಪಾಕಿಸ್ತಾನ ವಿಶ್ವದಲ್ಲೇ ಮೂರನೇ ಸ್ಥಾನಕ್ಕೆ ತಲುಪಲಿದೆ. ಇದರಿಂದ ಭಾರತ ಸಹಿತ ಅಮೆರಿಕಕ್ಕೆ ಕೂಡ ಭದ್ರತಾ ಆತಂಕ ಎದುರ ಆಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಪಾಕಿಸ್ತಾನಿ ನ್ಯೂಕ್ಲಿಯರ್ ಫೋರ್ಸ್ 2018
ಪಾಕಿಸ್ತಾನದ ಬಳಿ ಪ್ರಸ್ತುತ 140-150 ಅಣ್ವಸ್ತ್ರಗಳಿರುವ ಸಾಧ್ಯತೆಯಿದೆ. 2025ರ ಸುಮಾರಿಗೆ ಪಾಕಿಸ್ತಾನ 220-250 ಅಣ್ವಸ್ತ್ರ ಕ್ಷಿಪಣಿಗಳನ್ನು ಹೊಂದುವ ಸಾಧ್ಯತೆಯಿದೆ. 1999ರಲ್ಲಿ ನಡೆದಿದ್ದ ಅಧ್ಯಯನ ಪ್ರಕಾರ ಪಾಕಿಸ್ತಾನ 2020ರ ವೇಳೆಗೆ 60-80 ಅಣ್ವಸ್ತ್ರಗಳನ್ನು ಹೊಂದಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹಲವು ವರ್ಷಗಳ ಹಿಂದೆಯೇ ಪಾಕಿಸ್ತಾನ ಈ ಮಿತಿಯನ್ನು ದಾಟಿದೆ ಎಂದು ತಜ್ಞರು ನೀಡಿರುವ ‘ಪಾಕಿಸ್ತಾನಿ ನ್ಯೂಕ್ಲಿಯರ್ ಫೋರ್ಸ್ 2018’ ಎಂಬ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪಾಕಿಸ್ತಾನದಲ್ಲಿ ಹಲವು ಅಣ್ವಸ್ತ್ರ ಯೋಜನೆಗಳು ಇನ್ನೂ ಅಭಿವೃದ್ಧಿ ಹಂತದಲ್ಲಿವೆ. ಪ್ಲುಟೊನಿಯಂ ಉತ್ಪಾದನೆಯ ನಾಲ್ಕು ರಿಯಾಕ್ಟರ್​ಗಳನ್ನು ಸ್ಥಾಪಿಸಲಾಗುತ್ತಿದೆ. ಅಣ್ವಸ್ತ್ರ ತಯಾರಿಕೆಗೆ ಅಗತ್ಯವಾಗಿರುವ ಯುರೇನಿಯಂ ಸಂಸ್ಕರಣ ಘಟಕಗಳನ್ನು ವಿಸ್ತರಿಸಲಾಗುತ್ತಿದೆ. ಇನ್ನು 10 ವರ್ಷ ಅಣ್ವಸ್ತ್ರಗಳನ್ನು ಉತ್ಪಾದಿಸಲು ಬೇಕಾದ ಕಚ್ಚಾ ಸಾಮಗ್ರಿಗಳನ್ನು ಪಾಕಿಸ್ತಾನ ಸಂಗ್ರಹಿಸಿಟ್ಟುಕೊಂಡಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.
ಉಪಗ್ರಹ ಚಿತ್ರದೊಂದಿಗೆ ವಿಶ್ಲೇಷಣೆ
ಖಾಸಗಿ ಉಪಗ್ರಹ ತೆಗೆದ ಸಾವಿರಾರು ಚಿತ್ರಗಳನ್ನು ರಕ್ಷಣಾ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ. ಸೇನಾನೆಲೆ ಹಾಗೂ ವಾಯು ನೆಲೆಯಲ್ಲಿನ ವಿದ್ಯಮಾನ ವನ್ನು ಅಧ್ಯಯನ ನಡೆಸಲಾಗಿದೆ. ಮೊಬೈಲ್ ಲಾಂಚರ್​ಗಳು, ಭೂಗತ ಶಸ್ತ್ರ ಸಂಗ್ರಹಾಗಾರಗಳು ಇರುವುದು ಬೆಳಕಿಗೆ ಬಂದಿದೆ. ಅಣ್ವಸ್ತ್ರಗಳ ಬಳಕೆಗಾಗಿ ಇದನ್ನು ತಯಾರಿಸಲಾಗಿದೆ ಎಂದು ವರದಿಯಲ್ಲಿ ಶಂಕಿಸಲಾಗಿದೆ. ಜತೆಗೆ ಇವುಗಳ ಸಾಮರ್ಥ್ಯ ತ್ವರಿತ ಗತಿಯಲ್ಲಿ ವಿಸ್ತಾರವಾಗುತ್ತಿರುವುದು ಅಧ್ಯಯನದಲ್ಲಿ ಕಂಡುಬಂದಿದೆ. ಆದರೆ ಯಾವ ಭಾಗದಲ್ಲಿ ಇವುಗಳನ್ನು ನಿಯೋಜನೆ ಮಾಡಲಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...